Homeಮುಖಪುಟಮಾಂಸದ ವ್ಯಾಪಾರಿಯನ್ನು ಸುಳ್ಳು ಗೋಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಸಂಚು : ಸ್ವಘೋಷಿತ ಗೋರಕ್ಷಕನ ಬಂಧನ

ಮಾಂಸದ ವ್ಯಾಪಾರಿಯನ್ನು ಸುಳ್ಳು ಗೋಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಸಂಚು : ಸ್ವಘೋಷಿತ ಗೋರಕ್ಷಕನ ಬಂಧನ

- Advertisement -
- Advertisement -

ಸುಳ್ಳು ಗೋಹತ್ಯೆ ಪ್ರಕರಣದಲ್ಲಿ ಮಾಂಸದ ವ್ಯಾಪಾರಿಯೊಬ್ಬರನ್ನು ಸಿಲುಕಿಸಲು ಸಂಚು ರೂಪಿಸಿದ್ದ ಸಹರಾನ್‌ಪುರದ ಸ್ವಘೋಷಿತ ಗೋರಕ್ಷಕನನ್ನು ಉತ್ತರ ಪ್ರದೇಶ ಪೊಲೀಸರು ಮಂಗಳವಾರ (ಮಾ.11) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವಿಶ್ ಸಿಂಗ್ ಕಾಂಬೋಜ್ (36) ಬಂಧಿತ ವ್ಯಕ್ತಿ. ಈತ ಟಿಪ್ಪು ಖುರೇಷಿ ಎಂಬ ಮಾಂಸದ ವ್ಯಾಪಾರಿಯಿಂದ 50,000 ರೂಪಾಯಿ ಹಣ ಪಡೆದು, ಆತನ ಜೊತೆ ಈ ಹಿಂದೆ ವ್ಯಾಪಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯನ್ನು ಸುಳ್ಳು ಗೋಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

“ಬಂಧಿತ ವಿಶ್ ಸಿಂಗ್ ತನ್ನ ಸಹಚರರೊಂದಿಗೆ ಮಂಗಳವಾರ ಸಹರಾನ್‌ಪುರದ ಪ್ರಮುಖ ಹೆದ್ದಾರಿಯಲ್ಲಿ ದನದ ಅವಶೇಷಗಳನ್ನು ಇರಿಸಿ, ಗೋಹತ್ಯೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟಿಸಿದ್ದ. ಗೋವಿನ ಅವಶೇಷಗಳು ಬಹಳ ದಿನಗಳ ಹಿಂದಿನದು ಎಂದು ನಮಗೆ ಮನವರಿಕೆಯಾಗಿ ಅನುಮಾನ ಬಂದಿತು. ನಂತರ ನಾವು ‘ಹಿಂದೂ ಯೋಧ ಪರಿವಾರ’ ಸಂಘಟನೆಯ ಸಂಸ್ಥಾಪಕ ವಿಶ್ ಸಿಂಗ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆವು. ಈ ವೇಳೆ ಖುರೇಷಿಯ ಸೂಚನೆಯ ಮೇರೆಗೆ ಗೋವಿನ ಅಸ್ಥಿಪಂಜರವನ್ನು ರಸ್ತೆಯಲ್ಲಿರಿಸಿ ಪ್ರತಿಭಟನೆ ನಡೆಸಿರುವುದಾಗಿ ಆತ ಒಪ್ಪಿಕೊಂಡಿದ್ದಾರೆ ಎಂಬುದಾಗಿ ಸರಸವಾ ಪೊಲೀಸ್ ಠಾಣೆಯ ಎಸ್‌ಹೆಚ್ಒ ನರೇಂದರ್ ಶರ್ಮಾ ಹೇಳಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

ಖುರೇಷಿ ಮತ್ತು ಆತ ಗುರಿಯಾಗಿಸಿಕೊಂಡ ವ್ಯಕ್ತಿ ಇಬ್ಬರೂ ಮಾಂಸದ ವ್ಯಾಪಾರಿಗಳು. ಆತ ಮಾಂಸದ ವ್ಯವಹಾರದಲ್ಲಿ ಹೆಚ್ಚು ಯಶಸ್ವಿಯಾಗಿದ್ದ ಎಂದು ಖುರೇಷಿ, ವಿಶ್ ಸಿಂಗ್ ಕಾಂಬೋಜ್ ಮೂಲಕ ಆತನನ್ನು ಜೈಲಿಗೆ ಕಳಿಸಲು ಸಂಚು ರೂಪಿಸಿದ್ದ. ಗೋಹತ್ಯೆ ಪ್ರಕರಣಗಳ ಸೂಕ್ಷ್ಮತೆಯನ್ನು ಗಮನಿಸಿದರೆ, ನ್ಯಾಯಾಲಯಗಳು ಜಾಮೀನು ನೀಡಲು ಕೂಡ ಹಿಂಜರಿಯುತ್ತವೆ ಎಂಬುವುದನ್ನು ಆತ ಗಮನಿಸಿದ್ದ. ವಿಶ್ ಸಿಂಗ್ ಬಂಧನದ ಬಳಿಕ ಖುರೇಷಿ ಪರಾರಿಯಾಗಿದ್ದಾನೆ. ಆತನ ಬಂಧನದ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಬಂಧಿತ ಕಾಂಬೋಜ್ ವಿರುದ್ದ ಗುಂಡಾ ಕಾಯ್ದೆ, ಗಲಭೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿವೆ. ಶಾಂತಿ ಭಂಗ ಮತ್ತು ಸುಳ್ಳು ಮಾಹಿತಿ ಒದಗಿಸಿದ್ದಕ್ಕಾಗಿ ಬಿಎನ್ಎಸ್ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದು ಸಹರಾನ್‌ಪುರ ಎಸ್ಎಸ್ಪಿ ರೋಹಿತ್ ಸಿಂಗ್ ಸಜ್ವಾನ್ ತಿಳಿಸಿದ್ದಾರೆ.

ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...