Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...