Homeಕರ್ನಾಟಕಏಳು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಿಜೆಪಿ ಯುವ ಮುಖಂಡ

ಏಳು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಿಜೆಪಿ ಯುವ ಮುಖಂಡ

- Advertisement -
- Advertisement -

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ವರದಿಯಾಗಿದೆ. ಏಳು ವರ್ಷದ ಮಗುವನ್ನು

ದುಷ್ಕರ್ಮಿಯನ್ನು ಬಿಜೆಪಿ ಯುವ ನಾಯಕ ದೇವು ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿಯು ಮಗು ಆಟವಾಡುತ್ತಿದ್ದಾಗ ಆಕೆಯ ಕಣ್ಣುಗಳಿಗೆ ಬಟ್ಟೆ ಕಟ್ಟಿ, ಬಾಯಿ ಮುಚ್ಚಿ, ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ನಂತರ ಅಪರಾಧ ಎಸಗಿದ್ದಾನೆ ಎಂದು ಹೇಳಲಾಗಿದೆ. ಅಷ್ಟೆ ಅಲ್ಲದೆ, ದೇವು ನಾಯಕ್‌ನ ಈ ಕೃತ್ಯಕ್ಕೆ ಮಹಿಳೆಯೊಬ್ಬರು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಏಳು ವರ್ಷದ ಮಗುವನ್ನು

ದೇವು ನಾಯಕ್ ವಿರುದ್ಧ ಮಗುವಿನ ಕುಟುಂಬ ದೂರು ದಾಖಲಿಸಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಈ ಮಧ್ಯೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಗಳು ಹೇಳಿವೆ.

ಮುಂಬರುವ ಬಳ್ಳಾರಿ ಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ದೇವು ನಾಯಕ್ ಪೈಪೋಟಿ ನಡೆಸುತ್ತಿದ್ದ ಎನ್ನಲಾಗಿದೆ. ದುಷ್ಕರ್ಮಿ ಬಿಜೆಪಿಯ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದ ಎಂದು ವರದಿಗಳು ಉಲ್ಲೇಖಿಸಿವೆ. ಜೊತೆಗೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಆತನು ಬಿಜೆಪಿಯ ಹಲವಾರು ಪ್ರಮುಖ ನಾಯಕರೊಂದಿಗೆ ಇರುವ ಛಾಯಾಚಿತ್ರಗಳಿವೆ.

ಪ್ರಕರಣದ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...