Homeಮುಖಪುಟಹಣಕಾಸು ಅಕ್ರಮ | ಹಿರಿಯ ಬ್ಯಾಂಕ್ ಅಧಿಕಾರಿಯನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ

ಹಣಕಾಸು ಅಕ್ರಮ | ಹಿರಿಯ ಬ್ಯಾಂಕ್ ಅಧಿಕಾರಿಯನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ

- Advertisement -
- Advertisement -

ಸಹಕಾರಿ ಬ್ಯಾಂಕ್‌ ಒಂದರಲ್ಲಿ ಹಣಕಾಸಿನ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರಶ್ನಿಸಿದ ಅಸ್ಸಾಂನ ಡಿಜಿಟಲ್ ನ್ಯೂಸ್ ಪೋರ್ಟಲ್ ಪತ್ರಕರ್ತನನ್ನು ಬಂಧಿಸಲಾಗಿದೆ.

‘ದಿ ಕ್ರಾಸ್ ಕರೆಂಟ್’ ಎಂಬ ಡಿಜಿಟಲ್ ಸುದ್ದಿ ಸಂಸ್ಥೆಯ ಮುಖ್ಯ ವರದಿಗಾರ ದಿಲ್ವಾರ್ ಹುಸೇನ್ ಮೊಜುಂದಾರ್ ಅವರನ್ನು ಮಂಗಳವಾರ ಮಧ್ಯಾಹ್ನ ಪನ್‌ಬಜಾರ್ ಪೊಲೀಸ್ ಠಾಣೆಗೆ ಕರೆಸಿ, ಸುಮಾರು ಗಂಟೆಗಳ ಕಾಲ ಠಾಣೆಯಲ್ಲಿ ಕೂರಿಸಿ ನಂತರ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಗುವಾಹಟಿ ಪ್ರೆಸ್ ಕ್ಲಬ್‌ನ ಸಹಾಯಕ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮೊಜುಂದಾರ್ ಅವರನ್ನು ಮಧ್ಯರಾತ್ರಿಯ ಬಳಿಕ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳಡಿ ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಅಸ್ಸಾಂ ರಾಷ್ಟ್ರೀಯ ಪರಿಷತ್ತಿನ ಯುವ ಘಟಕವಾದ ರಾಷ್ಟ್ರೀಯ ಯುವ ಶಕ್ತಿ (ಜೆವೈಎಸ್) ಮಂಗಳವಾರ ಅಸ್ಸಾಂ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮುಂದೆ ಆರ್ಥಿಕ ಅಕ್ರಮಗಳ ವಿರುದ್ಧ ಧರಣಿ ನಡೆಸುತ್ತಿದ್ದಾಗ ಪತ್ರಕರ್ತ ದಿಲ್ವಾರ್ ಹುಸೇನ್ ಅವರು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊಜುಂದಾರ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿದ ದೂರುದಾರರನ್ನು ಪತ್ರಕರ್ತ ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ವರದಿಯಲ್ಲಿ, ಬಿಎನ್ಎಸ್ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ನಿಬಂಧನೆಗಳ ಪ್ರಕಾರ ಅಪರಾಧವು ಸಂಜ್ಞೇಯ ಮತ್ತು ಜಾಮೀನು ರಹಿತವಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಪತ್ರಕರ್ತನನ್ನು ತಕ್ಷಣ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ದೂರುದಾರರು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ತಡೆಯಲು, ನ್ಯಾಯಯುತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಕ್ಷ್ಯಗಳನ್ನು ಹಾಳು ಮಾಡುವುದನ್ನು ತಪ್ಪಿಸಲು ಬಂಧನ ಅಗತ್ಯವಾಗಿತ್ತು ಎಂದು ಪೊಲೀಸರು ಹೇಳೀದ್ದಾರೆ.

ಬ್ಯಾಂಕಿನ ಎಂ.ಡಿ ಕಚೇರಿಗೆ ಕರೆಸಿ ಪ್ರತಿಭಟನೆಯ ವಿಡಿಯೋ ಡಿಲಿಟ್ ಮಾಡುವಂತೆ ನನ್ನನ್ನು ಒತ್ತಾಯಿಸಲಾಗಿದೆ. ಪ್ರತಿಭಟನೆ ನಿಲ್ಲಿಸುವಂತೆ ನನಗೆ ಒತ್ತಾಯಿಸಲಾಗಿದೆ ಎಂದು ಪತ್ರಕರ್ತ ದಿಲ್ವಾರ್ ಹುಸೇನ್ ಕೂಡ ಪ್ರತಿದೂರು ನೀಡಿದ್ದಾರೆ. ಆದರೆ, ಅದನ್ನು ಇನ್ನೂ ದಾಖಲು ಮಾಡಿಕೊಂಡಿಲ್ಲ ಎನ್ನಲಾಗಿದೆ.

ದಿಲ್ವಾರ್ ಹುಸೇನ್ ಅವರಿಗೆ ಔಷಧಿ ಬೇಕು ಎಂದು ಪದೇ ಪದೇ ಮನವಿ ಮಾಡಿದ ನಂತರ, ಮಂಗಳವಾರ ತಡರಾತ್ರಿ ಅವರ ಪತ್ನಿ ಮತ್ತು ವಕೀಲರಿಗೆ ಪೊಲೀಸ್ ಠಾಣೆಗೆ ಪ್ರವೇಶಿಸಲು ಅವಕಾಶ ನೀಡಲಾಯಿತು ಎಂದು ವರದಿಯಾಗಿದೆ.

ಹಲವಾರು ಮಾಧ್ಯಮ ಸಂಸ್ಥೆಗಳು ಪತ್ರಕರ್ತನ ಬಂಧನವನ್ನು ಖಂಡಿಸಿವೆ ಮತ್ತು ಬುಧವಾರ ಪ್ರತಿಭಟನೆ ಆಯೋಜಿಸಿದೆ. ಕಾಂಗ್ರೆಸ್, ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್‌ನಂತಹ ವಿರೋಧ ಪಕ್ಷಗಳು ಕೂಡ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿವೆ.

ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...