Homeಮುಖಪುಟ40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

- Advertisement -
- Advertisement -

ಮೂವತ್ತೊಂಬತ್ತು ವರ್ಷ ಹಳೆಯ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗಲು ಸುಧೀರ್ಘ ಕಾಯುವಿಕೆಗಾಗಿ ಮಹಿಳೆ ಮತ್ತು ಆಕೆಯ ಕುಟುಂಬದ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ.

“ಅಪ್ರಾಪ್ತ ವಯಸ್ಸಿನ ಯುವತಿ ಮತ್ತು ಆಕೆಯ ಕುಟುಂಬ ತಮ್ಮ ಜೀವನದಲ್ಲಿ ಭಯಾನಕ ಅಧ್ಯಾಯವನ್ನು ಕೊನೆಗೊಳಿಸಲು ನಾಲ್ಕು ದಶಕಗಳ ಕಾಲ ಕಾಯಬೇಕಾದ ಪರಿಸ್ಥಿತಿ ಬಂದಿರುವುದು ತೀವ್ರ ಖೇದಕರ” ಎಂದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, 2013ರ ಜುಲೈನಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

1986ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದ ಮಹಿಳೆಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದ. 1987ರ ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಆ ಬಳಿಕ ಹಲವು ನ್ಯಾಯಾಲಯಗಳನ್ನು ಸುತ್ತುಹೊಡೆದ ಪ್ರಕರಣ, ಅಂತಿಮವಾಗಿ ರಾಜಸ್ಥಾನ ಹೈಕೋರ್ಟ್ ತಲುಪಿದೆ. ಪ್ರಾಸಿಕ್ಯೂಷನ್‌ ಸಾಕ್ಷಿಗಳಿಂದ ಪ್ರಬಲ ಹೇಳಿಕೆಗಳು ಇಲ್ಲ ಎಂಬ ಕಾರಣ ನೀಡಿ ಹೈಕೋರ್ಟ್, ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

“ಬಾಲ ಸಾಕ್ಷಿ (ಸಂತ್ರಸ್ತೆ) ಆಕೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಘಟನೆ ಬಗ್ಗೆ ಕೇಳಿದಾಗ, ಸಂತ್ರಸ್ತೆ ಮೌನವಾಗಿದ್ದರು ಎಂದು ವಿಚಾರಣಾ ನ್ಯಾಯಾಧೀಶರು ದಾಖಲಿಸಿಕೊಂಡಿದ್ದರು. ಮತ್ತೆ ಕೇಳಿದಾಗ ಮೌನವಾಗಿ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನೂ ಹೇಳಿರಲಿಲ್ಲ” ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಇದನ್ನು ಆರೋಪಿಯ ಪರ ಅಂಶ ಎಂದು ಪರಿಗಣಿಸಲಾಗದು. ಬಾಲಕಿಯ ಮೌನದ ಹಿಂದೆ ಆಘಾತ ಕೆಲಸ ಮಾಡಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮಗುವಿನ ಮೌನವನ್ನು ವಯಸ್ಕ ಸಂತ್ರಸ್ತೆಯ ಮೌನದ ಜೊತೆ ತಾಳೆ ಮಾಡುವಂತಿಲ್ಲ. ಸಂದರ್ಭಕ್ಕೆ ಅನುಸಾರವಾಗಿ ಇದನ್ನು ಅಳೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಆಘಾತಕ್ಕೊಳಗಾದ ಮಗು, ಆರೋಪಿಯನ್ನು ಜೈಲಿಗೆ ಹಾಕಲು ಆಧಾರವಾಗಲು ಸಾಧ್ಯವಿಲ್ಲ. ಇಡೀ ಪ್ರಾಸಿಕ್ಯೂಷನ್‌ನ ಭಾರವನ್ನು ಆಕೆಯ ಎಳೆಯ ಹೆಗಲ ಮೇಲೆ ಹೇರುವುದು ಅನ್ಯಾಯ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಖಂಡನಾ ಹೇಳಿಕೆ ಇಲ್ಲದಿದ್ದರೂ, ವಿಶೇಷವಾಗಿ ವೈದ್ಯಕೀಯ ಮತ್ತು ಸಾಂದರ್ಭಿಕ ಪುರಾವೆಗಳು ಲಭ್ಯವಿದ್ದಾಗ, ಶಿಕ್ಷೆಯು ನಿಲ್ಲಲು ಸಾಧ್ಯವಿಲ್ಲ ಎಂಬ ಯಾವುದೇ ಕಠಿಣ ನಿಯಮವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಮೇಲಿನ ತನ್ನ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವ ಮತ್ತು ತಳ್ಳಿ ಹಾಕುವ ಮೊದಲು ಹೈಕೋರ್ಟ್ ಸಾಕ್ಷ್ಯಗಳನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದಿದೆ.

ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ರೀತಿಗೆ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ತನ್ನ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಯು ಈಗಾಗಲೇ ಶಿಕ್ಷೆ ಅನುಭವಿಸಿಲ್ಲದಿದ್ದರೆ, ವಿಚಾರಣಾ ನ್ಯಾಯಾಲಯವು ವಿಧಿಸಿರುವ ಶಿಕ್ಷೆಯನ್ನು ಅನುಭವಿಸಲು ನಾಲ್ಕು ವಾರಗಳಲ್ಲಿ ಶರಣಾಗುವಂತೆ ಆದೇಶಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...