Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...