Homeಮುಖಪುಟಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

ಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

- Advertisement -
- Advertisement -

ಯುಎಇಯಲ್ಲಿ ಮರಣದಂಡನೆ ಪ್ರಕಟಗೊಂಡಿರುವ ಭಾರತೀಯ ಪ್ರಜೆಗಳ ಸಂಖ್ಯೆ 25 ಆಗಿದ್ದು, ಇನ್ನಷ್ಟೇ ಶಿಕ್ಷೆ ಜಾರಿಯಾಗಬೇಕಿದೆ ಎಂದು ಕೇಂದ್ರ ಸರ್ಕಾರ ಗುರುವಾರ (ಮಾ.20) ಸಂಸತ್ತಿಗೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

“ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿದೇಶಿ ಕಾರಾಗೃಹಗಳಲ್ಲಿ ಪ್ರಸ್ತುತ ವಿಚಾರಣಾಧೀನ ಕೈದಿಗಳು ಸೇರಿದಂತೆ ಭಾರತೀಯ ಕೈದಿಗಳ ಸಂಖ್ಯೆ 10,152” ಎಂದು ಸಿಂಗ್ ಹೇಳಿದ್ದಾರೆ.

ವಿದೇಶಗಳಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯರ ವಿವರಗಳು ಮತ್ತು ಅವರಿಗೆ ಸಹಾಯ ಮಾಡಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳ ಬಗ್ಗೆಯೂ ಪ್ರಶ್ನೆಯಲ್ಲಿ ಕೇಳಲಾಗಿತ್ತು.

“ವಿದೇಶಿ ಜೈಲುಗಳಲ್ಲಿರುವವರು ಸೇರಿದಂತೆ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ” ಎಂದು ಸಿಂಗ್ ತಿಳಿಸಿದ್ದಾರೆ.

ಭಾರತೀಯರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿರುವ, ಇನ್ನೂ ಜಾರಿಯಾಗದ ಎಂಟು ದೇಶಗಳ ಡೇಟಾವನ್ನು ಸಚಿವರು ಹಂಚಿಕೊಂಡಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಯುಎಇಯಲ್ಲಿ 25, ಸೌದಿ ಅರೇಬಿಯಾದಲ್ಲಿ 11, ಮಲೇಷ್ಯಾದಲ್ಲಿ 6, ಕುವೈತ್‌ನಲ್ಲಿ 3 ಮತ್ತು ಇಂಡೋನೇಷ್ಯಾ, ಕತಾರ್, ಅಮೆರಿಕ ಮತ್ತು ಯೆಮೆನ್‌ನಲ್ಲಿ ತಲಾ ಒಬ್ಬರಿಗೆ ಮರಣದಂಡನೆ ವಿಧಿಸಲಾಗಿದೆ.

“ವಿದೇಶಿ ನ್ಯಾಯಾಲಯಗಳಿಂದ ಮರಣದಂಡನೆ ಸೇರಿದಂತೆ ಶಿಕ್ಷೆಗೊಳಗಾದ ಭಾರತೀಯ ಪ್ರಜೆಗಳಿಗೆ ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಜೈಲುಗಳಿಗೆ ಭೇಟಿ ನೀಡುವ ಮೂಲಕ ಮತ್ತು ನ್ಯಾಯಾಲಯಗಳು, ಜೈಲುಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳೊಂದಿಗೆ ಅವರ ಪ್ರಕರಣಗಳನ್ನು ಫಾಲೋ ಅಪ್ ಮಾಡುವ ಮೂಲಕ ಕಾನ್ಸುಲರ್ ಪ್ರವೇಶವನ್ನು ಒದಗಿಸುತ್ತಿವೆ.

ಜೈಲಿನಲ್ಲಿರುವ ಭಾರತೀಯ ಪ್ರಜೆಗಳಿಗೆ ಮೇಲ್ಮನವಿ ಸಲ್ಲಿಸುವುದು, ಕ್ಷಮಾದಾನ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ಕಾನೂನು ಪರಿಹಾರಗಳನ್ನು ಅನ್ವೇಷಿಸುವಲ್ಲಿ ಸಹಾಯ ಮಾಡಲಾಗುತ್ತಿದೆ” ಎಂದು ಸಚಿವರು ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ವಿದೇಶಗಳಲ್ಲಿ ಯಾವುದಾರು ಭಾರತೀಯ ಪ್ರಜೆಗಳನ್ನು ಗಲ್ಲಿಗೇರಿಸಲಾಗಿದೆಯೇ ಎಂದು ಸಚಿವ ಸಿಂಗ್ ಅವರಿಗೆ ಕೇಳಲಾಗಿತ್ತು. ಮಲೇಷ್ಯಾ, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲಿ ಮರಣದಂಡನೆ ವಿಧಿಸಲಾಗಿದೆ ಸಚಿವರು ದೃಢಪಡಿಸಿದ್ದಾರೆ.

2024 ರಲ್ಲಿ ಕುವೈತ್, ಸೌದಿ ಅರೇಬಿಯಾದಲ್ಲಿ ಮೂವರು ಮತ್ತು ಜಿಂಬಾಬ್ವೆಯಲ್ಲಿ ಒಬ್ಬರು ಭಾರತೀಯರನ್ನು ಗಲ್ಲಿಗೇರಿಸಲಾಗಿದೆ. 2023 ರಲ್ಲಿ, ಕುವೈತ್ ಮತ್ತು ಸೌದಿ ಅರೇಬಿಯಾದಲ್ಲಿ ತಲಾ ಐದು ಭಾರತೀಯರನ್ನು ಮತ್ತು ಮಲೇಷ್ಯಾದಲ್ಲಿ ಒಬ್ಬರನ್ನು ಗಲ್ಲಿಗೇರಿಸಲಾಗಿದೆ.

ಯುಎಇಗೆ ಸಂಬಂಧಿಸಿದಂತೆ, ಅಧಿಕಾರಿಗಳು ಅಂತಹ ಡೇಟಾವನ್ನು ಹಂಚಿಕೊಳ್ಳುವುದಿಲ್ಲ ಎಂದು ಸಚಿವ ಸಿಂಗ್ ಹೇಳಿದ್ದು, ಆದಾಗ್ಯೂ, ಭಾರತೀಯ ರಾಯಭಾರ ಕಚೇರಿಯಲ್ಲಿ ಲಭ್ಯವಿರುವ ಅನೌಪಚಾರಿಕ ಮಾಹಿತಿಯ ಪ್ರಕಾರ, 2020 ಮತ್ತು 2024 ರ ನಡುವೆ ಯಾವುದೇ ಭಾರತೀಯರನ್ನು ಗಲ್ಲಿಗೇರಿಸಲಾಗಿಲ್ಲ.

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...