Homeಮುಖಪುಟಛತ್ತೀಸ್‌ಗಢ ಎನ್‌ಕೌಂಟರ್ : 22 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್‌ಗಢ ಎನ್‌ಕೌಂಟರ್ : 22 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಗುರುವಾರ (ಮಾ.20) ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿ ಅರಣ್ಯದೊಳಗೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಸ್ಥಳದಿಂದ ಇಬ್ಬರು ನಕ್ಸಲರ ಮೃತದೇಹಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ 31 ನಕ್ಸಲರು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಎನ್‌ಕೌಂಟರ್‌ ನಡೆದು ಒಂದು ತಿಂಗಳ ನಂತರ ಈ ಕಾರ್ಯಾಚರಣೆ ನಡೆದಿದೆ.

ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದುವರೆಗೆ 18 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ವಿಜಯ್ ಶರ್ಮಾ ದೃಢಪಡಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...