Homeಅಂತರಾಷ್ಟ್ರೀಯಯೆಮನ್‌ ಮೇಲೆ ಅಮೆರಿಕ ವೈಮಾನಿಕ ದಾಳಿ | ಮೃತರ ಸಂಖ್ಯೆ 53ಕ್ಕೆ ಏರಿಕೆ

ಯೆಮನ್‌ ಮೇಲೆ ಅಮೆರಿಕ ವೈಮಾನಿಕ ದಾಳಿ | ಮೃತರ ಸಂಖ್ಯೆ 53ಕ್ಕೆ ಏರಿಕೆ

- Advertisement -
- Advertisement -

ಯೆಮನ್ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಹೌತಿ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ಯುಎಸ್‌ ದಾಳಿಯಲ್ಲಿ ಐವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 53 ಜನರು ಸಾವನ್ನಪ್ಪಿದ್ದಾರೆ ಮತ್ತು 98 ಜನರು ಗಾಯಗೊಂಡಿದ್ದಾರೆ” ಎಂದು ಹೌತಿ ಆರೋಗ್ಯ ಸಚಿವಾಲಯದ ವಕ್ತಾರ ಅನಿಸ್ ಅಲ್-ಅಸ್ಬಾಹಿ ​ ಸಾಮಾಜಿಕ ಜಾಲತಾಣ ​ಎಕ್ಸ್‌ನಲ್ಲಿ ಹೇಳಿದ್ದಾರೆ.

ಶನಿವಾರ ರಾತ್ರಿ ಹೌತಿ ನೆಲೆಗಳನ್ನು ಗುರಿಯಾಗಿಸಿ ಯೆಮನ್‌ನ ರಾಜಧಾನಿ ಸನಾ ಮೇಲೆ ಅಮೆರಿಕದ ಭಾರೀ ವೈಮಾನಿಕ ದಾಳಿ ನಡೆಸಿತ್ತು. ಕೆಂಪು ಸಮುದ್ರದಲ್ಲಿ ಹೌತಿಗಳು ಹಡಗುಗಳ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಕ್ರಿಯೆಯಾಗಿ ನಾವು ದಾಳಿ ಮಾಡಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಆಡಳಿತ ಹೇಳಿದೆ.

ನಮ್ಮ ದಾಳಿಯಲ್ಲಿ ಹೌತಿಯ ಕೆಲವು ಪ್ರಮುಖ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಹೇಳಿದೆ. ಆದರೆ, ಇದನ್ನು ಹೌತಿ ನಿರಾಕರಿಸಿದೆ.

ಯೆಮನ್‌ ಮೇಲೆ ಅಮೆರಿಕ ದಾಳಿ ಮುಂದುವರೆಸಿದರೆ, ಹೌತಿ ಕೆಂಪು ಸಮುದ್ರದಲ್ಲಿ ಅದರ ಹಡಗುಗಳ ಮೇಲೆ ದಾಳಿ ನಡೆಸಲಿದೆ ಎಂದು ಹೌತಿ ನಾಯಕ ಅಬ್ದುಲ್ ಮಲಿಕ್ ಅಲ್-ಹೌತಿ ಹೇಳಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಗಾಝಾ ಮೇಲಿನ ದಿಗ್ಬಂಧನವನ್ನು ತೆಗೆದು ಹಾಕುವವರೆಗೆ ಕೆಂಪು ಸಮುದ್ರದಲ್ಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದನ್ನು ಮುಂದುವರಿಸುವುದಾಗಿ ಹೌತಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ (ಮಾ.17) ಮುಂಜಾನೆ ಅಲ್ ಜೌಫ್ ಮತ್ತು ಹುದೈದಾದಲ್ಲಿ ಅಮೆರಿಕ ದಾಳಿ ನಡೆಸಿದೆ ಎಂದು ಹೌತಿಗಳು ಹೇಳಿದ್ದಾರೆ. ಆದರೆ, ಅಮೆರಿಕ ಇನ್ನೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಅನ್ನು ತನ್ನ ಶತ್ರು ಎಂದು ಪರಿಗಣಿಸುವ ಇರಾನ್ ಬೆಂಬಲಿತ ಬಂಡಾಯ ಗುಂಪು ಹೌತಿ, ರಾಜಧಾನಿ ಸನಾ ಮತ್ತು ಯೆಮೆನ್‌ನ ವಾಯುವ್ಯ ಪ್ರದೇಶವನ್ನು ನಿಯಂತ್ರಿಸುತ್ತದೆ. ಆದರೆ, ಈ ಗುಂಪು ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಸರ್ಕಾರವಲ್ಲ.

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...