ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಲೆಕ್ಕಕ್ಕೆ ಸಿಗದ ಹಣ ಪತ್ತೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ರಸ್ತಾವನೆಯನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ವರ್ಮಾ
“ಅಲಹಾಬಾದ್ ಹೈಕೋರ್ಟ್ ಅನ್ನು ಕಸದ ಬುಟ್ಟಿ ಎಂದು ಪರಿಗಣಿಸಲಾಗುತ್ತಿದೆ” ಎಂದು ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮುಖ್ಯಸ್ಥ ಅನಿಲ್ ತಿವಾರಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. “[ಸುಪ್ರೀಂ ಕೋರ್ಟ್] ಅಲಹಾಬಾದ್ ಹೈಕೋರ್ಟ್‌ನ ಸ್ಥಿತಿಯ ಬಗ್ಗೆ ತಿಳಿದಿದೆ… ದೋಷವನ್ನು ಪರಿಹರಿಸುವ ಬದಲು, ನೀವು ಇಲ್ಲಿಗೆ ಮತ್ತಷ್ಟು ದೋಷಪೂರಿತ ಜನರನ್ನು ವರ್ಗಾಯಿಸಿದರೆ, ವ್ಯವಸ್ಥೆಯು ಕುಸಿಯುತ್ತದೆ.” ಎಂದು ಅವರು ಹೇಳಿದ್ದಾರೆ. ನ್ಯಾಯಮೂರ್ತಿ ವರ್ಮಾ
ತಮ್ಮ ಸಹೋದ್ಯೋಗಿಗಳೊಂದಿಗೆ ಹೈಕೋರ್ಟ್‌ನ ಗೇಟ್ ಸಂಖ್ಯೆ 3 ರಲ್ಲಿ ಪ್ರತಿಭಟನೆ ನಡೆಸಿದ ತಿವಾರಿ ಅವರು, “ಪರಿಹಾರ ಬರುವವರೆಗೆ, ಪರಿಣಾಮಗಳು ಏನೇ ಇರಲಿ, ನಾವು ಕೆಲಸವನ್ನು ಪುನರಾರಂಭಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಕೊಲಿಜಿಯಂ ವ್ಯವಸ್ಥೆಯ ಅಡಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂಕೋರ್ಟ್‌ನ ಐದು ಹಿರಿಯ ನ್ಯಾಯಮೂರ್ತಿಗಳು ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಳ ಬಗ್ಗೆ ಶಿಫಾರಸುಗಳನ್ನು ಮಾಡುತ್ತಾರೆ. ನಂತರ ಶಿಫಾರಸನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ.
#WATCH | Delhi High Court judge Justice Yashwant Varma row | Anil Tiwari, President of Allahabad High Court Bar Association says, " The main thing is that, our fight is not against any judge but against system. There are hard-working judges here, now their image is in danger.… pic.twitter.com/eqqFhrrvic
— ANI (@ANI) March 25, 2025
ಮಾರ್ಚ್ 14 ರಂದು ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಆ ಸಮಯದಲ್ಲಿ ಅವರು ಭೋಪಾಲ್‌ನಲ್ಲಿದ್ದರು ಮತ್ತು ಆ ನಗದು ಅವರ ಅಥವಾ ಅವರ ಕುಟುಂಬಕ್ಕೆ ಸೇರಿಲ್ಲ ಎಂದು ಅವರು ಹೇಳಿದ್ದಾರೆ.
ಶನಿವಾರದಂದು ನ್ಯಾಯಾಧೀಶರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ನೋಟುಗಳ ಬಂಡಲ್‌ಗಳನ್ನು ತೋರಿಸುವ ವೀಡಿಯೊ ಮತ್ತು ಮೂರು ಛಾಯಾಚಿತ್ರಗಳನ್ನು ಒಳಗೊಂಡ ವರದಿಯನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತು.
ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಶುಕ್ರವಾರ ವರ್ಮಾ ಅವರಿಗೆ ಪತ್ರ ಬರೆದು, ಅವರ ಬಂಗಲೆಯಲ್ಲಿರುವ ಕೋಣೆಯಲ್ಲಿ “ಹಣ/ನಗದು ಇರುವಿಕೆಯನ್ನು ಲೆಕ್ಕಹಾಕಲು” ಕೇಳಿದ್ದಾರೆ ಎಂದು ವರದಿ ಹೇಳಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ವರ್ಮಾ ಅವರು ಉಪಾಧ್ಯಾಯ ಅವರಿಗೆ ಪತ್ರ ಬರೆದಿದ್ದು, “ನಾನು ಅಥವಾ ನನ್ನ ಕುಟುಂಬ ಸದಸ್ಯರು ಆ ಕೋಣೆಯಲ್ಲಿ ಎಂದಿಗೂ ಹಣವನ್ನು ಇರಿಸಿಲ್ಲ” ಎಂದು ಹೇಳಿದ್ದಾರೆ.
ಅದೇ ದಿನ, ವರ್ಮಾ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು
ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

