Homeಮುಖಪುಟಮಾರುಕಟ್ಟೆ ವಂಚನೆ ಪ್ರಕರಣದಿಂದ ಅದಾನಿಯನ್ನು ಖುಲಾಸೆ ಮಾಡಿದ ಬಾಂಬೆ ಹೈಕೋರ್ಟ್

ಮಾರುಕಟ್ಟೆ ವಂಚನೆ ಪ್ರಕರಣದಿಂದ ಅದಾನಿಯನ್ನು ಖುಲಾಸೆ ಮಾಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮಾರುಕಟ್ಟೆ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅದಾನಿ ಎಂಟರ್‌ಪ್ರೈಸಸ್‌ ವಿರುದ್ಧದ ಪ್ರಕರಣದಿಂದ ಬಾಂಬೆ ಹೈಕೋರ್ಟ್ ಸೋಮವಾರ ಪ್ರಧಾನಿ ಮೋದಿ ಅವರ ಆಪ್ತ ಕೈಗಾರಿಕೋದ್ಯಮಿಗಳಾದ ಗೌತಮ್ ಅದಾನಿ ಮತ್ತು ಅವರ ಸಹೋದರ ರಾಜೇಶ್ ಅದಾನಿ ಅವರನ್ನು ಖುಲಾಸೆಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಮಾರುಕಟ್ಟೆ ವಂಚನೆ ಪ್ರಕರಣ

ನ್ಯಾಯಮೂರ್ತಿ ಆರ್‌.ಎನ್‌. ಲಡ್ಡಾ ಅವರ ಏಕ ಪೀಠವು ಕಂಪನಿ ಮತ್ತು ಇಬ್ಬರು ಅದಾನಿಗಳನ್ನು ಪ್ರಕರಣದಿಂದ ಬಿಡುಗಡೆ ಮಾಡುವ ಮ್ಯಾಜಿಸ್ಟ್ರೇಟ್ ನಿರ್ಧಾರವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು. ಮಾರುಕಟ್ಟೆ ವಂಚನೆ ಪ್ರಕರಣ

ಸುಮಾರು 388 ಕೋಟಿ ರೂ.ಗಳ ಕಾನೂನುಬಾಹಿರ ಲಾಭವನ್ನು ಕಂಪೆನಿ ಮಾಡಿರುವ ಹಗರಣ ಇದಾಗಿದೆ ಎಂದು ಪಿಟಿಐ ಹೇಳಿದೆ. ಗಂಭೀರ ವಂಚನೆ ತನಿಖಾ ಕಚೇರಿ(ಎಸ್‌ಎಫ್‌ಐಒ)ಯ ವಿಚಾರಣೆ ಸಮಯದಲ್ಲಿ ಕಂಪನಿಯ ನಿಯಂತ್ರಕ ಅನುಸರಣೆ ಮತ್ತು ಹಣಕಾಸು ವಹಿವಾಟುಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿತ್ತು.

ಎಸ್‌ಎಫ್‌ಐಒ 2012 ರಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಪ್ರವರ್ತಕರಾದ ಗೌತಮ್ ಅದಾನಿ ಮತ್ತು ರಾಜೇಶ್ ಅದಾನಿ ವಿರುದ್ಧ ಪ್ರಕರಣ ದಾಖಲಿಸಿತ್ತು. ನಂತರ ಅದು ಅದಾನಿ ಸೇರಿದಂತೆ 12 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತು. ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೇ 2014 ರಲ್ಲಿ ಅವರನ್ನು ಪ್ರಕರಣದಿಂದ ಬಿಡುಗಡೆ ಮಾಡಿತು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ವಿರುದ್ದ ಎಸ್‌ಎಫ್‌ಐಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ನವೆಂಬರ್ 2019 ರಲ್ಲಿ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸಿತು ಮತ್ತು ಸಂಸ್ಥೆಯು ಅದಾನಿ ಗ್ರೂಪ್‌ನಿಂದ ಕಾನೂನುಬಾಹಿರ ಲಾಭದ ಪ್ರಕರಣವನ್ನು ಹೂಡಿದೆ ಎಂದು ಹೇಳಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕೈಗಾರಿಕಾ ಉದ್ಯಮಿ ಅದಾನಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಇದೀಗ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಈ ಅರ್ಜಿಯನ್ನು ಅದಾನಿ ಎಂಟರ್‌ಪ್ರೈಸಸ್ 2019 ರಲ್ಲಿ ಸಲ್ಲಿಸಿತು. ಅದರ ನಂತರ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿನ ಮೇಲೆ ತಡೆಯಾಜ್ಞೆ ಪಡೆದಿದ್ದರು. ಪ್ರಕರಣ ಬಾಕಿ ಇರುವಾಗಲೂ ತಡೆಯಾಜ್ಞೆ ಮುಂದುವರೆದಿತ್ತು.

ಸೋಮವಾರ ಹೈಕೋರ್ಟ್ ಅರ್ಜಿಯನ್ನು ಅನುಮತಿಸಿ ಇಬ್ಬರನ್ನು ಪ್ರಕರಣದಿಂದ ಬಿಡುಗಡೆ ಮಾಡಿದೆ. ವಿವರವಾದ ಆದೇಶದ ಪ್ರತಿ ಇನ್ನೂ ಲಭ್ಯವಿಲ್ಲ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮ ಮೆಟ್ರೋ ನೇಮಕಾತಿ ವಿವಾದ; ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕನ್ನಡ ಪರ ಕಾರ್ಯಕರ್ತರ ಆಗ್ರಹ

ನಮ್ಮ ಮೆಟ್ರೋ ನೇಮಕಾತಿ ವಿವಾದ; ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕನ್ನಡ ಪರ ಕಾರ್ಯಕರ್ತರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...