Homeಮುಖಪುಟಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕುಸಿದು ಬಿದ್ದರು ಎಂದು ನಿಝಾಮಾಬಾದ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ)  ಎಲ್. ರಾಜಾ ವೆಂಕಟ್ ರೆಡ್ಡಿ ಶುಕ್ರವಾರ (ಮಾರ್ಚ್ 14, 2025) ತಿಳಿಸಿದ್ದಾರೆ.

ಜಗತ್ಯಾಲ್‌ನಲ್ಲಿ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ನಡೆಸುತ್ತಿದ್ದ ಸಂಪತ್, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಕಳುಹಿಸುತ್ತಿದ್ದರು. ಅಲ್ಲಿಗೆ ಹೋದ ಯುವಕರನ್ನು ಉದ್ಯೋಗದಾತರು ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪಗಳಿದ್ದವು. ಸಂಪತ್‌ರಿಂದ ಈ ರೀತಿಯ ವಂಚನೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬರು ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತನಿಖೆಯ ಫಲಿತಾಂಶಗಳ ಆಧಾರದ ಮೇಲೆ, ಸಂಪತ್ ಅವರನ್ನು ಮಾರ್ಚ್ 4ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತನಿಖಾಧಿಕಾರಿಗಳು ಬುಧವಾರ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ತನಿಖೆಯ ಭಾಗವಾಗಿ, ಸೈಬರ್ ಕ್ರೈಮ್ ಪೊಲೀಸ್ ತಂಡಗಳು ಗುರುವಾರ ಸಂಪತ್ ಅವರನ್ನು ಜಗತ್ಯಾಲ್‌ಗೆ ಕರೆದೊಯ್ದಿದ್ದರು. ಶೋಧದ ಸಮಯದಲ್ಲಿ ಅವರಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಅವರನ್ನು ನಿಝಾಮಾಬಾದ್‌ಗೆ ವಾಪಸ್ ಕರೆತರಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರ ದೇಹದ ಎಡಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. “ಆಸ್ಪತ್ರೆಯೊಳಗೆ ವೈದ್ಯರ ಬಳಿಗೆ ಅವರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ನಾವು ರೆಕಾರ್ಡ್ ಮಾಡಿದ್ದೇವೆ” ಎಂದು ಎಸಿಪಿ ಹೇಳಿದ್ದಾರೆ.

ಸಂಪತ್ ಅವರು ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10.25 ರ ಸುಮಾರಿಗೆ ಅವರು ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಆರ್ ಮೂಲಕ ಸಂಪತ್ ಅವರನ್ನು ಉಳಿಸಲು ಪ್ರಯತ್ನಿಸಲಾಯಿತು. ಆದರೆ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆಗಾಗಿ ಮನವಿ ಸಲ್ಲಿಸಲಾಗಿದೆ. ವೈದ್ಯರ ತಂಡ ಶವಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವಿಡಿಯೊ-ರೆಕಾರ್ಡ್ ಮಾಡಲಾಗಿದೆ.

ಪೊಲೀಸರ ವಿರುದ್ದ ಚಿತ್ರಹಿಂಸೆ ಆರೋಪ

ಸಂಪತ್ ಸಾವಿಗೆ ಕೆಲವೇ ಗಂಟೆಗಳ ಮೊದಲು ತೀವ್ರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ಆದರೆ, ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದಿರುವ ಪೊಲೀಸರು, ತಮ್ಮ ಮೇಲಿನ ಆರೋಪ ಅಲ್ಲಗಳೆದಿದ್ದಾರೆ. ಆದರೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

“ಮಾರ್ಚ್ 13ರ ಸಂಜೆ ತಾನು ಸಂಪತ್ ಅವರನ್ನು ಭೇಟಿಯಾಗಲು ಠಾಣೆಗೆ ಹೋದಾಗ ಪೊಲೀಸರು ಅವರ ಕಾಲಿಗೆ ಲಾಠಿಯಿಂದ ಹೊಡೆಯುತ್ತಿದ್ದರು. “ಪೊಲೀಸರು ನನ್ನ ಮೇಲೆ ಬಿದ್ದು ತೀವ್ರವಾಗಿ ಹೊಡೆಯುತ್ತಿದ್ದಾರೆ. ನನಗೆ ಸಹಿಸಲಾಗುತ್ತಿಲ್ಲ” ಎಂದು ಸಂಪತ್ ಹೇಳಿದರು. ಅವರು ನಡೆಯಲು ಕಷ್ಟಪಡುತ್ತಿದ್ದರು” ಎಂದು ಸಂಪತ್ ಸಹೋದರ ಹೇಳಿದ್ದಾಗಿ ವರದಿಯಾಗಿದೆ.

ಸಂಪತ್ ಹಿಂದುಳಿದ ವರ್ಗದ ವಡ್ಡೇರ ಸಮುದಾಯಕ್ಕೆ ಸೇರಿದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...