Homeಅಂತರಾಷ್ಟ್ರೀಯಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯ: ಅಮೆರಿಕ ಚುನಾವಣಾ ನೀತಿಗೆ ಬದಲಾವಣೆ ತರುವ ಆದೇಶಕ್ಕೆ ಟ್ರಂಪ್...

ಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯ: ಅಮೆರಿಕ ಚುನಾವಣಾ ನೀತಿಗೆ ಬದಲಾವಣೆ ತರುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯಗೊಳಿಸುವುದು ಮತ್ತು ಚುನಾವಣೆಯ ದಿನಾಂತ್ಯದೊಳಗೆ ಎಲ್ಲಾ ಮತಪತ್ರಗಳನ್ನು ಸ್ವೀಕರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಅಮೆರಿಕದ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ತರಲಿರುವ ಕಾರ್ಯಕಾರಿ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಮಾ.25) ಸಹಿ ಹಾಕಿದ್ದಾರೆ. ಹೊಸ ಬದಲಾವಣೆಗಳು ಕಾನೂನು ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ.

ಮೂಲಭೂತ ಮತ್ತು ಅಗತ್ಯ ಚುನಾವಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಮೆರಿಕ ವಿಫಲವಾಗಿದೆ ಎಂದು ಟ್ರಂಪ್ ಆದೇಶವು ಪ್ರತಿಪಾದಿಸಿದೆ. ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲು ಮತ್ತು ಚುನಾವಣೆಗೆ ಸಂಬಂಧಿಸಿದ ಅಪರಾಧಗಳನ್ನು ವಿಚಾರಣೆಗೆ ಒಳಪಡಿಸಲು ಫೆಡರಲ್ ಏಜೆನ್ಸಿಗಳೊಂದಿಗೆ ಸಹಕರಿಸುವಂತೆ ರಾಜ್ಯಗಳನ್ನು ಒತ್ತಾಯಿಸಿದೆ. ಚುನಾವಣಾ ನಿಯಮಗಳನ್ನು ಪಾಲಿಸಲು ವಿಫಲವಾದ ರಾಜ್ಯಗಳು ಫೆಡರಲ್ ನಿಧಿಯಲ್ಲಿ ಕಡಿತವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಭಾರತದ ಚುನಾವಣಾ ವ್ಯವಸ್ಥೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಟ್ರಂಪ್, “ಆಧುನಿಕ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಮತ್ತು ಇನ್ನೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಬಳಸುವ ಮೂಲಭೂತ ಮತ್ತು ಅಗತ್ಯ ಚುನಾವಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಮೆರಿಕ ವಿಫಲವಾಗಿದೆ. ಉದಾಹರಣೆಗೆ, ಭಾರತ ಮತ್ತು ಬ್ರೆಜಿಲ್ ಮತದಾರರ ಗುರುತನ್ನು ಬಯೋಮೆಟ್ರಿಕ್ ಡೇಟಾಬೇಸ್‌ಗೆ ಜೋಡಿಸುತ್ತಿವೆ. ಆದರೆ, ಅಮೆರಿಕ ಪೌರತ್ವಕ್ಕಾಗಿ ಸ್ವಯಂ-ದೃಢೀಕರಣವನ್ನು ಹೆಚ್ಚಾಗಿ ಅವಲಂಬಿಸಿದೆ” ಎಂದು ಹೇಳಿದ್ದಾರೆ.

ಟ್ರಂಪ್ ಆದೇಶವು, ಫೆಡರಲ್ ಚುನಾವಣೆಗಳಲ್ಲಿ ಮತ ಚಲಾಯಿಸುವ ಅರ್ಹತೆ ಪಡೆಯಲು ಪಾಸ್‌ಪೋರ್ಟ್‌ನಂತಹ ಪೌರತ್ವದ ದಾಖಲೆಯನ್ನು ಕಡ್ಡಾಯಗೊಳಿಸಲು ಫೆಡರಲ್ ಮತದಾರರ ನೋಂದಣಿ ನಮೂನೆಗೆ ತಿದ್ದುಪಡಿ ತರಲಿದೆ.

“ಎಲ್ಲಕ್ಕಿಂತ ಹೆಚ್ಚಾಗಿ, ಚುನಾವಣೆಗಳು ಪ್ರಾಮಾಣಿಕವಾಗಿರಬೇಕು ಮತ್ತು ಸಾರ್ವಜನಿಕರ ನಂಬಿಕೆಗೆ ಅರ್ಹವಾಗಿರಬೇಕು. ಅದಕ್ಕೆ ಮತದಾರರು ತಮ್ಮ ಮತಗಳನ್ನು ವಂಚನೆ ಅಥವಾ ತಪ್ಪಿನಿಂದ ರಕ್ಷಿಸಿಕೊಳ್ಳಲು ಪರಿಣಾಮಕಾರಿಯಾಗಿ ಪರಿಶೀಲಿಸಲು ಅನುವು ಮಾಡಿಕೊಡುವ ಮತದಾರರು ಪರಿಶೀಲಿಸಬಹುದಾದ ಕಾಗದದ ದಾಖಲೆಯನ್ನು ಉತ್ಪಾದಿಸುವ ಮತದಾನ ವಿಧಾನಗಳು ಬೇಕಾಗುತ್ತವೆ. ಚುನಾವಣಾ ಸಮಗ್ರತೆಯ ಮಾನದಂಡಗಳನ್ನು ಅದಕ್ಕೆ ಅನುಗುಣವಾಗಿ ಮಾರ್ಪಡಿಸಬೇಕು. ಫೆಡರಲ್ ಕಾನೂನನ್ನು ಜಾರಿಗೊಳಿಸುವುದು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ರಕ್ಷಿಸುವುದು ನನ್ನ ಆಡಳಿತದ ನೀತಿಯಾಗಿದೆ” ಎಂದು ಟ್ರಂಪ್ ಆದೇಶದಲ್ಲಿ ಹೇಳಲಾಗಿದೆ.

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...