Homeಮುಖಪುಟಸಂಸದೀಯ ಕ್ಷೇತ್ರದ ಗಡಿ ಮೇಲಿನ ನಿರ್ಬಂಧ 25 ವರ್ಷಗಳವರೆಗೆ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಂಸದೀಯ ಕ್ಷೇತ್ರದ ಗಡಿ ಮೇಲಿನ ನಿರ್ಬಂಧ 25 ವರ್ಷಗಳವರೆಗೆ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ಒತ್ತಾಯ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಜಂಟಿ ಕ್ರಿಯಾ ಸಮಿತಿಯು ಲೋಕಸಭಾ ಕ್ಷೇತ್ರಗಳ ಪುನರ್ರಚಿಸುವ ಉದ್ದೇಶಿತ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ನಿರ್ಣಯವನ್ನು ಶನಿವಾರ ಅಂಗೀಕರಿಸಿದೆ ಎಂದು ವರದಿಯಾಗಿದೆ. 1971 ರ ಜನಗಣತಿಯ ಆಧಾರದ ಮೇಲೆ ರಚಿಸಲಾದ ಕ್ಷೇತ್ರಗಳನ್ನು ಇನ್ನೂ 25 ವರ್ಷಗಳ ಕಾಲ ವಿಸ್ತರಿಸುವಂತೆ ಈ ನಿರ್ಣಯವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದು, ಜೊತೆಗೆ ಕ್ಷೇತ್ರ ಪುನರ್ವಿಂಗಡನೆಯ ಬಗ್ಗೆ ಪಾರದರ್ಶಕತೆಯನ್ನು ಕೋರಿದೆ. ಸಂಸದೀಯ ಕ್ಷೇತ್ರದ

ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಮಾರ್ಚ್ 7 ರಂದು ಪತ್ರ ಬರೆದಿದ್ದ ಸ್ಟಾಲಿನ್‌, ಈ ಪ್ರಕ್ರಿಯೆಯ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಕರೆ ನೀಡಿದ್ದರು. ಸಮಿತಿಯ ಮೊದಲ ಸಭೆ ಶನಿವಾರ ಚೆನ್ನೈನಲ್ಲಿ ನಡೆಯಿತು.

ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ. 2001 ರ 84 ನೇ ತಿದ್ದುಪಡಿ ಕಾಯ್ದೆಯ ಪ್ರಕಾರ, 2026 ರ ನಂತರದ ಮೊದಲ ಜನಗಣತಿ, ಅಂದರೆ 2031 ರಲ್ಲಿ ನಡೆಯಲಿರುವವರೆಗೆ ಕ್ಷೇತ್ರದ ಗಡಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದಾಗ್ಯೂ, ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್ವಿಂಗಡಣೆಯು ಲೋಕಸಭೆಯಲ್ಲಿ ಉತ್ತರ ಮತ್ತು ಮಧ್ಯ ಭಾರತದ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ. ಸಂಸದೀಯ ಕ್ಷೇತ್ರದ

ಶನಿವಾರ ಅಂಗೀಕರಿಸಿದ ತನ್ನ ನಿರ್ಣಯದಲ್ಲಿ, ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳನ್ನು “ದಂಡನೆ ವಿಧಿಸಬಾರದು” ಎಂದು ಜಂಟಿ ಕ್ರಿಯಾ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ ಎಂದು ವರದಿಯಾಗಿದೆ. “ಕೇಂದ್ರ ಸರ್ಕಾರವು ಈ ಉದ್ದೇಶಕ್ಕಾಗಿ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿಗಳನ್ನು ಜಾರಿಗೆ ತರಬೇಕು” ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಸಭೆಯಲ್ಲಿ ಭಾಗವಹಿಸುವ ವಿವಿಧ ರಾಜ್ಯಗಳ ರಾಜಕೀಯ ಪಕ್ಷಗಳು ತಮ್ಮ ಶಾಸಕಾಂಗ ಸಭೆಗಳಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಸೂಕ್ತ ನಿರ್ಣಯಗಳನ್ನು ತರುತ್ತವೆ ಎಂದು ಸಮಿತಿ ಹೇಳಿದೆ. “ಜೆಎಸಿ [ಜಂಟಿ ಕ್ರಿಯಾ ಸಮಿತಿ] ಹಿಂದಿನ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗಳ ಇತಿಹಾಸ ಮತ್ತು ಸಂದರ್ಭ ಮತ್ತು ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆಯ ಪರಿಣಾಮಗಳ ಕುರಿತು ಮಾಹಿತಿಯನ್ನು ಸಂಘಟಿತ ಸಾರ್ವಜನಿಕ ಅಭಿಪ್ರಾಯ ಕ್ರೋಢೀಕರಣ ತಂತ್ರದ ಮೂಲಕ ಆಯಾ ರಾಜ್ಯಗಳ ನಾಗರಿಕರಲ್ಲಿ ಪ್ರಸಾರ ಮಾಡಲು ಅಗತ್ಯ ಪ್ರಯತ್ನಗಳನ್ನು ಕೈಗೊಳ್ಳುತ್ತದೆ” ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಪ್ರತಿನಿಧಿಸುವ ರಾಜ್ಯಗಳ ಸಂಸದರನ್ನು ಒಳಗೊಂಡ ಕ್ರಿಯಾ ಸಮಿತಿಯು, “ಮೇಲೆ ತಿಳಿಸಿದ ತತ್ವಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರವು ಯಾವುದೇ ಗಡಿ ನಿರ್ಣಯ ಪ್ರಕ್ರಿಯೆಯನ್ನು ಕೈಗೊಳ್ಳುವ ಯಾವುದೇ ಪ್ರಯತ್ನಗಳನ್ನು ಎದುರಿಸಲು ಸಂಸದೀಯ ಕಾರ್ಯತಂತ್ರಗಳನ್ನು ಸಂಘಟಿಸುತ್ತದೆ” ಎಂದು ಅದು ಹೇಳಿದೆ. ಪ್ರಸ್ತಾವಿತ ಪ್ರಕ್ರಿಯೆಯ ಕುರಿತು ನಡೆಯುತ್ತಿರುವ ಸಂಸತ್ತಿನ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕೋರ್ ಸಮಿತಿಯು ಜಂಟಿ ಮನವಿಯನ್ನು ಸಲ್ಲಿಸುತ್ತದೆ ಎಂದು ನಿರ್ಣಯವು ಹೇಳಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ದೇಶಾದ್ಯಂತ ಕನಿಷ್ಠ ಐದು ರಾಜ್ಯಗಳ ಹದಿನಾಲ್ಕು ನಾಯಕರು ಸಭೆಯಲ್ಲಿ ಹಾಜರಿದ್ದರು.

ಫೆಬ್ರವರಿ 25 ರಂದು, ಕ್ಷೇತ್ರ ಪುನರ್‌ವಿಂಗಡನೆಯು ತಮ್ಮ ರಾಜ್ಯದ ಎಂಟು ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಸ್ಟಾಲಿನ್ ಹೇಳಿಕೊಂಡಿದ್ದರು. ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯಿಸಿ, ಕ್ಷೇತ್ರ ಪುನರ್‌ವಿಂಗಡನೆಯಿಂದ ದಕ್ಷಿಣ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು. ಅದಾಗ್ಯೂ, ಅವರ ಹೇಳಿಕೆಯನ್ನು ಸಿಎಂದ ಸ್ಟಾಲಿನ್ ನಿರಾಕರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...