Homeಅಂತರಾಷ್ಟ್ರೀಯಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು (ಮಾ.18) ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ್ದಕ್ಕೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ನಾಯಕರನ್ನು ಗುರಿಯಾಗಿಸಿ, ಅದರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ನಿನ್ನೆ (ಮಾ.17) ರಾತ್ರಿ ದಕ್ಷಿಣ ಸಿರಿಯಾದ ಡೆರಾ ಪ್ರಾಂತ್ಯದ ಹೊರವಲಯದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾದ ರಾಜ್ಯ ಸುದ್ದಿ ಸಂಸ್ಥೆ ಸನಾ ವರದಿ ಮಾಡಿದೆ.

ಸೋಮವಾರ ರಾತ್ರಿ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ದೃಢಪಡಿಸಿದೆ. ಪದಚ್ಯುತ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಪಡೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು ಮತ್ತು ವಾಹನಗಳನ್ನು ಹೊಂದಿರುವ ಮಿಲಿಟರಿ ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ನಿನ್ನೆ (ಮಾ.17) ಸಿರಿಯಾ-ಲೆಬನಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 52 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಸಾರ್ವಜನಿಕ ಆರೋಗ್ಯ ಸಚಿವಾಲಯ ತಿಳಿಸಿದೆ.

ನಮ್ಮ ಸೈನಿಕರನ್ನು ಲೆಬನಾನ್‌ಗೆ ಕರೆದೊಯ್ದು ಕೊಲ್ಲಲಾಗಿದೆ ಎಂದು ಸಿರಿಯಾ ಆರೋಪಿಸಿದೆ. ಆದರೆ, ಕೊಲ್ಲಲ್ಪಟ್ಟ ಮೂವರು ಕಳ್ಳಸಾಗಣೆದಾರರು ಎಂಬುವುದಾಗಿ ರಕ್ಷಣಾ ಸಚಿವರು ಕ್ಯಾಬಿನೆಟ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಲೆಬನಾನ್‌ನ ಮಾಹಿತಿ ಸಚಿವ ಪಾಲ್ ಮೊರ್ಕೋಸ್ ಹೇಳಿದ್ದಾರೆ.

ಸಿರಿಯಾದ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಲು ಸೈನ್ಯಕ್ಕೆ ಆದೇಶ ನೀಡಿರುವುದಾಗಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿನ್ನೆ ಘೋಷಿಸಿದ್ದಾರೆ.

ಕಳೆದ ಶನಿವಾರ ಯೆಮನ್ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಹೌತಿ ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಲೆಫ್ಟಿನೆಂಟ್ ಜನರಲ್ ಅಲೆಕ್ಸಸ್ ಗ್ರಿನ್‌ಕೆವಿಚ್ ಹೇಳಿದ್ದಾರೆ. ಆರು ಮತ್ತು ಎಂಟು ವರ್ಷ ವಯಸ್ಸಿನ ಕನಿಷ್ಠ ಇಬ್ಬರು ಮಕ್ಕಳು ಸತ್ತವರಲ್ಲಿ ಸೇರಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ತಿಳಿಸಿದೆ.

ಅಮೆರಿಕದ ದಾಳಿಗಳಿಗೆ ಪ್ರತಿಕ್ರಿಯಿಸುವುದಾಗಿ ಪ್ರತಿಜ್ಞೆ ಮಾಡಿರುವ ಹೌತಿಗಳಿಗೆ ಬೆಂಬಲವಾಗಿ ಯೆಮನ್‌ನ ಸನಾದಲ್ಲಿ ಸಾವಿರಾರು ಜನರು ಸೋಮವಾರ ರ್‍ಯಾಲಿ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ “ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಗಾಝಾದ ಜನರೊಂದಿಗೆ ಒಗ್ಗಟ್ಟು ತೋರಿಸಲು ಕೆಂಪು ಸಮುದ್ರದಲ್ಲಿ ಅಮೆರಿಕ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಹೌತಿಗಳು ಹೇಳಿಕೊಂಡಿದ್ದಾರೆ. ಗಾಝಾ ಮೇಲಿನ ಇಸ್ರೇಲ್‌ ದಿಗ್ಬಂಧನವು ಹದಿನಾರನೇ ದಿನಕ್ಕೆ ತಲುಪಿದೆ.

“ಹಮಾಸ್ ಅಗೆಯುವುದನ್ನು ಎಂದಿಗೂ ನಿಲ್ಲಿಸಲಿಲ್ಲ”: ಗಾಜಾ ಸುರಂಗಗಳ ಕುರಿತು ಮಾಜಿ ಒತ್ತೆಯಾಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...