Homeಮುಖಪುಟಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

ಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

- Advertisement -
- Advertisement -

ತರಕಾರಿ ಎಣ್ಣೆ ಮತ್ತು ಪಾನೀಯಗಳಂತಹ ದುಬಾರಿ ತಯಾರಿಕಾ ಆಹಾರ ಪದಾರ್ಥಗಳಿಂದಾಗಿ ಭಾರತದಲ್ಲಿ ಸಗಟು ಬೆಲೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇ. 2.38 ಕ್ಕೆ ಸ್ವಲ್ಪ ಏರಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಸರ್ಕಾರಿ ದತ್ತಾಂಶಗಳು ತೋರಿಸಿವೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯೂಪಿಐ) ಆಧಾರಿತ ಹಣದುಬ್ಬರವು ಜನವರಿಯಲ್ಲಿ ಶೇ. 2.31 ರಷ್ಟಿತ್ತು.

ಫೆಬ್ರವರಿ 2024 ರಲ್ಲಿ ಇದು ಶೇ. 0.2 ರಷ್ಟಿತ್ತು. ಫೆಬ್ರವರಿ ತಿಂಗಳಿನ ಡಬ್ಲ್ಯೂಪಿಐನಲ್ಲಿ ತಿಂಗಳಿನಿಂದ ತಿಂಗಳಿಗೆ ಬದಲಾವಣೆಯು ಜನವರಿ 2025 ಕ್ಕೆ ಹೋಲಿಸಿದರೆ ಶೇ. 0.06 ರಷ್ಟಿತ್ತು.

ಫೆಬ್ರವರಿ 2025 ರಲ್ಲಿ ಹಣದುಬ್ಬರದ ಸಕಾರಾತ್ಮಕ ದರವು, ಮುಖ್ಯವಾಗಿ ಆಹಾರ ಉತ್ಪನ್ನಗಳು, ಆಹಾರ ವಸ್ತುಗಳು, ಇತರ ಉತ್ಪಾದನೆ, ಆಹಾರೇತರ ವಸ್ತುಗಳು ಮತ್ತು ಜವಳಿ ತಯಾರಿಕೆ ಇತ್ಯಾದಿಗಳ ಬೆಲೆಗಳಲ್ಲಿನ ಹೆಚ್ಚಳದಿಂದಾಗಿ ಈ ಬೆಳವಣಿಗೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ದತ್ತಾಂಶದ ಪ್ರಕಾರ, ಈ ತಿಂಗಳಲ್ಲಿ ಉತ್ಪಾದಿತ ಆಹಾರ ಉತ್ಪನ್ನಗಳ ಹಣದುಬ್ಬರವು ಶೇ.11.06 ಕ್ಕೆ ಏರಿತು. ಸಸ್ಯಜನ್ಯ ಎಣ್ಣೆ ಶೇ.33.59 ರಷ್ಟು ಏರಿಕೆಯಾಗಿದೆ. ಆದರೆ, ಪಾನೀಯಗಳು ಶೇ.1.66 ಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿವೆ.

ಆದರೂ, ಆಲೂಗಡ್ಡೆ ಬೆಲೆ ಶೇ.74.28 ರಿಂದ ಶೇ.27.54 ಕ್ಕೆ ಇಳಿದಿದ್ದರಿಂದ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಇಂಧನ ಮತ್ತು ವಿದ್ಯುತ್ ವಿಭಾಗವು ಫೆಬ್ರವರಿಯಲ್ಲಿ ಶೇ.0.71 ರಷ್ಟು ಹಣದುಬ್ಬರವಿಳಿತವನ್ನು ಕಂಡಿದೆ, ಹಿಂದಿನ ತಿಂಗಳಲ್ಲಿ ಶೇ.2.78 ರಷ್ಟು ಹಣದುಬ್ಬರವಿಳಿತವಾಗಿತ್ತು.

ಈ ಮಧ್ಯೆ, ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಭಾರತದ ಚಿಲ್ಲರೆ ಹಣದುಬ್ಬರವು ಫೆಬ್ರವರಿ 2025 ರಲ್ಲಿ ಏಳು ತಿಂಗಳ ಕನಿಷ್ಠ ಮಟ್ಟವಾದ ಶೇ.3.61 ರಷ್ಟು ಕಡಿಮೆಯಾಗಿದೆ. ಮುಖ್ಯವಾಗಿ ಕಳೆದ ವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ತರಕಾರಿಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳ ಬೆಲೆ ಏರಿಕೆಯ ಕಡಿಮೆ ದರದಿಂದಾಗಿ ಹಣದುಬ್ಬರದಲ್ಲಿ ಏರುಪೇರಾಗಿದೆ.

