Homeಮುಖಪುಟಡಿಜಿಟಲ್ ದತ್ತಾಂಶ ಕಾಯ್ದೆಯಿಂದ ಜನರ ಮಾಹಿತಿ ಹಕ್ಕಿಗೆ ಅಡ್ಡಿ: ರಾಹುಲ್ ಗಾಂಧಿ ಕಳವಳ

ಡಿಜಿಟಲ್ ದತ್ತಾಂಶ ಕಾಯ್ದೆಯಿಂದ ಜನರ ಮಾಹಿತಿ ಹಕ್ಕಿಗೆ ಅಡ್ಡಿ: ರಾಹುಲ್ ಗಾಂಧಿ ಕಳವಳ

- Advertisement -
- Advertisement -

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ (ಡಿಪಿಡಿಪಿಎ) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮಾ.25) ತೀವ್ರ ಕಳವಳ ವ್ಯಕ್ತಪಡಿಸಿದ್ದು, “ಇದು ಭಾರತದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕರು ಮಾಹಿತಿ ಪಡೆಯುದಕ್ಕೆ ದೊಡ್ಡ ಬೆದರಿಕೆ ಒಡ್ಡಲಿದೆ” ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ವಿವಿಧ ಕ್ಷೇತ್ರಗಳ ಹೋರಾಟಗಾರರು, ಸಂಪಾದಕರು, ಸಂಶೋಧಕರು ಮತ್ತು ಡೊಮೇನ್ ತಜ್ಞರೊಂದಿಗಿನ ಸಭೆಯ ನಂತರ ಮಾತನಾಡಿದ ಗಾಂಧಿ, “ಹೊಸ ಶಾಸನವು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಹೇಗೆ ದುರ್ಬಲಗೊಳಿಸುತ್ತದೆ” ಎಂಬುದನ್ನು ವಿವರಿಸಿದ್ದಾರೆ.

“ಇಂದು, ಸಂಸತ್ತಿನಲ್ಲಿ ವಿವಿಧ ಕ್ಷೇತ್ರಗಳ ಹೋರಾಟಗಾರರು, ಸಂಪಾದಕರು, ಸಂಶೋಧಕರು ಮತ್ತು ಡೊಮೇನ್ ತಜ್ಞರನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಅವರು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಬಗ್ಗೆ, ವಿಶೇಷವಾಗಿ ಆರ್‌ಟಿಐ ಕಾಯ್ದೆಯ ವ್ಯಾಪ್ತಿಯ ಮೇಲೆ ಅದು ಬೀರುವ ಪ್ರಭಾವದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ದತ್ತಾಂಶದ ಸಂಸ್ಕರಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯು, ಜನರು ಪ್ರಮುಖ ಸಾರ್ವಜನಿಕ ಮಾಹಿತಿಯನ್ನು ಪಡೆಯುವುದನ್ನು ನಿರ್ಬಂಧಿಸಬಹುದು. ಇದು ಆತಂಕವನ್ನು ಹುಟ್ಟುಹಾಕಿದೆ. ಗೌಪ್ಯತೆ ಮುಖ್ಯವಾದರೂ, ಶಾಸನವು ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಸಾರ್ವಜನಿಕರ ಅವಕಾಶಕ್ಕೆ ಅಡ್ಡಿಯುಂಟು ಮಾಡಬಹುದು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಗೌಪ್ಯತೆಯನ್ನು ಕಾಪಾಡುವ ನೆಪದಲ್ಲಿ ಈ ಶಾಸನವು, ನಾಗರಿಕರು ಮತ್ತು ಪತ್ರಕರ್ತರು ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಅಗತ್ಯವಾದ ಸಾರ್ವಜನಿಕ ಮಾಹಿತಿ ಪಡೆಯುವುದನ್ನು ತಡೆಯುತ್ತದೆ” ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಎನ್‌ಡಿಎ ಸರ್ಕಾರವು ಪರಿಶೀಲನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ನಿರ್ಧಾರ ತೆಗದುಕೊಳ್ಳಲಿದೆ. ಹೊಣೆಗಾರಿಕೆ ಮತ್ತು ಉತ್ತಮ ಆಡಳಿತದ ಹಿತದೃಷ್ಟಿಯಿಂದ ಈ ವಿಷಯವನ್ನು ದೇಶದ ವಿವಿಧ ವಲಯಗಳ ನಾಯಕರೊಂದಿಗೆ ಚರ್ಚಿಸಲಿದೆ. ನಮ್ಮ ಜನರ ಹಕ್ಕುಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...