Homeಮುಖಪುಟ'ತಮಿಳು ಭಾಷೆಯಲ್ಲಿ ಮಾತ್ರ ಅಂಗಡಿಗಳ ಹೆಸರು ಪ್ರದರ್ಶಿಸಬೇಕು..'; ಪುದುಚೇರಿ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

‘ತಮಿಳು ಭಾಷೆಯಲ್ಲಿ ಮಾತ್ರ ಅಂಗಡಿಗಳ ಹೆಸರು ಪ್ರದರ್ಶಿಸಬೇಕು..’; ಪುದುಚೇರಿ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

- Advertisement -
- Advertisement -

ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಲಿದ್ದು, ಎಲ್ಲ ಅಂಗಡಿಗಳು ಮತ್ತು ಸಂಸ್ಥೆಗಳು ಅವುಗಳ ಹೆಸರನ್ನು ತಮಿಳಿನಲ್ಲಿ ಪ್ರದರ್ಶಿಸುವಂತೆ ನಿರ್ದೇಶಿಸಲಿದೆ ಎಂದು ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಮಂಗಳವಾರ ಹೇಳಿದರು.

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಎತ್ತಿದ್ದ ಸ್ವತಂತ್ರ ಸದಸ್ಯ ಜಿ ನೆಹರು (ಕುಪ್ಪುಸಾಮಿ) ಅವರ ಮನವಿಗೆ ಪ್ರತಿಕ್ರಿಯಿಸಿದ ರಂಗಸಾಮಿ, “ಸುತ್ತೋಲೆಯ ಮೂಲಕ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗುವುದು, ಅಂಗಡಿ ಮಾಲೀಕರು ತಮ್ಮ ಸಂಸ್ಥೆಗಳ ಹೆಸರುಗಳ ತಮಿಳು ಆವೃತ್ತಿಗಳನ್ನು ಸೈನ್‌ಬೋರ್ಡ್‌ಗಳಲ್ಲಿ ಪ್ರದರ್ಶಿಸುವುದನ್ನು ಖಚಿತಪಡಿಸಿಕೊಳ್ಳುತ್ತಾರೆ” ಎಂದು ಹೇಳಿದರು.

ಈ ವಿಷಯದಲ್ಲಿ ಯಾವುದೇ ಸಡಿಲತೆ ಇರಬಾರದು ಎಂದು ಸ್ವತಂತ್ರ ಸದಸ್ಯರು ಒತ್ತಿ ಹೇಳಿದರು. ತಮಿಳು ಭಾಷೆಯನ್ನು ಗೌರವಿಸಲು ಕಟ್ಟುನಿಟ್ಟಾದ ನಿರ್ದೇಶನಗಳೊಂದಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರಿ ಇಲಾಖೆಯ ಕಾರ್ಯಗಳಿಗೆ ಎಲ್ಲ ಆಹ್ವಾನಗಳು ತಮಿಳು ಆವೃತ್ತಿಯನ್ನು ಒಳಗೊಂಡಿರಬೇಕು ಎಂದು ಸರ್ಕಾರ ನಿರ್ಧರಿಸಿದೆ. ತಮಿಳು ಭಾಷೆಯ ಮೇಲಿನ ಪ್ರೀತಿ ಮತ್ತು ಗೌರವದಿಂದ ಈ ನಿರ್ಧಾರ ಮಡಲಾಗಿದೆ ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಲೋಕೋಪಯೋಗಿ ಮತ್ತು ಮೀನುಗಾರಿಕೆ ಸಚಿವ ಕೆ. ಲಕ್ಷ್ಮಿನಾರಾಯಣನ್, ಸಮುದ್ರ ಸವೆತವನ್ನು ತಡೆಗಟ್ಟುವ ಕ್ರಮಗಳ ಭಾಗವಾಗಿ ಪುದುಚೇರಿ ಕರಾವಳಿಯ 24 ಕಿ.ಮೀ. ಉದ್ದಕ್ಕೂ ಬಂಡೆಗಳನ್ನು ನಿರ್ಮಿಸಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಈ ಯೋಜನೆಗೆ ಸುಮಾರು ರೂ.1,000 ಕೋಟಿ ರೂ.ಗಳ ಅಗತ್ಯವಿರುತ್ತದೆ; ಕೇಂದ್ರದಿಂದ ಇದರ ಅನುಷ್ಠಾನಕ್ಕೆ ಬೆಂಬಲ ನೀಡುವ ನಿರೀಕ್ಷೆಯಿದೆ ಎಂದು ಅವರು ಗಮನಿಸಿದರು.

ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...