Homeಕರ್ನಾಟಕಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

- Advertisement -
- Advertisement -

ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಮತ್ತು ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪದ ಕುರಿತು ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಬುಧವಾರ (ಮಾ.26) ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಮಾರ್ಚ್ 26 ರಂದು ಬಿನಯ್ ಕುಮಾರ್ ಸಿಂಗ್ ಎಂಬವರು ವಕೀಲ ಬರುಣ್ ಕುಮಾರ್ ಸಿನ್ಹಾ ಮೂಲಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ.

“ಕರ್ನಾಟಕದ ಮುಖ್ಯಮಂತ್ರಿಯಾಗಲು ಆಕಾಂಕ್ಷಿಯಾಗಿರುವ ವ್ಯಕ್ತಿಯೊಬ್ಬರು ನ್ಯಾಯಾಧೀಶರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಈ ಆರೋಪಗಳನ್ನು ಹಾಲಿ ಸಚಿವರೊಬ್ಬರು ಮಾಡಿದ್ದಾರೆ. ಅವರು ತಮ್ಮನ್ನು ಬಲಿಪಶು ಎಂದು ಹೇಳಿಕೊಂಡಿದ್ದಾರೆ. ಇದು ಆರೋಪವನ್ನು ಪುಷ್ಠೀಕರಿಸುತ್ತದೆ. ಅಷ್ಟೇ ಅಲ್ಲ, ಸರ್ಕಾರದ ಮತ್ತೊಬ್ಬರು ಸಚಿವರು ಈ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ. ಈ ಪ್ರಕರಣವು ಈಗ ಮಾಡಿರುವ ಆರೋಪಕ್ಕಿಂತ ಹತ್ತು ಪಟ್ಟು ದೊಡ್ಡದಿದೆ” ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾಗಿ ವರದಿ ವಿವರಿಸಿದೆ.

“ಹನಿಟ್ರ್ಯಾಪ್‌ನಂತಹ ವಿಧಾನಗಳಿಂದ ನ್ಯಾಯಾಧೀಶರು ರಾಜಿ ಮಾಡಿಕೊಳ್ಳುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯ ಎದುರಾಗುತ್ತದೆ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಗಂಭೀರ ಹಾನಿಯಾಗುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

“ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಿಂದ, ಈ ಪ್ರಕರಣದ ಸಂಬಂಧ ಜನರಲ್ಲಿ  ಈಗಾಗಲೇ ಸಾಕಷ್ಟು ಆಕ್ರೋಶ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿನ ಖ್ಯಾತಿ ಮತ್ತು ಸಾರ್ವಜನಿಕ ವಿಶ್ವಾಸವನ್ನು ಉಳಿಸಲು ನ್ಯಾಯಾಲಯವು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದು ಅತ್ಯಗತ್ಯ” ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಧನ್ಬಾದ್ ನಿವಾಸಿಯಾಗಿರುವ ಅರ್ಜಿದಾರರು ಮಾಧ್ಯಮ ವರದಿಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ಹೇಳಿದೆ. ರಾಜಿ ಮಾಡಿಕೊಂಡ ನ್ಯಾಯಾಂಗವು ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದಿದೆ.

“ನ್ಯಾಯಾಧೀಶರನ್ನು ಬ್ಲ್ಯಾಕ್‌ಮೇಲ್ ಮಾಡಲು ಅಥವಾ ಪಕ್ಷಪಾತದ ತೀರ್ಪುಗಳನ್ನು ನೀಡುವಂತೆ ಒತ್ತಾಯಿಸಲು ಸಾಧ್ಯವಾದರೆ, ಕಾನೂನಿನ ನಿಯಮವೇ ಕುಸಿಯುತ್ತದೆ. ಇದು ದಬ್ಬಾಳಿಕೆ, ಭ್ರಷ್ಟಾಚಾರ ಮತ್ತು ಅನ್ಯಾಯಕ್ಕೆ ದಾರಿ ಮಾಡಿಕೊಡುತ್ತದೆ. ನ್ಯಾಯಾಂಗದ ಮೇಲಿನ ಜನರ ನಂಬಿಕೆಯು ಈ ಆರೋಪಗಳಿಗೆ ತ್ವರಿತ ಮತ್ತು ರಾಜಿಯಾಗದ ಕ್ರಮದ ಮೇಲೆ ಅವಲಂಬಿತವಾಗಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಸತ್ಯವನ್ನು ಬಯಲು ಮಾಡಲು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತಟಸ್ಥ ಮತ್ತು ಸ್ವತಂತ್ರ ಸಂಸ್ಥೆಯ ನೇತೃತ್ವದಲ್ಲಿ ತನಿಖೆ ನಡೆಸುವುದು ಏಕೈಕ ಮಾರ್ಗವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಈ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ, ಅಂದರೆ ಕೇಂದ್ರ ತನಿಖಾ ದಳ ಅಥವಾ ಕರ್ನಾಟಕ ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಸಮಗ್ರತೆಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ, ಈ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ಮೇಲ್ವಿಚಾರಣೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

“ಪ್ರಕರಣದಿಂದ (ಹನಿಟ್ರ್ಯಾಪ್‌) ನೇರವಾಗಿ/ಪರೋಕ್ಷವಾಗಿ ಲಾಭ ಪಡೆದ ಎಲ್ಲಾ ಅಧಿಕಾರಿಗಳು/ವ್ಯಕ್ತಿಗಳ ಪಾತ್ರದ ಬಗ್ಗೆಯೂ ಮೇಲ್ವಿಚಾರಣಾ ಸಮಿತಿಯು ತನಿಖೆ ನಡೆಸಬೇಕು” ಎಂದು ಕೋರಲಾಗಿದೆ.

ಕರ್ನಾಟಕ ಸರ್ಕಾರದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭೆಯಲ್ಲಿ ಇತ್ತೀಚೆಗೆ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದ್ದು, ತಾನು ಮಾತ್ರ ಅಲ್ಲದೆ ವಿವಿಧ ಪಕ್ಷಗಳ 48 ನಾಯಕರನ್ನು ಹನಿಟ್ರ್ಯಾಪ್ ಜಾಲ ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು. ಅದು ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್ ಮತ್ತು ಮುನಿರತ್ನ ಧ್ವನಿಗೂಡಿಸಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಅವರು, ಹನಿಟ್ರ್ಯಾಪ್ ಯತ್ನ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...