Homeಕರ್ನಾಟಕಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

ಕೋವಿಡ್ ವೇಳೆ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್‌ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯನವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೆವು. ಮೃತರ ಕುಟುಂಬ ವರ್ಗದವರನ್ನೂ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದಿದ್ದಾರೆ.

ವರದಿಯಲ್ಲಿ ಕುನ್ಹಾ ಅವರು ಹೆಸರಿಸಿರುವ ಹಿಂದಿನ ಆರೋಗ್ಯ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ? ಎಂದು ಕೇಳಿದಾಗ, “ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.

15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ :

“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ‌. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ವಕ್ತಾರ :

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದಿದ್ದಾರೆ.

ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ :

ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು‌ ಕುಟುಕಿದರು.

ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...