Homeಮುಖಪುಟ'ಭೂ ಜಿಹಾದ್' ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

- Advertisement -
- Advertisement -

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಮಸೀದಿಯನ್ನು “ಅಕ್ರಮ” ಮತ್ತು “ಭೂ ಜಿಹಾದ್”ನ ಭಾಗ ಎಂದು ಕರೆದು ಕೆಡವಲು ಹಿಂದುತ್ವ ಗುಂಪುಗಳು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿವೆ.

ತಮ್ಮ ಪ್ರತಿಭಟನೆಯ ಭಾಗವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಸದಸ್ಯರು ಭಾನುವಾರದಂದು ಹತೈ ಖೇಡಾ ಪ್ರದೇಶದ ಮಸೀದಿಯ ಕಡೆಗೆ ಜೆಸಿಬಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಮೆರವಣಿಗೆ ನಡೆಸಿದರು. ಮೂರು ಅಂತಸ್ತಿನ ಮಸೀದಿಯ ಕೆಲವು ಭಾಗಗಳು ನಿರ್ಮಾಣ ಹಂತದಲ್ಲಿವೆ. ಪ್ರತಿಭಟನೆಯ ನಂತರ ಆಡಳಿತವು ಸದ್ಯಕ್ಕೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಭಾನುವಾರ ಹಿಂದಿ ಸುದ್ದಿವಾಹಿನಿ ಜೀ ನ್ಯೂಸ್ ವರದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಆಡಳಿತವು ಮಸೀದಿಯ ವಿರುದ್ಧ ಬುಲ್ಡೋಜರ್ ಕ್ರಮಕೈಗೊಳ್ಳದಿದ್ದರೆ ತಾವೇ ಧಾರ್ಮಿಕ ಸ್ಥಳವನ್ನು ಕೆಡವುತ್ತೇವೆ ಎಂದು ಹೇಳಿದ್ದಾರೆ. ಹಿಂದುತ್ವ ಪ್ರತಿಭಟನಾಕಾರರು “ಭೂ ಜಿಹಾದ್‌ಗೆ ಅವಕಾಶ ನೀಡಲಾಗುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು.

“ನಾವು ಯಾವುದೇ ಬೆಲೆ ತೆತ್ತಾದರೂ ಮಸೀದಿಯನ್ನು ಕೆಡವುತ್ತೇವೆ. ಸರ್ಕಾರ ಅನುಮತಿಸದಿದ್ದರೂ ನಾವು ಅದನ್ನು ಕೆಡವುತ್ತೇವೆ. ಸರ್ಕಾರ ಏನು ಬೇಕಾದರೂ ಮಾಡಲಿ. ಅವರು ನನ್ನನ್ನು ಕಂಬಿಗಳ ಹಿಂದೆ ಹಾಕಬಹುದು ಅಥವಾ ಗಲ್ಲಿಗೇರಿಸಬಹುದು” ಎಂದು ಮತ್ತೊಬ್ಬ ಪ್ರತಿಭಟನಾಕಾರ ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನೊಬ್ಬ ಪ್ರತಿಭಟನಾಕಾರರು ಇದು ಭೋಪಾಲ್‌ನ ಹಲವಾರು ಭಾಗಗಳಲ್ಲಿ ನಡೆಯುತ್ತಿರುವ “ಭೂ ಜಿಹಾದ್” ಎಂದು ಹೇಳಿದ್ದಾರೆ. ಅವರು ಮೂರು ಅಂತಸ್ತಿನ ಮಸೀದಿ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಗುಂಪೊಂದು ಬುಲ್ಡೋಜರ್ ಮೇಲೆ ಹತ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಮತ್ತೊಂದೆಡೆ ಹಿಂದೂ ಗುಂಪುಗಳು ದೇಶಾದ್ಯಂತ ಮಸೀದಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ ಎಂದು ಮುಸ್ಲಿಮರು ಹೇಳುತ್ತಿದ್ದಾರೆ. “ಅವರಿಗೆ ಭಾರತದ ಎಲ್ಲಾ ಮಸೀದಿಗಳೊಂದಿಗೆ ಸಮಸ್ಯೆಗಳಿವೆ. ಅವರಿಗೆ ತಾಜ್ ಮಹಲ್ ಮತ್ತು ಕೆಂಪು ಕೋಟೆಯೊಂದಿಗೆ ಸಮಸ್ಯೆ ಇದೆ. ಇತ್ತೀಚೆಗೆ ಅವರು ಸಂಭಾಲ್ ಮಸೀದಿಯ ಸಮಸ್ಯೆಗಳನ್ನು ಕೆದಕಿದ್ದಾರೆ. ದೇವಾಲಯಗಳನ್ನು ಹುಡುಕಲು ಅವರು ಎಲ್ಲಾ ಮಸೀದಿಗಳನ್ನು ಅಗೆಯುತ್ತಿದ್ದಾರೆ ಎಂದು ಸ್ಥಳೀಯ ಮುಸ್ಲಿಂ ಒಬ್ಬರು ವ್ಯಂಗ್ಯವಾಗಿ ಹೇಳಿದರು.

“ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಸಮಸ್ಯೆಗಳನ್ನು ಸೃಷ್ಟಿಸಲು ಸರ್ಕಾರ ಅವರನ್ನು ಉತ್ತೇಜಿಸುತ್ತಿದೆ. ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ. ಈ ಭೂಮಿ ಸರ್ಕಾರಕ್ಕೆ ಸೇರಿಲ್ಲ. ಮಸೀದಿಯ ಬಳಿ ಆ ಭೂಮಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ” ಎಂದು ಅವರು ಹೇಳಿದರು.

ಮಸೀದಿಯನ್ನು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ವಿಎಚ್‌ಪಿ ಸದಸ್ಯರು ಆರೋಪಿಸಿದ್ದಾರೆ. ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಒದಗಿಸದೆ, ರೋಹಿಂಗ್ಯಾ ಮುಸ್ಲಿಮರನ್ನು ಈ ಪ್ರದೇಶದಲ್ಲಿ ನೆಲೆಸಲು ಕರೆತರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂತ್ವ ಗುಂಪುಗಳು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಳ್ವಿಕೆ ನಡೆಸುವ ರಾಜ್ಯಗಳಲ್ಲಿನ ಆಡಳಿತವು ಅತಿಕ್ರಮಣಗಳನ್ನು ತೆರವುಗೊಳಿಸುವ ಹೆಸರಿನಲ್ಲಿ ಮಸೀದಿಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದೆ. ಕೇಸರಿ ಗುಂಪುಗಳು ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ, ಗುಜರಾತ್ ಮತ್ತು ಈಗ ಮಧ್ಯಪ್ರದೇಶದಲ್ಲಿನ ಮಸೀದಿಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿವೆ. ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಈಗಾಗಲೇ ಕೆಲವು ಮಸೀದಿಗಳನ್ನು ಕೆಡವಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...