Homeಮುಖಪುಟದೆಹಲಿ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ...

ದೆಹಲಿ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ದ ಇಂದು (ಮಾ.17) ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟಿಸಿದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸದಸ್ಯರು, “ಇದು ಮುಸ್ಲಿಮರ ಮೇಲಿನ ನೇರ ದಾಳಿ, ತಿದ್ದುಪಡಿ ಮಸೂದೆಯು ವಕ್ಫ್‌ ಆಸ್ತಿಗಳನ್ನು ಕಬಳಿಸಲು ದಾರಿ ಮಾಡಿಕೊಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾರ್ಚ್ 13ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ಹೋಳಿ ಹಬ್ಬದ ಕಾರಣ ಮುಂದೂಡಲಾಗಿತ್ತು. ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ಮಂಡಳಿಯ ವಕ್ತಾರ ಸೈಯದ್ ಖಾಸಿಂ ರಸೂಲ್ ಇಲ್ಯಾಸ್ ಪ್ರತಿಭಟನೆಯ ಬಗ್ಗೆ ಘೋಷಿಸಿದ್ದರು. ತಿದ್ದುಪಡಿ ಮಸೂದೆಯು ‘ತಾರತಮ್ಯ’ಕ್ಕೆ ಸಮನಾಗಿದೆ ಎಂದಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಎಂಪಿಎಲ್‌ಬಿ ಪ್ರಧಾನ ಕಾರ್ಯದರ್ಶಿ ಫಝಲುರ್ ರಹೀಮ್ ಮುಜದ್ದಿದಿ, “ಮಂಡಳಿಯು ಎಲ್ಲಾ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ. ಆದರೆ, ಸರ್ಕಾರ ಈ ಬಗ್ಗೆ ಆಲಿಸುತ್ತಿಲ್ಲ. ಇದರಿಂದಾಗಿ ಪ್ರತಿಭಟನೆ ಮಾಡುವುದು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಸರ್ಕಾರ ಈ ತಿದ್ದುಪಡಿಯನ್ನು ನಮ್ಮ ಮೇಲೆ ಹೇರಲು ಬಯಸುತ್ತಿದೆ. ಪರಿಸ್ಥಿತಿ ಹದಗೆಡುವುದನ್ನು ನಾವು ಬಯಸುವುದಿಲ್ಲ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸುತ್ತೇವೆ. ಆದರೆ, ಈ ಪರಿಸ್ಥಿತಿಗಳಲ್ಲಿ ನಮ್ಮ ಕನಸು ನನಸಾಗುವುದಿಲ್ಲ. ಈ ತಿದ್ದುಪಡಿ ದೇಶದ ವಿರುದ್ಧವಾಗಿದೆ” ಎಂದು ಹೇಳಿದರು.

ಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...