Homeಮುಖಪುಟತಮಿಳುನಾಡು| ಫ್ರೆಂಚ್ ಮಹಿಳೆಗೆ 'ಮೋಕ್ಷ'ದ ಭರವಸೆ ನೀಡಿ ಬೆಟ್ಟಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ

ತಮಿಳುನಾಡು| ಫ್ರೆಂಚ್ ಮಹಿಳೆಗೆ ‘ಮೋಕ್ಷ’ದ ಭರವಸೆ ನೀಡಿ ಬೆಟ್ಟಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪವಿತ್ರ ಬೆಟ್ಟದ ತುದಿಗೆ ಕರೆದೊಯ್ದು ವಿದೇಶಿ ಪ್ರಜೆಯೊಬ್ಬರನ್ನು ಪ್ರವಾಸಿ ಮಾರ್ಗದರ್ಶಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಫ್ರಾನ್ಸ್‌ನ 46 ವರ್ಷದ ಮಹಿಳೆಯೊಬ್ಬರು ಜನವರಿ 2025 ರಲ್ಲಿ ತಿರುವಣ್ಣಾಮಲೈಗೆ ಆಗಮಿಸಿ ಖಾಸಗಿ ಆಶ್ರಮದಲ್ಲಿ ವಾಸಿಸುತ್ತಿದ್ದರು. ಕಳೆದ ವರ್ಷ ಭೂಕುಸಿತದ ನಂತರ ದೀಪಮಲೈ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿದ್ದರೂ, ಅವರು ಮಾರ್ಗದರ್ಶಕರ ಗುಂಪಿನೊಂದಿಗೆ 2,668 ಅಡಿ ಎತ್ತರದ ಬೆಟ್ಟವನ್ನು ಹತ್ತಿದರು. ಪೊಲೀಸರ ಪ್ರಕಾರ, ಧ್ಯಾನ ಮಾಡಲು ಗುಹೆಯನ್ನು ಪ್ರವೇಶಿಸಿದಾಗ, ವೆಂಕಟೇಶನ್ ಎಂಬ ಪ್ರವಾಸಿ ಮಾರ್ಗದರ್ಶಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಬೆಟ್ಟವನ್ನು ಇಳಿದು ನಂತರ ತಿರುವಣ್ಣಾಮಲೈ ಪಶ್ಚಿಮ ಪೊಲೀಸರಿಗೆ ದೂರು ನೀಡಿದರು. ಪ್ರಕರಣದ ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಲಾಯಿತು, ಇದೀಗ ವೆಂಕಟೇಶನ್‌ನ್ನು ಬಂಧೀಸಲಾಗಿದೆ.

ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ; ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ತಿರುವಣ್ಣಾಮಲೈ, ಅಣ್ಣಾಮಲೈಯರ್ ದೇವಸ್ಥಾನ ಮತ್ತು ರಮಣ ಮಹರ್ಷಿ ಆಶ್ರಮ ಸೇರಿದಂತೆ 14 ಪವಿತ್ರ ಸ್ಥಳಗಳಿಗೆ ನೆಲೆಯಾಗಿದೆ. ಇದು ಬಹಳ ಹಿಂದಿನಿಂದಲೂ ಆಧ್ಯಾತ್ಮಿಕ ಜಾಗೃತಿಯನ್ನು ಬಯಸುವ ವಿದೇಶಿ ಪ್ರಜೆಗಳಿಗೆ ಜನಪ್ರಿಯ ತಾಣವಾಗಿದೆ, ಅನೇಕರು ಜಿಲ್ಲೆಯಲ್ಲಿ ದೀರ್ಘಕಾಲ ವಾಸಿಸುತ್ತಿದ್ದಾರೆ.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...