Homeಮುಖಪುಟಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

ಮಹಾರಾಷ್ಟ್ರ ಡಿಸಿಎಂ ವಿರುದ್ಧ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಹಾಸ್ಯನಟ ಕುನಾಲ್ ಕಮ್ರಾ!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಇತ್ತೀಚಿನ ಹೇಳಿಕೆಗಳಿಗೆ ರಾಜಕೀಯ ವಿರೋಧ ಹೆಚ್ಚುತ್ತಿವೆ. ಈ ನಡುವೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕಾರ್ಮಿಕರು ಸೋಮವಾರ ಮುಂಬೈನ ಹ್ಯಾಬಿಟೇಟ್ ಸ್ಟುಡಿಯೋಗೆ ಆಗಮಿಸಿದ್ದಾರೆ. ಈ ವೇಳೆ ಅವರು ನಿಯಮ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳದ ಕೆಲವು ಭಾಗಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ ಎಂದು NDTV ವರದಿ ಮಾಡಿದೆ. ಮಹಾರಾಷ್ಟ್ರ ಡಿಸಿಎಂ

ವರದಿಯ ಪ್ರಕಾರ, BMC ಅಧಿಕಾರಿಗಳು ಅಧಿಕೃತ ವಿವರಗಳನ್ನು ನೀಡದ ಕಾರಣ, ಈ ಆಪಾದಿತ ಉಲ್ಲಂಘನೆಗಳ ನಿಖರ ಸ್ವರೂಪ ಸ್ಪಷ್ಟವಾಗಿಲ್ಲ. ಆದಾಗ್ಯೂ, ಹಲವಾರು ಅಧಿಕಾರಿಗಳು ಖಾರ್‌ನಲ್ಲಿರುವ ಯುನಿಕಾಂಟಿನೆಂಟಲ್ ಹೋಟೆಲ್ ಒಳಗೆ ಇರುವ ಸ್ಥಳಕ್ಕೆ ಸುತ್ತಿಗೆಗಳನ್ನು ಹಿಡಿದು ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಈ ಮಧ್ಯೆ, ಶಿಂಧೆ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾದ ತನ್ನ ‘ಗದ್ದಾರ್’ ಅಥವಾ ‘ದೇಶದ್ರೋಹಿ’ ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಗಳು ನಿರ್ದೇಶಿಸಿದರೆ ಮಾತ್ರ ತಾನು ಕ್ಷಮೆಯಾಚಿಸುತ್ತೇನೆ ಎಂದು ಕುನಾಲ್ ಹೇಳಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಮಹಾರಾಷ್ಟ್ರ ಡಿಸಿಎಂ

ಈ ನಡುವೆ ಕುನಾಲ್ ಅವರು ಇತ್ತಿಚೆಗಿನ ಟ್ವೀಟ್‌ನಲ್ಲಿ ಭಾರತ ಸಂವಿಧಾನದ ಪ್ರತಿಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದು, ಮುಂದುವರೆಯಲು ಇರುವ ಒಂದೇ ಒಂದು ದಾರಿ ಎಂದು ಬರೆದುಕೊಂಡಿದ್ದಾರೆ ಅಷ್ಟೆ ಅಲ್ಲದೆ ಮತ್ತೊಂದು ಪೋಸ್ಟ್‌ನಲ್ಲಿ ವಿವಾದಾತ್ಮಕ ವಿಡಿಯೊವನ್ನು ಕೂಡಾ ಅವರು ಪೋಸ್ಟ್ ಮಾಡಿದ್ದಾರೆ.

ತನ್ನ ಹೇಳಿಕೆಗೆ ಕುನಾಲ್ ಕ್ಷಮೆಯಾಚಿಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಗ್ರಹದ ನಡುವೆ ಕುನಾಲ್ ಅವರು ಈ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಮಟ್ಟದ ಹಾಸ್ಯ ಮತ್ತು ಉಪಮುಖ್ಯಮಂತ್ರಿಯನ್ನು ಅವಮಾನಿಸುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಶಿಂಧೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೊತೆಗೆ ಶಿಂಧೆ ಅವರನ್ನು “ಗದ್ದಾರ್” (ದೇಶದ್ರೋಹಿ) ಎಂದು ನಿಂದನೆ ಮಾಡಿರುವುದನ್ನು ವಿರೋಧಿಸಿ ಕುನಾಲ್ ಅವರು ಪ್ರದರ್ಶನ ನೀಡಿದ್ದ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೋ ಮತ್ತು ಸ್ಟುಡಿಯೋ ಇರುವ ಹೋಟೆಲ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಪೊಲೀಸರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಇರುವ ಹೋಟೆಲ್ ಯುನಿಕಾಂಟಿನೆಂಟಲ್ ಹೊರಗೆ ಭಾನುವಾರ ರಾತ್ರಿ ಹಲವಾರು ಶಿವಸೇನಾ ಕಾರ್ಯಕರ್ತರು ಜಮಾಯಿಸಿದ್ದರು. ಅವರು ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ಶಿಂಧೆ ಅವರೊಂದಿಗೆ ಕ್ಷಮೆಯಾಚಿಸದಿದ್ದರೆ ಪಕ್ಷದ ಕಾರ್ಯಕರ್ತರು ಕುನಾಲ್‌ ಅವರನ್ನು ಬೀದಿಗಳಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಶಿವಸೇನಾ ಶಾಸಕ ಮುರ್ಜಿ ಪಟೇಲ್ ಹೇಳಿದ್ದಾರೆ.

