Homeಮುಖಪುಟಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

ಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಕೇರಳದ ನೂರಾರು ಆಶಾ ಕಾರ್ಯಕರ್ತರು ಸೋಮವಾರ (ಮಾ.17) ರಾಜ್ಯ ಸಚಿವಾಲಯಕ್ಕೆ ಮುತ್ತಿಗೆ ಹಾಕುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ನಿವೃತ್ತಿ ನಂತರದ ಸೌಲಭ್ಯಗಳು ಮತ್ತು ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತರು 36 ದಿನಗಳಿಂದ ತಿರುವನಂತಪುರಂನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮ್ಮ ಬೇಡಿಕೆಗಳ ಕುರಿತು ಅಧಿಕಾರಿಗಳಿಂದ ಯಾವುದೇ ಭರವಸೆ ಇನ್ನೂ ಸಿಗದ ಕಾರಣ, ಪ್ರತಿಭಟನಾಕಾರರು ಇಂದು ನಗರದ ಹೃದಯಭಾಗದಲ್ಲಿರುವ ಸಚಿವಾಲಯದ ವಿವಿಧ ದ್ವಾರಗಳಲ್ಲಿ ತಡೆಯೊಡ್ಡಿದರು. ಪ್ರತಿಭಟನಾ ಸ್ಥಳದಲ್ಲಿ ಒಟ್ಟುಗೂಡಿದ ನಂತರ, ಅವರು ಸಚಿವಾಲಯದ ಕಡೆಗೆ ತೆರಳಿ, ರಸ್ತೆಯಲ್ಲಿ ಕುಳಿತು ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಚಿವಾಲಯದ ಆವರಣದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸಚಿವಾಲಯದ ಒಳಗೆ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಪ್ರತಿಭಟನಾಕಾರರು ಸಚಿವಾಲಯದೊಳಗೆ ಪ್ರವೇಶಿಸದಂತೆ ತಡೆಯಲು 800 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪ್ರತಿಭಟನೆಯಿಂದ ಸಚಿವಾಲಯದ ಸಾಮಾನ್ಯ ಕಾರ್ಯಚಟುವಟಿಕೆಗೆ ಯಾವುದೇ ಅಡ್ಡಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ, ಆಡಳಿತಾರೂಢ ಎಲ್‌ಡಿಎಫ್ ಆಶಾ ಕಾರ್ಯಕರ್ತರ ಹೋರಾಟವನ್ನು ಟೀಕಿಸಿದೆ. ಈ ಪ್ರತಿಭಟನೆಯ ಹಿಂದೆ ಗುಪ್ತ ಅಜೆಂಡಾ ಇದೆ ಎಂದಿದೆ.

“ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಿತ್ತು… ರಾಜ್ಯ ಸರ್ಕಾರದ ವಿರುದ್ಧ ಅಲ್ಲ” ಎಂದು ಹಿರಿಯ ಸಿಪಿಐ(ಎಂ) ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಟಿ.ಪಿ. ರಾಮಕೃಷ್ಣನ್ ಹೇಳಿದ್ದಾರೆ. ಆಶಾ ಕಾರ್ಯಕರ್ತರ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್‌ಡಿಎಫ್ ಮತ್ತು ಸಿಪಿಐ(ಎಂ) ಯಾವಾಗಲೂ ಬದ್ದವಾಗಿದೆ ಎಂದಿದ್ದಾರೆ.

ಆಶಾ ಸೇರಿದಂತೆ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಪಾವತಿಗಾಗಿ 2023-24 ರ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಹೇಳಿಕೊಂಡಿದೆ.

ಆದರೆ, ಕೇಂದ್ರ ಸರ್ಕಾರವು ರಾಜ್ಯದ ಆರೋಪವನ್ನು ತಿರಸ್ಕರಿಸಿದೆ. ಬಾಕಿ ಹಣವನ್ನು ನೀಡಲಾಗಿದೆ. ಅದರ ಬಳಕೆಯ ಪ್ರಮಾಣಪತ್ರ ಕೇರಳದಿಂದ ಬಂದಿಲ್ಲ ಎಂದಿದೆ. ಪ್ರಮಾಣಪತ್ರ ಬಂದ ನಂತರ, ಅಗತ್ಯವಿರುವ ಮೊತ್ತವನ್ನು ಆಶಾ ಕಾರ್ಯಕರ್ತೆಯರಿಗೆ ಮತ್ತು ರಾಜ್ಯಕ್ಕೆ ನೀಡಲಾಗುವುದು ಎಂದು ಹೇಳಿದೆ.

ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ಎನ್‌ಹೆಚ್‌ಎಂನ ಮಿಷನ್ ಸ್ಟೀರಿಂಗ್ ಗ್ರೂಪ್ ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಸಂಸತ್ತಿಗೆ ಹೇಳಿದ್ದಾರೆ.

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....