ಕರ್ನಾಟಕದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ವಿಷಯದ ಬಗ್ಗೆ ರಾಜ್ಯಸಭೆಯಲ್ಲಿ ಆಡಳಿತರೂಢ ಮತ್ತು ವಿಪಕ್ಷಗಳ ನಡುವೆ ತೀವ್ರ ಗದ್ದಲ ಏರ್ಪಟ್ಟಿದ್ದು ಸೋಮವಾರ ರಾಜ್ಯಸಭೆಯ ಕಲಾಪವನ್ನು ಯಾವುದೇ ಕಲಾಪ ನಡೆಸದೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಸಂಸದರು ಗದ್ದಲ ಸೃಷ್ಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಶಕ್ತಿ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಕರ್ನಾಟಕದಲ್ಲಿ ಮುಸ್ಲಿಮರಿಗೆ
ಈ ವಿಚಾರದ ಬಗ್ಗೆ ಆಡಳಿತ ಪಕ್ಷದವರು ಘೋಷಣೆ ಕೂಗುತ್ತಿದ್ದಂತೆ ಸಭಾಪತಿ ಜಗದೀಪ್ ಧನಖರ್ ಅವರು ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಿದ್ದಾರೆ. ಸದನವು ಸಭೆ ಸೇರುತ್ತಿದ್ದಂತೆಯೇ ಬಿಜೆಪಿ ಸಂಸದರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಧನಖರ್ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಲು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಅವಕಾಶ ನೀಡಿದರು.
ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಪಕ್ಷವು ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಹೇಳಿದ್ದಾರೆ ಎಂದು ರಿಜಿಜು ಹೇಳಿದರು. ಅವರು ‘ನಾಯಕ’ನ ಹೆಸರನ್ನು ಹೆಸರಿಸದಿದ್ದರೂ, ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
“ಈ ಹೇಳಿಕೆಯನ್ನು ನಾವು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದು ಕಿರಣ್ ರಿಜಿಜು ಹೇಳಿದ್ದು, ಈ ಹೇಳಿಕೆಯು ಪಕ್ಷದ ಯಾವುದೊ ಒಬ್ಬ ಸಾಮಾನ್ಯ ನಾಯಕರಿಂದ ಬಂದಿದ್ದಲ್ಲ, ಬದಲಾಗಿ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯಿಂದ ಬಂದಿದೆ ಎಂದು ಹೇಳಿದ್ದಾರೆ. ಇದು “ಅತ್ಯಂತ ಗಂಭೀರ” ಎಂದು ಹೇಳಿದ ಅವರು, ಧರ್ಮಾಧಾರಿತ ಮೀಸಲಾತಿ ಒದಗಿಸಲು ಸಂವಿಧಾನವನ್ನು ಬದಲಾಯಿಸುವುದನ್ನು “ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಸಂವಿಧಾನದ ಪುಸ್ತಕವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ ಆದರೆ ಅದನ್ನು ದುರ್ಬಲಗೊಳಿಸಲು ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಧನಖರ್ ಅವರು ಬಿಜೆಪಿ ಏನು ಬಯಸುತ್ತದೆ ಎಂದು ಕೇಳಿದ್ದು, ಇದಕ್ಕೆ ಉತ್ತರಿಸಿದ ಸಚಿವ ಕಿರಣ್, ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ಏಕೆ ಬದಲಾಯಿಸಲು ಬಯಸುತ್ತದೆ ಎಂದು ಸದನ ಮತ್ತು ರಾಷ್ಟ್ರಕ್ಕೆ ತಿಳಿಸಬೇಕು ಎಂದು ಹೇಳಿದ್ದಾರೆ.
ಸದನದ ನಾಯಕ ಮತ್ತು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಕಾಂಗ್ರೆಸ್ ಸಂವಿಧಾನವನ್ನು ತುಂಡು ತುಂಡಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂಬೇಡ್ಕರ್ ಭಾರತೀಯ ಸಂವಿಧಾನವನ್ನು ರಚಿಸುವಾಗ “ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ… ಅದು ಭಾರತದ ಸಂವಿಧಾನದ ಅಂಗೀಕೃತ ತತ್ವ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ, ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಮರಿಗೆ
ಈ ವೇಳೆ ಧನಕರ್ ಅವರು, ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಗುತ್ತಿಗೆಗಳಲ್ಲಿ ಶೇಕಡಾ 4 ರಷ್ಟು ಮೀಸಲಾತಿಯನ್ನು ಒದಗಿಸಿರುವ ಬಗ್ಗೆ ಅವರು ಖರ್ಗೆ ಅವರಿಂದ ಹೇಳಿಕೆಯನ್ನು ಕೋರಿದರು. ಜೊತೆಗೆ, ಕರ್ನಾಟಕದ ಸಚಿವರ ಹೇಳಿಕೆಗಳನ್ನು ದೃಢೀಕರಿಸುವಂತೆ ಅವರು ಕೇಂದ್ರ ಸಚಿವ ಕಿರಣ್ ಅವರನ್ನು ಕೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ ಅವರು, “ಅಂಬೇಡ್ಕರ್ ಒದಗಿಸಿದ ಸಂವಿಧಾನವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಜನರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದವರು ನಾವು (ಮತ್ತು) ಇವರು ಭಾರತ್ ತೋಡೋ (ಭಾರತವನ್ನು ಮುರಿಯುವುದರಲ್ಲಿ) ನಲ್ಲಿ ನಂಬಿಕೆ ಇಟ್ಟವರು” ಎಂದು ಅವರು ಬಿಜೆಪಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.
ನಂತರ ಅವರು ಮತ್ತಷ್ಟು ಮಾತನಾಡಲು ಪ್ರಯತ್ನಿಸಿದರಾದರೂ, ಬಿಜೆಪಿ ಸಂಸದರ ಘೋಷಣೆಗಳ ಕಾರಣಕ್ಕೆ ಅವರ ಭಾಷಣಕ್ಕೆ ಪದೇ ಪದೇ ಅಡ್ಡಿಯಾಯಿತು. ಈ ವೇಳೆ ಸಭಾಪತಿ ಧನಖರ್ ಅವರು ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಿದಾಗಿ ಹೇಳಿದರು.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ

