ನೆರೆಯ ರಾಜ್ಯಗಳ ಮರಾಠಿ ಮಾಧ್ಯಮ ಅಭ್ಯರ್ಥಿಗಳಿಗೆ ಮಹಾರಾಷ್ಟ್ರ ಸರ್ಕಾರವು ಉದ್ಯೋಗಗಳನ್ನು ನೀಡುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಪರಿಶೀಲಿಸಲಿದೆ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದ್ದಾರೆ. ಕರ್ನಾಟಕದ ಮರಾಠಿಗರಿಗೆ
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, “ರಾಜ್ಯ ಸರ್ಕಾರಗಳಿಗೆ ತಮ್ಮ ಸ್ವಂತ ಜನರಿಗೆ ಉದ್ಯೋಗ ನೀಡುವುದೇ ಕಷ್ಟಕರವಾಗಿದೆ. ಅಂತದ್ದರಲ್ಲಿ ಹೊರಗಿನವರಿಗೆ ಉದ್ಯೋಗಗಳನ್ನು ನೀಡುವುದು ಒಂದು ಸವಾಲಾಗಿದೆ.” ಎಂದು ಹೇಳಿದ್ದಾರೆ. ಕರ್ನಾಟಕದ ಮರಾಠಿಗರಿಗೆ
“ಒಂದು ರಾಜ್ಯ ಸರ್ಕಾರವು ಇನ್ನೊಂದು ರಾಜ್ಯದ ಜನರಿಗೆ ಉದ್ಯೋಗಗಳನ್ನು ಒದಗಿಸುವುದು ಕಷ್ಟಕರವಾಗಿದೆ. ಜಿಲ್ಲೆಯ ಮರಾಠಿ ಮಾಧ್ಯಮ ವಿದ್ಯಾರ್ಥಿಗಳು ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಹೇಗೆ ಅವಕಾಶ ನೀಡಲಾಗಿದೆ ಎಂಬುದನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಪರಿಶೀಲಿಸುತ್ತದೆ” ಎಂದು ಹೇಳಿದ್ದಾರೆ.
“ಕನ್ನಡ-ಮರಾಠಿ ಭಾಷಾ ಸಮಸ್ಯೆಯು ಮಹತ್ವವನ್ನು ಕಳೆದುಕೊಂಡಿದೆ. ಕೆಲವು ದಶಕಗಳ ಹಿಂದೆ ಕಂಡುಬಂದ ತೀವ್ರತೆಯು ಈಗ ಇಲ್ಲ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಮುಗಿದ ಅಧ್ಯಾಯವಾಗಿದೆ. ಮರಾಠಿ ಮಾತನಾಡುವ ಜನರು ರಾಜ್ಯದ ಮುಖ್ಯವಾಹಿನಿಗೆ ಸೇರುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
“ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಯಾವುದೇ ಪ್ರಸ್ತುತತೆಯನ್ನು ಹೊಂದಿಲ್ಲ, ಮತ್ತು ಅದನ್ನು ನಿಷೇಧಿಸಿದರೂ ಸಹ, ಅದರ ಕಾರ್ಯಕರ್ತರು ಬೇರೆ ಹೆಸರಿನಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.
ಮರಾಠಿ ಮಾತನಾಡಲು ಬಾರದ ಕಾರಣ ಕನ್ನಡದಲ್ಲಿ ಮಾತನಾಡುವಂತೆ ಪ್ರಯಾಣಿಕರಿಗೆ ಹೇಳಿದ್ದ NWKRTC ಬಸ್ ಕಂಡಕ್ಟರ್ ಮೇಲಿನ ಹಲ್ಲೆಯನ್ನು ವಿರೋಧಿಸಿ ಕರೆ ನೀಡಲಾದ ಕರ್ನಾಟಕ ಬಂದ್ ಕುರಿತು ಮಾತನಾಡಿದ ಜಾರಕಿಹೊಳಿ, “ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಡ್ಡಿಪಡಿಸದಂತೆ ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ನಾವು ಹೋರಾಟಗಾರನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.
“ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣವನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು. ಲೋಕೋಪಯೋಗಿ ಇಲಾಖೆಯಡಿಯಲ್ಲಿ ರಸ್ತೆಗಳು ಮತ್ತು ಸೇತುವೆಗಳಿಗೆ ನಿಗದಿಪಡಿಸಿದ ಹಣವನ್ನು ಬಳಸಿಕೊಂಡು ಎತ್ತರದ ಕಾರಿಡಾರ್ ನಿರ್ಮಿಸಲಾಗುವುದು” ಎಂದು ಅವರು ಹೇಳಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು
ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