ಶಿಂಧೆ ಕಾರ್ಯಕರ್ತರು ತಮ್ಮ ಆವರಣವನ್ನು ಧ್ವಂಸ ಮಾಡಿದ ನಂತರ ಸೋಮವಾರ ಕಾರ್ಯಕ್ರಮ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ ಮುಚ್ಚುವುದಾಗಿ ಘೋಷಿಸಿತು. ಈ ಬಗ್ಗೆ ಸೋಮವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸ್ಟುಡಿಯೋ, “ನಮ್ಮನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ವಿಧ್ವಂಸಕ ಕೃತ್ಯಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ, ಚಿಂತಿತರಾಗಿದ್ದೇವೆ ಮತ್ತು ತೀವ್ರವಾಗಿ ಭೀತರಾಗಿದ್ದೇವೆ. ಕಲಾವಿದರ ಅಭಿಪ್ರಾಯಗಳು ಮತ್ತು ಸೃಜನಶೀಲ ಆಯ್ಕೆಗಳಿಗೆ ಅವರೆ ಜವಾಬ್ದಾರರಾಗಿದ್ದು, ಅವರ ಪ್ರದರ್ಶನದ ವಿಷಯದಲ್ಲಿ ತಾನು ಎಂದಿಗೂ ಭಾಗಿಯಾಗಿಲ್ಲ” ಎಂದು ಹೇಳಿದೆ.

“ಆದರೆ ಇತ್ತೀಚಿನ ಘಟನೆಗಳು, ನಾವು ಪ್ರದರ್ಶಕರ ಪ್ರತಿನಿಧಿಗಳಾಗಿರುವಂತೆಯೇ ಪ್ರತಿ ಬಾರಿಯೂ ನಮ್ಮನ್ನು ಹೇಗೆ ದೂಷಿಸಲಾಗುತ್ತದೆ ಮತ್ತು ಗುರಿಯಾಗಿಸಲಾಗುತ್ತದೆ ಎಂಬುದರ ಕುರಿತು ಪುನರ್ವಿಮರ್ಶೆ ಮಾಡುವಂತೆ ಮಾಡಿದೆ. ನಮ್ಮನ್ನು ಮತ್ತು ನಮ್ಮ ಆಸ್ತಿಯನ್ನು ಅಪಾಯಕ್ಕೆ ಸಿಲುಕಿಸದೆ ಮುಕ್ತ ಅಭಿವ್ಯಕ್ತಿಗೆ ವೇದಿಕೆಯನ್ನು ಒದಗಿಸುವ ಅತ್ಯುತ್ತಮ ಮಾರ್ಗವನ್ನು ನಾವು ಕಂಡುಕೊಳ್ಳುವವರೆಗೆ ನಾವು ಸ್ಟುಡಿಯೊ ಮುಚ್ಚುತ್ತಿದ್ದೇವೆ. ಎಲ್ಲಾ ಕಲಾವಿದರು, ಪ್ರೇಕ್ಷಕರು ಮತ್ತು ಪಾಲುದಾರರನ್ನು ಚರ್ಚಿಸಲು ಮತ್ತು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಾವು ಆಹ್ವಾನಿಸುತ್ತೇವೆ. ಪ್ರದರ್ಶಕರ ಹಕ್ಕುಗಳನ್ನು ಗೌರವಿಸಲು ನಿಮ್ಮ ಮಾರ್ಗದರ್ಶನವನ್ನು ಕೋರುತ್ತೇವೆ” ಎಂದು ಅದರ ಟಿಪ್ಪಣಿ ಹೇಳಿದೆ.

ಸೋಮವಾರ ಹಾಕಿದ್ದ ಪೋಸ್ಟ್‌ನಲ್ಲಿ “ಕುನಾಲ್ ಕಾಮ್ರಾ ಅವರ ಇತ್ತೀಚಿನ ವೀಡಿಯೊ ತಯಾರಿಕೆಯಲ್ಲಿ ಹ್ಯಾಬಿಟ್ಯಾಟ್ ಭಾಗಿಯಾಗಿಲ್ಲ. ಅದು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ನಾವು ಅನುಮೋದಿಸುವುದಿಲ್ಲ” ಎಂದು ಅದು ಹೇಳಿತ್ತು. ಕುನಾಲ್‌ ಅವರ ಪ್ರದರ್ಶನ ನಡೆದ ಹ್ಯಾಬಿಟ್ಯಾಟ್ ಸ್ಟುಡಿಯೋ, ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಪ್ರದರ್ಶನವನ್ನು ಚಿತ್ರೀಕರಿಸಿದ್ದ ಅದೇ ಸ್ಥಳವಾಗಿದ್ದು, ಕಳೆದ ತಿಂಗಳು ದೊಡ್ಡ ವಿವಾದಕ್ಕೆ ಈ ಸ್ಥಳ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...