Homeಕರ್ನಾಟಕಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಕರ್ನಾಟಕದಾದ್ಯಂತ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿ ಖಜಾಂಜಿ ಹುದ್ದೆ ಮತ್ತು ಒಟ್ಟು ಹುದ್ದೆಗಳಲ್ಲಿ ಶೇ.30ರಷ್ಟು ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ (ಮಾ.24) ಆದೇಶಿಸಿದೆ.

ಬೆಂಗಳೂರಿನ ವಕೀಲರ ಸಂಘದ (ಎಎಬಿ) ಪ್ರಕರಣದಲ್ಲಿ ನೀಡಲಾದ ನಿರ್ದೇಶನವು ಕರ್ನಾಟಕದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಇಂತಹ ನಿರ್ದೇಶನ ನೀಡಿತ್ತು. ಅಲ್ಲದೆ, ಈ ವರ್ಷದ ಜನವರಿ 24 ರಂದು ಹೊರಡಿಸಿದ ಆದೇಶದಲ್ಲಿ, ಖಜಾಂಚಿ (ಕೋಶಾಧಿಕಾರಿ) ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆಂದೇ ಮೀಸಲಿಡಬೇಕೆಂದು ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಎಬಿ ಚುನಾವಣೆ ನಡೆದಿರುವ ಬಗ್ಗೆ ಎರಡು ದಿನಗಳ ಹಿಂದೆ ಪೀಠದ ಗಮನಕ್ಕೆ ತರಲಾಗಿತ್ತು. ಜನವರಿ 28ರಂದು ಎಎಬಿ ಆಡಳಿತ ಮಂಡಳಿಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಮೀಸಲಾತಿ ಜಾರಿಗೆ ತಂದಿರುವುದಾಗಿ ತಿಳಿಸಲಾಗಿತ್ತು.

ರಾಜ್ಯದ ಎಲ್ಲಾ ವಕೀಲರ ಸಂಘಗಳ ಚುನಾವಣೆಗಳಲ್ಲಿ ಮಹಿಳಾ ವಕೀಲರಿಗೆ ಶೇಖಡ 30ರಷ್ಟು ಮೀಸಲಾತಿ ನಿಗದಿಪಡಿಸಿ ನಿರ್ದೇಶನ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

ವಿವಿಧ ಜಿಲ್ಲಾ ವಕೀಲರ ಸಂಘಗಳಿಗೆ ಚುನಾವಣೆಗಳು ಬಾಕಿ ಉಳಿದಿರುವುದನ್ನು ಗಮನಿಸಿದ ನ್ಯಾಯಾಲಯ, ಎಎಬಿಗೆ ನೀಡಿದ್ದ ಮಹಿಳಾ ಮೀಸಲಾತಿಯ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘದ ಚುನಾವಣೆಗಳಿಗೂ ಅನ್ವಯಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಎಲ್ಲಾ ಜಿಲ್ಲಾ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ ಖಜಾಂಚಿ ಹುದ್ದೆ ಮತ್ತು ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿ ಹುದ್ದೆಗಳ ಶೇಖಡ 30ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ನಿರ್ದೇಶಿಸಿದೆ.

ಎಎಬಿಯಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಕೂಡ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.

ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ​​(ಟಿಬಿಎ) ಮಹಿಳಾ ವಕೀಲರಿಗೆ ಶೇ. 33ರಷ್ಟು ಮೀಸಲಾತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಏಪ್ರಿಲ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಜಂಟಿ ಕಾರ್ಯದರ್ಶಿ ಹುದ್ದೆ ಮತ್ತು ಎರಡು ಕಾರ್ಯಕಾರಿ ಮಂಡಳಿ ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಸಂಘ ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನಂತರ ಆದೇಶ ಹೊರಡಿಸಿದೆ.

ಮುಂಬರುವ ಚುನಾವಣೆಗಳು ಪೂರ್ಣಗೊಂಡ ನಂತರ ಈ ಬದಲಾವಣೆಗಳನ್ನು ಅಳವಡಿಸಲು ಸಂಘದ ಬೈಲಾಗಳನ್ನು ಸಹ ತಿದ್ದುಪಡಿ ಮಾಡಲಾಗುವುದು ಎಂದು ಟಿಬಿಎ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಆದೇಶ ನೀಡುವ ವೇಳೆ, ಈಗ ಮೀಸಲಾತಿ ಜಾರಿ ಮಾಡಲಿಲ್ಲ ಎಂದರೆ ಯಾವಾಗ ಮಾಡುವಿರಿ? ಎಂದು ಪ್ರಶ್ನಿಸಿದ್ದ ನ್ಯಾ. ನಾಗಪ್ರಸನ್ನ ಅವರು “ವಕೀಲರ ಸಂಘಗಳನ್ನು ಬಾಯ್ಸ್‌ ಕ್ಲಬ್‌ ಆಗಿರಲು ಬಿಡಲಾಗದು” ಎಂದಿದ್ದರು.

ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಖಜಾಂಜಿ ಹುದ್ದೆ ಮತ್ತು ಶೇಖಡ 33ರಷ್ಟು ಮೀಸಲಾತಿ ನೀಡುವಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘಗಳಿಗೆ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೂಲ ಅರ್ಜಿಯಲ್ಲಿ ಕೋರಲಾಗಿತ್ತು. ಮಹಿಳಾ ವಕೀಲರಿಗೆ ಮೀಸಲಾತಿ ನೀಡುವಲ್ಲಿ ಯಾವುದೇ ಕಾನೂನು ಅಡಚಣೆ ಇಲ್ಲ ಎಂದು ಹೇಳಲಾಗತ್ತು.

ದೆಹಲಿ ಮಾರಾಟ ತೆರಿಗೆ ವಕೀಲರ ಸಂಘ ​​ಮತ್ತು ದೆಹಲಿ ತೆರಿಗೆ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಖಜಾಂಚಿ ಹುದ್ದೆ ಮತ್ತು ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಸ್ಥಾನಗಳನ್ನು ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಕೀಲರ ಸಂಘದ ​​ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಬೇಕು ಎಂದು ಈ ವರ್ಷದ ಜನವರಿ 20ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ದೆಹಲಿ ಹೈಕೋರ್ಟ್ ವಕೀಲರ ಸಂಘದ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಮೂರು ಹುದ್ದೆಗಳನ್ನು ಕಾಯ್ದಿರಿಸುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಜಿಲ್ಲಾ ವಕೀಲರ ​ಸಂಘಗಳ ​ಚುನಾವಣೆಯಲ್ಲಿ, ಖಜಾಂಚಿ ಹುದ್ದೆ ಮತ್ತು ಇತರ ಕಾರ್ಯಕಾರಿ ಸಮಿತಿ ಹುದ್ದೆಗಳಲ್ಲಿ ಶೇ. 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ (ಈಗಾಗಲೇ ಮಹಿಳೆಯರಿಗೆ ಮೀಸಲಿಟ್ಟ ಹುದ್ದೆಗಳನ್ನು ಒಳಗೊಂಡಂತೆ) ಮೀಸಲಿಡಬೇಕು ಎಂದು ಹೇಳಿತ್ತು.

ಕಳೆದ ವರ್ಷ ಸೆಪ್ಟೆಂಬರ್ 26 ರಂದು, ಸುಪ್ರೀಂ ಕೋರ್ಟ್ DHCBA ಗೆ ಐದು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಮತ್ತೊಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ನಿರ್ದೇಶನ ನೀಡಿತು.

ಐವರು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಒಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ವಕೀಲರ ಸಂಘಕ್ಕೆ ನಿರ್ದೇಶನ ನೀಡಿತ್ತು.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...