Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...