Homeಕರ್ನಾಟಕಸೌಜನ್ಯ ಪ್ರಕರಣ | 'ಧರ್ಮಸ್ಥಳ ಚಲೊ'ಗೆ ನಿರ್ಧರಿಸಿದ ಹೋರಾಟಗಾರರು

ಸೌಜನ್ಯ ಪ್ರಕರಣ | ‘ಧರ್ಮಸ್ಥಳ ಚಲೊ’ಗೆ ನಿರ್ಧರಿಸಿದ ಹೋರಾಟಗಾರರು

- Advertisement -
- Advertisement -

2012 ರಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 17 ವರ್ಷದ ಸೌಜನ್ಯ ಪರ ನ್ಯಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ ರಾಜ್ಯದ ಹಲವಾರು ಹೋರಾಟಗಾರರು, ಹೋರಾಟವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು “ಧರ್ಮಸ್ಥಳ ಚಲೋ” ನಡೆಸಲು ನಿರ್ಧರಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಸೌಜನ್ಯ ಪ್ರಕರಣ

ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದರೂ, ಪ್ರಕರಣದ ಅಪರಾಧಿಗಳು ಇಂದಿಗೂ ಪತ್ತೆಯಾಗಿಲ್ಲ. ಬೆಂಗಳೂರಿನ ಪೊಲೀಸರು ಈ ಹಿಂದೆ ಸಭೆ ನಡೆಸಲು ಹೋರಾಟಗಾರರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಹೋರಾಟಗಾರರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಭೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಸೌಜನ್ಯ ಪ್ರಕರಣ

ಅದಕ್ಕೂ ಮೊದಲು ಮಾರ್ಚ್ 8 ರಂದು ಕೂಡಾ ಕನ್ನಡ ಸಾಹಿತ್ಯ ಪರಿಷತ್ತು ತಮಗೆ ಬಂದ ಕಾನೂನು ಸೂಚನೆಯನ್ನು ಉಲ್ಲೇಖಿಸಿ ತನ್ನ ಆವರಣದಲ್ಲಿ ಇದೇ ರೀತಿಯ ಸಭೆಯನ್ನು ರದ್ದುಗೊಳಿಸುವಂತೆ ಸಂಘಟಕರನ್ನು ಕೇಳಿಕೊಂಡಿತ್ತು. ಮಾರ್ಚ್ 9 ರಂದು ಪರಿಷತ್ ನಡೆಸುವ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿತ್ತು.

ಇದತ ನಂತರ ಸಂಘಟಕರು ಸ್ಥಳವನ್ನು AITUC ಸಭಾಂಗಣಕ್ಕೆ ಬದಲಾಯಿಸಿದರು ಮತ್ತು ಮಾರ್ಚ್ 18 ರಂದು ಕಾರ್ಯಕ್ರಮವನ್ನು ನಿಗದಿಪಡಿಸಿದ್ದರು. ಇದತ ನಂತರ ಶೇಷಾದ್ರಿಪುರಂ ಪೊಲೀಸರು ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿ ಕಾರ್ಯಕ್ರಮವನ್ನು ನಡೆಸದಂತೆ ಮಾರ್ಚ್ 17 ರಂದು ಸಂಘಟಕರಿಗೆ ನೋಟಿಸ್ ನೀಡಿದ್ದರು. ಇದನ್ನು ವಿರೋಧಿಸಿ ಸಂಘಟಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಸಭೆಯಲ್ಲಿ, ನಾವು ‘ಧರ್ಮಸ್ಥಳ ಚಲೋ’ ನಡೆಸಲು ನಿರ್ಧರಿಸಿದ್ದೇವೆ. ವಿವಿಧ ಜಿಲ್ಲೆಗಳಿಂದ ಜನರು ನ್ಯಾಯಕ್ಕಾಗಿ ಪಟ್ಟಣದ ಕಡೆಗೆ ಮೆರವಣಿಗೆ ನಡೆಸಲಿದ್ದಾರೆ. ಇದರ ಜೊತೆಗೆ ನಾವು ಕಾನೂನುಬದ್ಧವಾಗಿ ಕೂಡಾ ಪ್ರಕರಣದಲ್ಲಿ ಹೋರಾಟ ಮುಂದುವರಿಸುತ್ತೇವೆ” ಎಂದು ಕಾರ್ಯಕ್ರಮದ ಆಯೋಜಕರೊಬ್ಬರು ಹೇಳಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...