Homeಕರ್ನಾಟಕವಿಧಾನಸಭೆಯಲ್ಲಿ 'ಹನಿಟ್ರ್ಯಾಪ್' ಗದ್ದಲ: ಸಿಎಂ ಏನಂದ್ರು?

ವಿಧಾನಸಭೆಯಲ್ಲಿ ‘ಹನಿಟ್ರ್ಯಾಪ್’ ಗದ್ದಲ: ಸಿಎಂ ಏನಂದ್ರು?

- Advertisement -
- Advertisement -

ಬೆಂಗಳೂರು : ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಮಾ.21) ವಿಧಾನಸಭೆಯಲ್ಲಿ ಹೇಳಿದರು.

ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಲಾಗಿದೆ ಎಂಬ ಆರೋಪದ ಕುರಿತು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ಶಾಸಕರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸದನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸಿಎಂ, “ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಬಲಿಪಶು  ಆಗಿದ್ದರೂ, ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು” ಎಂದರು.

“ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಚಿವ ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಲಾಗಿದೆ ಎಂದು ಆರೋಪಿಸಿದ್ದರು. ಶಾಸಕರಾದ ಸುನಿಲ್ ಕುಮಾರ್, ಮುನಿರತ್ನ ಈ ಆರೋಪಕ್ಕೆ ಧ್ವನಿಗೂಡಿಸಿ ಚರ್ಚೆ ನಡೆಸಿದ್ದರು.

ಈ ವೇಳೆ ಸಚಿವ ರಾಜಣ್ಣ ಪ್ರತಿಕ್ರಿಯಿಸಿ, “48 ಜನರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇದರಲ್ಲಿ ಸಿಲುಕಿದವರು ಎರಡೂ ಪಕ್ಷದಲ್ಲಿ ಇದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರ ಹನಿಟ್ರ್ಯಾಪ್ ಪೆನ್ ಡ್ರೈವ್ ಇದೆ. ನನ್ನ ಮೇಲೆ ಆರೋಪಕ್ಕೆ ಇಲ್ಲಿ ಉತ್ತರ ಕೊಡಲ್ಲ. ನಾನು ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇವೆ. ಇದನ್ನು ತನಿಖೆ ಮಾಡಬೇಕು. ಯಾರು ನಿರ್ಮಾಪಕರು, ನಿರ್ದೇಶಕರು ಇದ್ದಾರೆ ಇವೆಲ್ಲವೂ ಹೊರಗಡೆ ಬರಲಿ. ಜನರಿಗೆ ಗೊತ್ತಾಗಲಿ” ಎಂದು ಹೇಳಿದ್ದರು.

ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ವಿಚಾರವಾಗಿ ಪ್ರತಿಕ್ರಿಯಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ್ದಾರೆ. ಆದರೆ, ಸದನದಲ್ಲಿ ಶುಕ್ರವಾರ ಕೂಡ ಬಿಜೆಪಿ ಶಾಸಕರು ಹನಿಟ್ರ್ಯಾಪ್ ವಿಚಾರ ಪ್ರಸ್ತಾಪಿಸಿದ್ದು, ಕೆಲಕಾಲ ಗಂಭೀರ ಚರ್ಚೆ ಮತ್ತು ಗದ್ದಲ ನಡೆಯಿತು.

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...