Homeಮುಖಪುಟಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

ಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

- Advertisement -
- Advertisement -

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಕೆಡವಲು ಮತ್ತು ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಿಂದ ಸಮಾಧಿಯನ್ನು ಕೈಬಿಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಆದೇಶಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಕೇತನ್ ತಿರೋಡ್ಕರ್ ಎಂಬಾತ ಪಿಐಎಲ್‌ ಸಲ್ಲಿಸಿದ್ದು, ಕೆಲವು ಪುರಾತನ ಸ್ಮಾರಕಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎಂದು ಗೊತ್ತುಪಡಿಸುವ ಎಎಸ್‌ಐ ಕಾಯ್ದೆ-1958ರ ವಿಭಾಗ 3ರೊಂದಿಗೆ ಔರಂಗಜೇಬ್ ಸಮಾಧಿ ಹೊಂದಿಕೆಯಾಗುವುದಿಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಔರಂಗಜೇಬ್‌ ಸಮಾಧಿಯು 14 ನೇ ಶತಮಾನದ ಚಿಸ್ತಿ ಪಂಥದ ಸೂಫಿ ಸಂತ ಶೈಖ್ ಝೈನುದ್ದೀನ್ ಅವರ ದರ್ಗಾ ಸಂಕೀರ್ಣದಲ್ಲಿದೆ. ಹತ್ತಿರದಲ್ಲಿ ಔರಂಗಜೇಬ್‌ ಅವರ ಪುತ್ರರಲ್ಲಿ ಒಬ್ಬರಾದ ಹೈದರಾಬಾದ್‌ನ ಮೊದಲ ನಿಝಾಮ್ ಆಸಫ್ ಜಾ I ಮತ್ತು ಅವರ ಮಗ ನಾಸಿರ್ ಜಂಗ್ ಅವರ ಸಮಾಧಿಗಳಿವೆ. ಈ ಸಮಾಧಿಗಳನ್ನೂ ಕೆಡವಲು ಅರ್ಜಿಯಲ್ಲಿ ಕೋರಲಾಗಿದೆ.

“ಒಂದು ನಿರ್ದಿಷ್ಟ ಪ್ರದೇಶ ಅಥವಾ ಗುಂಪಿನ ಬದಲು, ಇಡೀ ದೇಶಕ್ಕೆ ಮೌಲ್ಯಯುತವಾದದ್ದನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎನ್ನಲಾಗುತ್ತದೆ. ಏಕೆಂದರೆ, ಅದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಈ ಪರಿಣಾಮವನ್ನು ಭವಿಷ್ಯದ ಪೀಳಿಗೆ ಸಕಾರಾತ್ಮಕ ರೀತಿಯಲ್ಲಿ ಅರ್ಥಮಾಡಿಕೊಳ್ಳಬೇಕು” ಎಂದು ಅರ್ಜಿದಾರ ಕೇತನ್ ತಿರೋಡ್ಕರ್ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ರಾಜಭಾವು ಚೌಧರಿ ಹೇಳಿದ್ದಾರೆ.

“ಔರಂಗಜೇಬ್‌ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಿದ್ದು, ರಾಷ್ಟ್ರೀಯ ಮಹತ್ವವನ್ನು ಸೂಚಿಸುತ್ತದೆ ಎಂಬುದು ಸ್ವಯಂ ಮಾಡಿಕೊಂಡ ಅವಮಾನ.ಭಾರತದಲ್ಲಿ ಚೆಂಗಿಸ್‌ ಖಾನ್, ಮೊಹಮ್ಮದ್ ಘೋರಿ ಅಥವಾ ರಾಜ ಅಲೆಕ್ಸಾಂಡರ್‌ನಂತಹ ವ್ಯಕ್ತಿಗಳಿಗೆ ನಾವು ಎಂದಿಗೂ ಸ್ಮಾರಕಗಳನ್ನು ಸ್ಥಾಪಿಸಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ನ್ಯಾಯಾಲಯವು ಸೂಕ್ತ ಸಮಯದಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...