Homeಮುಖಪುಟಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ

ಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ದೆಹಲಿಯ ಮಹಿಪಾಲ್‌ಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಕೈಲಾಶ್, ಇನ್‌ಸ್ಟಾಗ್ರಾಮ್‌ನಲ್ಲಿ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ದೆಹಲಿ ಪೊಲೀಸರು ಇಬ್ಬರೂ ಶಂಕಿತರನ್ನು ಬಂಧಿಸಿ, ಘಟನೆಯ ಬಗ್ಗೆ ಬ್ರಿಟಿಷ್ ಹೈಕಮಿಷನ್‌ಗೆ ಮಾಹಿತಿ ನೀಡಿದ್ದಾರೆ. “ದೆಹಲಿಯ ಮಹಿಪಾಲಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಸಹಚರನನ್ನು ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ ”ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಸಾಮಾಜಿಕ ಮಾಧ್ಯಮದ ಮೂಲಕ ಆ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ ಮಹಿಳೆ, ಆತನನ್ನು ಭೇಟಿಯಾಗಲು ಯುಕೆಯಿಂದ ದೆಹಲಿಗೆ ಬಂದಿದ್ದಳು. ಘಟನೆಯ ಬಗ್ಗೆ ಬ್ರಿಟಿಷ್ ಹೈಕಮಿಷನ್‌ಗೆ ಮಾಹಿತಿಯನ್ನು ನೀಡಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್‌ನ ಲಿಫ್ಟ್‌ನಲ್ಲಿ ಮನೆಗೆಲಸದ ಸಿಬ್ಬಂದಿಯೊಬ್ಬರು ಆಕೆಗೆ ಮೊದಲು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಸಾಮಾಜಿಕ ಜಾಲತಾಣದಿಂದ ಪರಿಚಿತನಾಗಿದ್ದ ವ್ಯಕ್ತಿಯಿಂದ ಹೋಟೆಲ್ ಕೋಣೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ವಸುಂಧರ ನಿವಾಸಿ ಕೈಲಾಶ್‌ಗೆ ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಮಾಡುವ ಒಲವು ಇದೆ. ಕೆಲವು ತಿಂಗಳ ಹಿಂದೆ, ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ಲಂಡನ್ ನಿವಾಸಿಯಾದ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿದರು. ಆ ಮಹಿಳೆ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಿದ್ದಾಗ ಕೈಲಾಶ್ ಅವರನ್ನು ಸಂಪರ್ಕಿಸಿ ತನ್ನನ್ನು ಭೇಟಿಯಾಗಲು ಆಹ್ವಾನಿಸಿದಳು. ಆದಾಗ್ಯೂ ಕೈಲಾಶ್ ಪ್ರಯಾಣಿಸಲು ತನ್ನ ಅಸಾಮರ್ಥ್ಯವನ್ನು ವ್ಯಕ್ತಪಡಿಸಿದನು ಮತ್ತು ಬದಲಿಗೆ ದೆಹಲಿಗೆ ಭೇಟಿ ನೀಡುವಂತೆ ಅವಳನ್ನು ಕೇಳಿಕೊಂಡನು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಂಗಳವಾರ ಸಂಜೆ, ಮಹಿಳೆ ದೆಹಲಿಗೆ ಆಗಮಿಸಿ ಮಹಿಪಾಲ್‌ಪುರದ ಹೋಟೆಲ್‌ನಲ್ಲಿ ವಾಸಿಸುತ್ತಿದ್ದರು. ಆಕೆಯ ಆಹ್ವಾನಕ್ಕೆ ಓಗೊಟ್ಟು, ಕೈಲಾಶ್ ತನ್ನ ಸ್ನೇಹಿತ ವಾಸಿಮ್ ಜೊತೆಗೂಡಿ, ಹೋಟೆಲ್‌ನಲ್ಲಿ ಆಕೆಯನ್ನು ಭೇಟಿ ಮಾಡಿದನು. ಮೂವರು ಮದ್ಯ ಸೇವಿಸಿ ಊಟ ಮಾಡಿ ನಂತರ ಆಕೆಯ ಕೋಣೆಗೆ ತೆರಳಿದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...