Homeಮುಖಪುಟಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

- Advertisement -
- Advertisement -

ಶನಿವಾರ ಮಣಿಪುರಕ್ಕೆ ಭೇಟಿ ನೀಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗದ ನಡೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಸ್ವಾಗತಿಸಿದ್ದು, ಆದರೆ ಪ್ರಧಾನಿ ನರೇಂದ್ರ ಮೋದಿ ಗಲಭೆ ಪೀಡಿತ ರಾಜ್ಯಕ್ಕೆ ಯಾವಾಗ ಭೇಟಿ ನೀಡುತ್ತಾರೆ ಎಂದು ಕೇಳಿದ್ದಾರೆ.

ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಜೈರಾಮ್ ಅವರು, “ಮಣಿಪುರಕ್ಕೆ ಹೋಗಿರುವ ಆರು ನ್ಯಾಯಮೂರ್ತಿಗಳ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಅಲ್ಲಿ ಕಳೆದ 22 ತಿಂಗಳಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಜೊತೆಗೆ ಇಂದಿಗೂ ಮಣಿಪುರದ ಜನ ಸಮುದಾಯಗಳಲ್ಲಿ ಭಯ ಮತ್ತು ಅನುಮಾನದ ವಾತಾವರಣವಿದೆ” ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ

“ಫೆಬ್ರವರಿ 13 ರಂದು ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಆದರೆ ಪ್ರಶ್ನೆ ಏನೆಂದರೆ, ಆಗಸ್ಟ್ 1, 2023 ರಂದು ಸ್ವತಃ ಸುಪ್ರೀಂಕೋರ್ಟ್, ‘ಮಣಿಪುರದಲ್ಲಿ ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣವಾಗಿ ಬುಡಮೇಲಾಗಿದೆ’ ಎಂದು ಹೇಳಿದ ನಂತರವೂ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು 18 ತಿಂಗಳುಗಳು ಏಕೆ ತೆಗೆದುಕೊಂಡಿತು? ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಹೋಗಿರುವುದು ಒಳ್ಳೆಯದೆ, ಆದರೆ ಪ್ರಧಾನಿ ಯಾವಾಗ ಭೇಟಿ ನೀಡುತ್ತಾರೆ ಎಂಬುದು ದೊಡ್ಡ ಪ್ರಶ್ನೆ?” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗವು ಶನಿವಾರ ಮಣಿಪುರದ ಚುರಾಚಂದ್‌ಪುರದಲ್ಲಿರುವ ಪರಿಹಾರ ಶಿಬಿರಕ್ಕೆ ಭೇಟಿ ನೀಡಿತು. ನಿಯೋಗದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ವಿಕ್ರಮ್ ನಾಥ್, ಎಂ.ಎಂ. ಸುಂದರೇಶ್, ಕೆ.ವಿ. ವಿಶ್ವನಾಥನ್ ಮತ್ತು ಎನ್. ಕೋಟೀಶ್ವರ್ ಇದ್ದರು.

ಸಂಸತ್ತಿನಲ್ಲಿ ಗೃಹ ಸಚಿವಾಲಯದ (ಎಂಎಚ್‌ಎ) ಕಾರ್ಯವೈಖರಿಯ ಕುರಿತು ಚರ್ಚೆಯ ಸಂದರ್ಭದಲ್ಲಿ ಮಣಿಪುರದ ಪರಿಸ್ಥಿತಿಯನ್ನು ತಿಳಿಸದ ಗೃಹ ಸಚಿವ ಅಮಿತ್ ಶಾ ಅವರನ್ನು ಜೈರಾಮ್‌ ರಮೇಶ್ ಟೀಕಿಸಿದ್ದಾರೆ.

“ನಿನ್ನೆ, ಗೃಹ ಸಚಿವರು ತಮ್ಮ ಗೃಹ ಸಚಿವಾಲಯದ ಕೆಲಸದ ಬಗ್ಗೆ ರಾಜ್ಯಸಭೆಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಪ್ರತಿಕ್ರಿಯೆ ನೀಡಿದರು. ಆದರೆ ಅವರು ಮಣಿಪುರದ ಬಗ್ಗೆ ಹೆಚ್ಚಾಗಿ ಹೇಳಲಿಲ್ಲ. ಫೆಬ್ರವರಿ 2022 ರಲ್ಲಿ ಅಲ್ಲಿ ಎನ್‌ಡಿಎ ಭಾರಿ ಬಹುಮತದಿಂದ ಚುನಾವಣೆಯನ್ನು ಗೆದ್ದಿತ್ತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿತು. ಅದಕ್ಕೆ ಅವರಲ್ಲಿ ಉತ್ತರವಿಲ್ಲ. ಅಲ್ಲಿಗೆ ಪ್ರಧಾನಿ ಏಕೆ ಹೋಗಲಿಲ್ಲ ಎಂಬುದಕ್ಕೆ ಉತ್ತರವಿಲ್ಲ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿನ ವಿಳಂಬವನ್ನು ಪ್ರಶ್ನಿಸಿದ ಅವರು, ಮಣಿಪುರಕ್ಕೆ ಭೇಟಿ ನೀಡದೆ ಮಿಜೋರಾಂಗೆ ಭೇಟಿ ನೀಡಿದ್ದಕ್ಕಾಗಿ ಅಮಿತ್‌ ಶಾ ಅವರನ್ನು ಟೀಕಿಸಿದ್ದಾರೆ.

“ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿ ಇಷ್ಟೊಂದು ವಿಳಂಬ ಏಕೆ ಎಂಬುದಕ್ಕೆ ಅವರಲ್ಲಿ ಉತ್ತರವಿಲ್ಲ. ಗೃಹ ಸಚಿವರು ಮಿಜೋರಾಂಗೆ ಹೋಗುತ್ತಾರೆ, ಮಣಿಪುರಕ್ಕೆ ಏಕೆ ಹೋಗಲಿಲ್ಲ? ಮತ್ತು ಅಮೆರಿಕಕ್ಕೆ ಹೋದ ನಂತರ ಮಿಜೋರಾಂ ಮುಖ್ಯಮಂತ್ರಿ ಹೇಳಿರುವ ವಿಷಯಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ” ಎಂದು ಅವರು ಹೇಳಿದ್ದಾರೆ.

ಬ್ಯಾಂಕಾಕ್‌ಗೆ ಹೋಗುವ ಮೊದಲು ಅಥವಾ ಹಿಂದಿರುಗುವಾಗ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. “ಬ್ಯಾಂಕಾಕ್‌ಗೆ ಹೋಗುವ ದಾರಿಯಲ್ಲಿ ಅಥವಾ ಬ್ಯಾಂಕಾಕ್‌ನಿಂದ ಹಿಂದಿರುಗುವಾಗ, ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ. ಪ್ರಧಾನ ಮಂತ್ರಿಯವರ ಭೇಟಿಯು ಅಲ್ಲಿಗೆ ನಿರ್ಣಾಯಕವಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಬ್ಯಾಂಕಾಕ್‌ನಲ್ಲಿ ಆರನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 2 ರಿಂದ 4 ರವರೆಗೆ ಥೈಲ್ಯಾಂಡ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಫೆಬ್ರವರಿ 13 ರಂದು, ರಾಜ್ಯಪಾಲರ ವರದಿಯ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...