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗೆ ಪತ್ರ ಬರೆಯಿರಿ, ಸಂಸತ್ತಿನಲ್ಲಿ ಎಸ್‌ಐಆರ್ ಕುರಿತು ಚರ್ಚಿಸಿ: ರಾಹುಲ್‌ಗೆ ಅಮಿತ್ ಶಾ ಸವಾಲು

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚರ್ಚೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚಿಸಲು ಗಂಭೀರವಾದ ವಿಷಯಗಳನ್ನು ಎತ್ತಿಕೊಳ್ಳುವಂತೆ ವಿಪಕ್ಷ ನಾಯಕರಿಗೆ ಅವರು ಸಲಹೆ...

ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್

ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಫಾರಂ-7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟ...

ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್

'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು, ಗುರುವಾರ (ನ.5) ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮುಂದೆ ಹಾಜರಾದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ...

ಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆ

'ಮತ ಉಳಿಸಿ, ದೇಶ ಉಳಿಸಿ' ಎಂಬ ಶಿರ್ಷಿಕೆಯಡಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ ಒಕ್ಕೂಟ'...

ಉದ್ಯೋಗಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ, ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅರ್ಹತೆ ಮತ್ತು ಪ್ರತಿಭೆಯ ಆಧಾರದಲ್ಲಿ ನೇಮಕಾತಿ ಮಾಡುವುದರ ಜೊತೆಗೆ, ಕರ್ನಾಟಕದ ಖಾಸಗಿ ಕಂಪನಿಗಳು ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಬೇಕು. ಪ್ರತಿಭಾವಂತ ಕನ್ನಡಿಗರಿಗೆ ನೇಮಕಾತಿಯಲ್ಲಿ ಆದ್ಯತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ....

‘ನೀವು ನಮ್ಮೊಂದಿಗಿದ್ದೀರಾ, ಇಲ್ಲ ನಮ್ಮ ವಿರುದ್ಧ ಇದ್ದೀರಾ’: ಇರಾನ್ ತೈಲ ವ್ಯಾಪಾರಕ್ಕೆ ನೆರವು ಆರೋಪ; ಭಾರತ ಮೂಲದ ದಂಪತಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್: ಇರಾನ್‌ನ ತೈಲ ವ್ಯಾಪಾರಕ್ಕೆ ನೆರವು ನೀಡುವ ಮೂಲಕ ಅಮೆರಿಕದ ಆರ್ಥಿಕ ನಿರ್ಬಂಧಗಳನ್ನು ಉಲ್ಲಂಘಿಸಲು ಸಹಕರಿಸಿದ ಆರೋಪದ ಮೇಲೆ ಭಾರತ ಮೂಲದ ದಂಪತಿ ಮತ್ತು ಅವರೊಂದಿಗೆ ಸಂಪರ್ಕ ಹೊಂದಿರುವ ಹಲವು ಕಂಪನಿಗಳ ವಿರುದ್ಧ...

ಆರು ರಾಜ್ಯಗಳು – ಕೇಂದ್ರಾಡಳಿತ ಪ್ರದೇಶಗಳ ‘ಎಸ್‌ಎಸ್‌ಆರ್’ ಪ್ರಕ್ರಿಯೆ ಘೋಷಿಸಿದ ಚುನಾವಣಾ ಆಯೋಗ

ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು, ಮಿಜೋರಾಂ, ಒಡಿಶಾ ಮತ್ತು ಸಿಕ್ಕಿಂಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Summary Revision -...

ಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು

ಉತ್ತರಾಖಂಡದ ರೆಸಾರ್ಟ್‌ನಲ್ಲಿ ಕೊಲೆಯಾದ ಯುವತಿ ಅಂಕಿತಾ ಭಂಡಾರಿ ಪೋಷಕರು ನ್ಯಾಯಕ್ಕಾಗಿ ತಮ್ಮ ಹೋರಾಟ ಮುಂದುವರಿಸಿದ್ದು, ಬುಧವಾರ (ನ.4) ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಗಾಂಧಿ ಸ್ಮಾರಕದ ಸಾರ್ವಜನಿಕ ದ್ವಾರದ ಬಳಿ ಧರಣಿ ಕುಳಿತಿದ್ದ ಅವರನ್ನು ಪೊಲೀಸರು...

40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್

ʼಶೇಕಡ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ನ.4) ರದ್ದುಪಡಿಸಿದೆ. ಕರ್ನಾಟಕ...

‘ಔಪಚಾರಿಕ ಬಂಧನವಲ್ಲ, ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಲೆಕ್ಕ’: ಸುಪ್ರೀಂ ಮಹತ್ವದ ತೀರ್ಪು; ನಾಲ್ವರು ಆರೋಪಿಗಳ ಬಿಡುಗಡೆಗೆ ಆದೇಶ

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಸಾಂವಿಧಾನಿಕ ಗಡುವು ಆರಂಭವಾಗುತ್ತದೆ. ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದ ಈ ಅವಧಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ...