Homeಮುಖಪುಟ'ಸ್ತನ ಹಿಡಿಯುವುದು ಅತ್ಯಾಚಾರವಲ್ಲ'; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಗಳು ಹೇಳಿವೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಬುಧವಾರ (ಮಾ.26) ಈ ಪ್ರಕರಣದ ವಿಚಾರಣೆ ನಡೆಸಲಿದೆ.

‘ಅತ್ಯಾಚಾರ ಆರೋಪ ಎಂದರೇನು’ ಎಂಬುದರ ಕುರಿತ ಅಲಹಾಬಾದ್ ಹೈಕೋರ್ಟ್‌ನ ಅವಲೋಕನವನ್ನು ಕಾನೂನು ತಜ್ಞರು ಖಂಡಿಸಿದ್ದರು. ನ್ಯಾಯಾಧೀಶರು ಸಂಯಮ ಪಾಲಿಸಬೇಕು ಎಂದು ಕರೆ ನೀಡಿದ್ದರು. ಇಂತಹ ಹೇಳಿಕೆಗಳಿಂದಾಗಿ ನ್ಯಾಯಾಂಗದ ಮೇಲಿನ ಸಾರ್ವಜನಿಕ ವಿಶ್ವಾಸ ಕುಸಿಯುತ್ತಿದೆ ಎಂದು ಒತ್ತಿ ಹೇಳಿದ್ದರು.

ಮಾರ್ಚ್ 17ರಂದು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸೆಕ್ಷನ್‌ಗಳಡಿಯಲ್ಲಿ ಸಮನ್ಸ್ ಜಾರಿ ಮಾಡಿದ್ದ ಕಾಸ್‌ಗಂಜ್‌ ಜಿಲ್ಲಾ ನ್ಯಾಯಾಲಯದ ದೇಶವನ್ನು ಪ್ರಶ್ನಿಸಿ ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ : ಈ ಪ್ರಕರಣ 2021ರ ನವೆಂಬರ್‌ 10ರಂದು ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಸಂಜೆ ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ತಮ್ಮ ಸಂಬಂಧಿಯ ಮನೆಯಿಂದ ತಮ್ಮೂರಿಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತಮ್ಮ ಗ್ರಾಮದ ಮೂವರು ಯುವಕರಾದ ಪವನ್, ಆಕಾಶ್ ಮತ್ತು ಅಶೋಕ್ ಎದುರುಗೊಂಡಿದ್ದರು. ಅವರಲ್ಲಿ ಪವನ್ ಎಂಬಾತ ಮಹಿಳೆಯ ಮಗಳನ್ನು ತನ್ನ ಬೈಕ್‌ನಲ್ಲಿ ಮನೆಗೆ ಕರೆದೊಯ್ಯುವುದಾಗಿ ಹೇಳಿದ್ದ. ಆತನನ್ನು ನಂಬಿದ ಸಂತ್ರಸ್ತೆ ಮಗಳನ್ನು ಕಳಿಸಿದ್ದರು. ಆದರೆ, ಬಾಲಕಿಯನ್ನು ಕರೆದೊಯ್ದ ಆರೋಪಿಗಳು ದಾರಿ ಮಧ್ಯೆ ಬೈಕ್‌ ನಿಲ್ಲಿಸಿ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಪವನ್ ಮತ್ತು ಆಕಾಶ್ ಬಾಲಕಿಯ ಸ್ತನಗಳನ್ನು ಹಿಡಿದು, ಆಕೆಯ ಪೈಜಾಮದ ದಾರವನ್ನು ಬಿಚ್ಚಿ, ಪೈಜಾಮವನ್ನು ಕೆಳಗೆ ಎಳೆಯಲು ಯತ್ನಿಸಿದ್ದರು. ಈ ವೇಳೆಗೆ ಸ್ಥಳೀಯರು ಸ್ಥಳಕ್ಕೆ ಬಂದ ಕಾರಣ, ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅತ್ಯಾಚಾರ ಆರೋಪದ ಮೇಲೆ ಐಪಿಸಿ ಸೆಕ್ಷನ್‌ 376(ಅತ್ಯಾಚಾರ) ಅಡಿಯಲ್ಲಿ ಆರೋಪಿಗಳಾದ ಪವನ್‌ ಮತ್ತು ಆಕಾಶ್‌ಗೆ ಸಮನ್ಸ್ ಜಾರಿ ಮಾಡಲು ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮೋಹನ್‌ ನಾರಾಯನ್ ಮಿಶ್ರಾ ಅವರು “ಸ್ತನ ಮುಟ್ಟುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಸೇನಾ ಅಧಿಕಾರಿ ಮೇಲೆ ಹಲ್ಲೆ | ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...

ಇಂಧನ ಬಿಕ್ಕಟ್ಟು: ‘ಭಾರತದಲ್ಲಿ ಲಾಕ್‌ಡೌನ್ ಇಲ್ಲ’: ‘ಅಂತಹ ಯಾವುದೇ ಪ್ರಸ್ತಾಪ ಪರಿಗಣನೆಯಲ್ಲಿಲ್ಲ’; ಹರ್ದೀಪ್ ಪುರಿ ಸ್ಪಷ್ಟನೆ

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಎಲ್‌ಪಿಜಿ ಬಿಕ್ಕಟ್ಟಿನ ಮಧ್ಯೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾರತದಲ್ಲಿ ಲಾಕ್‌ಡೌನ್ ವದಂತಿಗಳು "ಸುಳ್ಳು" ಎಂದು ಹೇಳಿದ್ದಾರೆ. ಇಂಧನ ಬಿಕ್ಕಟ್ಟಿನ ಕಳವಳಗಳನ್ನು ತಿಳಿಸುತ್ತಾ...

ವಿಶೇಷ ಸಚಿವ ಸಂಪುಟ ಮುಂದೂಡಿದ ಸರ್ಕಾರ; ಒಳಮೀಸಲಾತಿ ನಿರ್ಧಾರ ಮತ್ತಷ್ಟು ವಿಳಂಬ

ಪರಿಶಿಷ್ಟ ಜಾತಿಯೊಳಗಿನ (ಎಸ್‌ಸಿ) ಒಳಮೀಸಲಾತಿ ಜಾರಿ ಸಂಬಂಧ ಇಂದು ಸರ್ಕಾರ ನಡೆಸಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಉಪಚುನಾವಣೆ 'ಮಾದರಿ ನೀತಿ ಸಂಹಿತೆ' ಕಾರಣ ಮುಂದಿಟ್ಟು ಮುಂದೂಡಿದೆ. ಆ ಮೂಲಕ, ಒಳಮೀಸಲಾತಿ ನಿರ್ಧಾರವನ್ನು...

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...