Homeಮುಖಪುಟನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ...

ನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಹೈದರಾಬಾದ್: 2023ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 30ರ ಹರೆಯದ ಕಿರುತರೆ ನಟಿ ಅಪ್ಸರಾ ಅವರ ಹತ್ಯೆ ಪ್ರಕರಣದಲ್ಲಿ ಆರ್ಚಕ ವೆಂಕಟ ಸಾಯಿ ಸೂರ್ಯ ಕೃಷ್ಣ (36) ಅವರಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, ಅಪ್ಸರಾ ಎಂಬ ಮಹಿಳೆಯೊಂದಿಗೆ ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂಬಂಧ ಬೆಳೆಸಿಕೊಂಡಿದ್ದನು. ಇಬ್ಬರೂ ಸ್ವಲ್ಪ ಸಮಯದವರೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅಪ್ಸರಾ ತನ್ನ ಭರವಸೆಯನ್ನು ಈಡೇರಿಸುವಂತೆ ಮತ್ತು ತನ್ನನ್ನು ಮದುವೆಯಾಗುವಂತೆ ಆರ್ಚಕನಿಗೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಸಾಯಿ ಕೃಷ್ಣ ಅವಳನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದನು.

ಜೂನ್ 3, 2023ರಂದು ಆರ್ಚಕನು ಕೊಯಮತ್ತೂರಿಗೆ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಅಪ್ಸರಾಳನ್ನು ಮನವೊಲಿಸಿದನು. ಆ ರಾತ್ರಿ ಅವರು ರಲ್ಲಾಗುಡದಲ್ಲಿ ಊಟ ಮಾಡಿದರು ಮತ್ತು ಸುಲ್ತಾನಪಲ್ಲಿಯಲ್ಲಿರುವ ಗೋಶಾಲೆಗೆ ಭೇಟಿ ನೀಡಿದರು. ಆದಾಗ್ಯೂ ಜೂನ್ 4ರ ಮುಂಜಾನೆ ಆರ್ಚಕನು ಅಪ್ಸರಳನ್ನು ಶಂಷಾಬಾದ್ ಬಳಿಯ ನರ್ಖೋಡಾ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಲ್ಲಿನಿಂದ ಜಜ್ಜಿ ಹತ್ಯೆಗೈದ್ದಿದ್ದನು.

ನಂತರ ಅವನು ಆಕೆಯ ದೇಹವನ್ನು ಸರೂರ್ ನಗರಕ್ಕೆ ಸಾಗಿಸಿ, ಎಸ್‌ಆರ್‌ಒ ಕಚೇರಿ ಬಳಿಯ ಒಳಚರಂಡಿ ಮ್ಯಾನ್‌ಹೋಲ್‌ನೊಳಗೆ ಹಾಕಿ ಅದನ್ನು ಸಿಮೆಂಟ್‌ನಿಂದ ಮುಚ್ಚಿದ್ದನು. ನಂತರ ಜನರ ಗಮನವನ್ನು ಬೇರೆಡೆ ಸೆಳೆಯಲು ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು.

ಅನುಮಾನದಿಂದ ತಪ್ಪಿಸಿಕೊಳ್ಳುವ ಆಶಯದೊಂದಿಗೆ ಕೃಷ್ಣ ದಿನಚರಿ ಮುಂದುವರಿಸಿದನು. ಆದಾಗ್ಯೂ ಕಾಣೆಯಾದ ವ್ಯಕ್ತಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂತಿಮವಾಗಿ ಕೊಲೆಯ ಪುರಾವೆಗಳು ಸಿಗದಂತೆ ಹೇಗೆ ತಪ್ಪಿಸಿಕೊಳ್ಳುವುದು. ಹತ್ಯೆಯನ್ನು ಹೇಗೆ ನಡೆಸುವುದು ಮತ್ತು ಶವವನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಕುರಿತು ಕೃಷ್ಣ ಗೂಗಲ್ ನಲ್ಲಿಯೂ ಸಹ ಸರ್ಫ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸಾಯಿ ಕೃಷ್ಣನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಪೂರ್ವಯೋಜಿತ ಕೊಲೆ ಮತ್ತು ಸಾಕ್ಷ್ಯಗಳನ್ನು ನಾಶಮಾಡುವ ಪ್ರಯತ್ನಗಳ ಬಲವಾದ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದವು, ಇದು ಬುಧವಾರದ ತೀರ್ಪಿಗೆ ಕಾರಣವಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, 30 ವರ್ಷದ ಮಹಿಳೆಯನ್ನು ತಾನು ಮದುವೆಯಾಗುತ್ತೇನೆ ಮತ್ತು ಅವಳೊಂದಿಗೆ ಸಂಬಂಧ ಬೆಳೆಸುತ್ತೇನೆ ಎಂದು ನಂಬಿಸಿದ್ದನು. ಅಪ್ಸರಾ ಅವರ ತಾಯಿ ಆರೋಪಿ ಅರ್ಚಕರಾಗಿದ್ದ ದೇವಸ್ಥಾನಕ್ಕೆ ಆಗಾಗ್ಗೆ ಹೋಗುತ್ತಿದ್ದರಿಂದ ಸಾಯಿ ಕೃಷ್ಣ ಬಲಿಪಶುವಿನ ಪರಿಚಯವಾಯಿತು. ಇದು 2023ರ ಆರಂಭದಲ್ಲಿ ಸಂಬಂಧಕ್ಕೆ ನಾಂದಿ ಹಾಡಿತು.

ಕೊಲೆಯ ನಂತರ ಆರ್ಚಕನು ತನ್ನ ಕಾರನ್ನು ತೊಳೆದು ತನ್ನ ಅಪಾರ್ಟ್ಮೆಂಟ್ ನಲ್ಲಿ ನಿಲ್ಲಿಸಿದನು. ಮರುದಿನ ಅವನು ಸ್ಥಳಕ್ಕೆ ಭೇಟಿ ನೀಡಿದನು ಮತ್ತು ಕೆಟ್ಟವಾಸನೆ ಬರುತ್ತಿರುವುದನ್ನು ಗಮನಿಸಿದ ನಂತರ, ಅವನು ಕೆಲವು ಕಾರ್ಮಿಕರನ್ನು ಕರೆದುಕೊಂಡು ಮ್ಯಾನ್‌ಹೋಲ್ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದನು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇದೆಲ್ಲದರ ನಂತರ ಸಾಯಿ ಕೃಷ್ಣ ಸಂತ್ರಸ್ತೆಯ ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ ಎಂದು ಪೊಲೀಸರು ಕಂಡುಕೊಂಡರು. ಇದೇ ಕಾರಣಕ್ಕಾಗಿ ಆರ್ಚಕನನ್ನು ವಿಚಾರಣೆ ನಡೆಸಿದಾಗ ಅವನು ನಟಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡನು ಮತ್ತು ಬಂಧಿಸಲ್ಪಟ್ಟನು ಎಂದು ಶಂಷಾಬಾದ್ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...