Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...