Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

- Advertisement -
- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮುಂಬೈ ಪೊಲೀಸರು ಬುಧವಾರ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗಲು ಕುನಾಲ್ ಅವರನ್ನು ಕೇಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಅವರು ಯಾವಾಗ ಹಾಜರಾಗಬೇಕು ಎಂಬುದು ಸ್ಪಷ್ಟವಾಗಿಲ್ಲ.

ಮಂಗಳವಾರ ಕುನಾಲ್ ಅವರಿಗೆ ಮೊದಲ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಅವರ ವಿರುದ್ಧದ ಮಾನನಷ್ಟ ಪ್ರಕರಣದ ತನಿಖೆಯನ್ನು ಪ್ರಾರಂಭಿಸುವಂತೆ ಕೋರಿದ್ದರು. ಮೊದಲ ನೋಟಿಸ್ ನಂತರ, ಶಿವಸೇನೆ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಇದೆ ಎಂದು ಉಲ್ಲೇಖಿಸಿ ಕುನಾಲ್ ಅವರು ಪೊಲೀಸರ ಮುಂದೆ ಹಾಜರಾಗಲು ಒಂದು ವಾರದ ಸಮಯ ಕೋರಿದ್ದರು.

ಕೆಲವು ದಿನಗಳ ಹಿಂದೆ ಮುಂಬೈನ ಸ್ಟುಡಿಯೋವೊಂದರಲ್ಲಿ ರೆಕಾರ್ಡ್ ಮಾಡಲಾದ ತಮ್ಮ ಕಾರ್ಯಕ್ರಮದಲ್ಲಿ ಶಿವಸೇನಾ ಮುಖ್ಯಸ್ಥ ಶಿಂಧೆ ವಿರುದ್ಧ ಹಾಸ್ಯನಟ ಕುನಾಲ್ ಕಮ್ರಾ ತೀವ್ರ ಟೀಕೆಗಳನ್ನು ಮಾಡುವ ಮೂಲಕ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ, ಉಪಮುಖ್ಯಮಂತ್ರಿ ಅವರ ರಾಜಕೀಯ ಜೀವನದ ಬಗ್ಗೆ ಕುನಾಲ್ ಟೀಕಿಸಿದ್ದರು. ಅದರಲ್ಲಿ 2022 ರಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ದಂಗೆಯ ವಿಚಾರವೂ ಸೇರಿತ್ತು.

ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಉಲ್ಲೇಖಿಸಿ “ದಿಲ್ ತೋ ಪಾಗಲ್ ಹೈ” ಚಿತ್ರದ ಜನಪ್ರಿಯ ಹಿಂದಿ ಹಾಡಿನ ವಿಡಂಬನೆಯನ್ನು ಕುನಾಲ್ ಪ್ರದರ್ಶಿಸಿದ್ದರು. ಶಿವಸೇನೆ (2022) ಮತ್ತು ಎನ್‌ಸಿಪಿ (2023) ವಿಭಜನೆ ಸೇರಿದಂತೆ ಮಹಾರಾಷ್ಟ್ರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರು ಹಾಸ್ಯ ಚಟಾಕಿ ಹಾರಿಸಿದ್ದರು.

ಭಾನುವಾರ ರಾತ್ರಿ, ಶಿವಸೇನೆ ಸದಸ್ಯರು ಕುನಾಲ್ ಅವರ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಮತ್ತು ಸ್ಥಳ ಇರುವ ಹೋಟೆಲ್‌ಗೆ ಹಾನಿ ಮಾಡಿದ್ದರು. ಇದರ ನಂತರ ಶಿವಸೇನೆ ಶಾಸಕ ಪಟೇಲ್ ಅವರ ದೂರಿನ ಆಧಾರದ ಮೇಲೆ, ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖಾರ್ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ನಡುವೆ ಕುನಾಲ್ ಅವರ ಕಾರ್ಯಕ್ರಮ ನಡೆದ ಸ್ಥಳವನ್ನು ಧ್ವಂಸ ಮಾಡಿದ್ದಕ್ಕಾಗಿ ಶಿಂಧೆ ನೇತೃತ್ವದ ಶಿವಸೇನೆಯ 40 ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೋಮವಾರ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದರೋಡೆ ಮಾಡಿದ್ದಕ್ಕಾಗಿ ಪೊಲೀಸರು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಮತ್ತು ಇತರ 11 ಜನರನ್ನು ಬಂಧಿಸಿದ್ದಾರೆ. ಅದೇ ದಿನ ಸ್ಥಳೀಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಕಮ್ರಾ ಅವರ ಹಾಸ್ಯವನ್ನು ಖಂಡಿಸಿದರೆ, ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಗಳನ್ನು ಟೀಕಿಸಿದ್ದಾರೆ. ಇದನ್ನು ಅವರು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಅದೇ ರೀತಿ, ಮಹಾರಾಷ್ಟ್ರ ಸರ್ಕಾರವು ಕುನಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಮಂಗಳವಾರದಂದು ಕುನಾಲ್ ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅದಕ್ಕೂ ಒಂದು ದಿನ ಮೊದಲು ಅವರು ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ ಮತ್ತು ಸಾಯುವವರೆಗೆ ಕಾಯುತ್ತಾ ನನ್ನ ಹಾಸಿಗೆಯ ಕೆಳಗೆ ಅಡಗಿಕೊಳ್ಳುವುದಿಲ್ಲ” ಎಂದು ಹೇಳಿದ್ದರು.

ತನ್ನ ವಿರುದ್ಧ ತೆಗೆದುಕೊಂಡ ಯಾವುದೇ ಕಾನೂನುಬದ್ಧ ಕ್ರಮಕ್ಕೆ ಪೊಲೀಸರು ಮತ್ತು ನ್ಯಾಯಾಲಯಗಳೊಂದಿಗೆ ಸಹಕರಿಸುವುದಾಗಿ ಹೇಳಿರುವ ಕುನಾಲ್, ತನ್ನ ಹಾಸ್ಯ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಸ್ಥಳವನ್ನು ಧ್ವಂಸ ಮಾಡಿದವರ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...