Homeಅಂತರಾಷ್ಟ್ರೀಯಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

- Advertisement -
- Advertisement -

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ.

“ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ ಇಲ್ಲ” ಎಂದು ಈ-ಮೇಲ್‌ನಲ್ಲಿ ಹೇಳಲಾಗಿದೆ.

ವಾಯ್ಸ್‌ ಆಫ್‌ ಅಮೆರಿಕ ಸಂಸ್ಥೆಯ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ನೌಕರರು. ಅದರಲ್ಲೂ ಇಂಗ್ಲಿಷೇತರ ಭಾಷೆಗಳ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ಮೇಲೆ ನೇಮಕಗೊಂಡವರು. ಅವರ ನಿಖರ ಸಂಖ್ಯೆ ಎಷ್ಟು ಎಂಬುವುದು ಸದ್ಯಕ್ಕೆ ಗೊತ್ತಾಗಿಲ್ಲ.

ಹೆಚ್ಚಿನ ಗುತ್ತಿಗೆ ನೌಕರರು ಅಮೆರಿಕದ ನಾಗರಿಕರಲ್ಲ. ಅಂದರೆ, ಅವರು ಅಮೆರಿಕದಲ್ಲಿ ಉಳಿಯಲು ವೀಸಾಗಳಿಗಾಗಿ ತಮ್ಮ ಕೆಲಸವನ್ನು ಅವಲಂಬಿಸಿದ್ದರು. ಕೆಲಸ ಕಳೆದುಕೊಂಡರೆ ಅವರು ದೇಶ ಬಿಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕಾನೂನು ರಕ್ಷಣೆ ಹೊಂದಿರುವ, ವಾಯ್ಸ್‌ ಆಫ್ ಅಮೆರಿಕದ ಪೂರ್ಣಾವಧಿ ಸಿಬ್ಬಂದಿಯನ್ನು ತಕ್ಷಣ ವಜಾಗೊಳಿಸಲು ಸಾಧ್ಯವಿಲ್ಲ. ಆದರೆ, ಅವರೆಲ್ಲ ಆಡಳಿತಾತ್ಮಕ ರಜೆಯಲ್ಲಿದ್ದಾರೆ ಮತ್ತು ಕೆಲಸ ಮಾಡದಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಎರಡನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಸ್ಥಾಪಿಸಲಾದ ವಾಯ್ಸ್ ಆಫ್ ಅಮೆರಿಕ, ಮಾಧ್ಯಮ ಸ್ವಾತಂತ್ರ್ಯವಿಲ್ಲದ ದೇಶಗಳನ್ನು ತಲುಪುವ ಧ್ಯೇಯದೊಂದಿಗೆ ಪ್ರಪಂಚದಾದ್ಯಂತ 49 ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.

ವಾಯ್ಸ್‌ ಆಮೆರಿಕ ಸೇರಿದಂತೆ ಅಮೆರಿಕದ ನೆರವು ಪಡೆಯುತ್ತಿರುವ ರೆಡಿಯೊ ಫ್ರಿ ಯೂರೋಪ್, ರೆಡಿಯೊ ಲಿಬರ್ಟಿ, ರೆಡಿಯೊ ಫ್ರಿ ಏಷ್ಯಾ, ರೆಡಿಯೊ ಫರ್ಡಾ, ಅಲ್ ಹುರ್ರಾ ಮುಂತಾದ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನೂ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 31ರಿಂದ ಅನ್ವಯವಾಗುವಂತೆ ತನ್ನನ್ನು ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಸ್ವಾತಂತ್ರ್ಯ ಮತ್ತು ತಪ್ಪು ಮಾಹಿತಿಯ ಕುರಿತು ವರದಿ ಮಾಡುವ ವಾಯ್ಸ್ ಆಫ್‌ ಅಮೆರಿಕದ ವರದಿಗಾರ ಲಿಯಾಮ್ ಸ್ಕಾಟ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...