Homeಕರ್ನಾಟಕದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

- Advertisement -
- Advertisement -

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿ ಬಿಜೆಪಿ ನಾಯಕ ಪ್ರಭಾವಿಯಾಗಿರುವ ಕಾರಣ ವಿಟ್ಲ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲು ತಡ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.

ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿ ತನ್ನ ಮೇಲಿನ ಲೈಂಗಿಕ ದೌರ್ಜನ್ಯದಿಂದಾಗಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದಾರೆ. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿಲ್ಲ ಎಂದು ಹೇಳಲಾಗಿದೆ.

ಬಾಲಕಿ ಪೋಷಕರು ಆರೋಪಿಗೆ ಸೇರಿದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಜನವರಿಯಲ್ಲಿ ಬಾಲಕಿಯನ್ನು ಪುಸಲಾಯಿಸಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗಿದೆ. ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ. ಇದೀಗ ತಡವಾಗಿ ಪ್ರಕರಣ ದಾಖಲಿಸಿದ್ದು, “ನೀನು ನನ್ನೊಂದಿಗೆ ಗುಡ್ಡಕ್ಕೆ ಬರ್ತೀಯಾ” ಎಂದು ಆರೋಪಿ ಸಂತ್ರಸ್ತೆಯನ್ನು ಕೇಳಿರುವುದಾಗಿ ಮಾತ್ರ ಉಲ್ಲೇಖಿಸಲಾಗಿದೆ ಎಂದು ಈದಿನ.ಕಾಂ ವಿವರಿಸಿದೆ.

ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...