Homeಮುಖಪುಟ2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

- Advertisement -
- Advertisement -

ದೇಶದ ಹೈಕೋರ್ಟ್‌ಗಳಲ್ಲಿ 2018ರಿಂದ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇಕಡ 77ರಷ್ಟು ಮಂದಿ ಪ್ರಬಲ ಜಾತಿಗಳಿಗೆ ಸೇರಿದವರು ಎಂದು ಕೇಂದ್ರ ಕಾನೂನು ಸಚಿವಾಲಯ ಮಾರ್ಚ್ 20ರಂದು ಸಂಸತ್ತಿಗೆ ಒದಗಿಸಿದ ಮಾಹಿತಿಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಸಂಸದ ಮನೋಜ್ ಕುಮಾರ್ ಝಾ ಅವರು ಉನ್ನತ ನ್ಯಾಯಾಂಗದಲ್ಲಿನ ಸಾಮಾಜಿಕ ವೈವಿಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, ನೇಮಕಾತಿಗಳ ಜಾತಿವಾರು ದತ್ತಾಂಶ ಲಭ್ಯವಿಲ್ಲ ಎಂದು ಹೇಳಿದೆ. ಏಕೆಂದರೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ಸಂವಿಧಾನದ ವಿಧಿಗಳ ಅಡಿಯಲ್ಲಿ ನೇಮಕ ಮಾಡಲಾಗುತ್ತದೆ. ಅವುಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಇಲ್ಲ ಎಂದಿದೆ.

ಆದಾಗ್ಯೂ, 2018ರಿಂದ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಿಗೆ ಶಿಫಾರಸು ಮಾಡಲ್ಪಡುವವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರ ಒದಗಿಸಿದ ದತ್ತಾಂಶವು ಶಿಫಾರಸು ಮಾಡಲ್ಪಟ್ಟವರು ಒದಗಿಸಿದ ಮಾಹಿತಿಯನ್ನು ಆಧರಿಸಿದೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

2018ರಿಂದ ಹೈಕೋರ್ಟ್‌ಗೆ ನೇಮಕಗೊಂಡ 715 ನ್ಯಾಯಾಧೀಶರಲ್ಲಿ 551 ಜನರು ಸಾಮಾನ್ಯ ವರ್ಗಕ್ಕೆ (General Category) ಸೇರಿದವರು ಎಂದು ಮೇಘವಾಲ್ ತಿಳಿಸಿದ್ದಾರೆ. 715 ನ್ಯಾಯಾಧೀಶರಲ್ಲಿ 22 (3%) ಜನರು ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸೇರಿದವರು, 16 (2.2%) ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಮತ್ತು 89 (12.4%) ಜನರು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.

ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಯು ಆಗಸ್ಟ್ 2023ರಲ್ಲಿ ಸಂಸತ್ತಿಗೆ ಇದೇ ರೀತಿಯ ಡೇಟಾವನ್ನು ಮಂಡಿಸಿತ್ತು.

ನ್ಯಾಯಾಂಗ ನೇಮಕಾತಿಗಳಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಅನ್ನು ಅನುಸರಿಸಿದೆಯೇ ಎಂಬ ಬಗ್ಗೆ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, “ಪ್ರಸ್ತಾವನೆಗಳನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ವಹಿಸಲಾಗಿದೆ” ಎಂದು ಹೇಳಿದೆ.

“ಆದಾಗ್ಯೂ, ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕಾತಿಯಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಖಚಿತಪಡಿಸಿಕೊಳ್ಳಲು, ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಸರ್ಕಾರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವಿನಂತಿಸುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.

ಅಂಬೇಡ್ಕರ್ ಸ್ಮಾರಕಕ್ಕೆ ಭೂಮಿ ನೀಡುವಂತೆ ದಲಿತ ನಾಯಕರಿಂದ ಫಡ್ನವೀಸ್‌ಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...