Homeಕರ್ನಾಟಕಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಮಗ, ವಿಧಾನಪರಿಷತ್ ಸದಸ್ಯ ಆರ್‌.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಐವರ ವಿರುದ್ದ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ಮಾ.28) ಎಫ್‌ಐಆರ್ ದಾಖಲಾಗಿದೆ.

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದರು” ಎಂದು ರಾಜೇಂದ್ರ ಅವರು ತಮ್ಮ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ.

ಕಳೆದ ನವೆಂಬರ್​ನಲ್ಲಿ ನನ್ನ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿ ರಾಜೇಂದ್ರ ಅವರು ತುಮಕೂರು ಎಸ್​ಪಿಗೆ ಶುಕ್ರವಾರ ದೂರು ನೀಡಿದ್ದು, ಈ ದೂರಿನ ಅನ್ವಯ ಕೆ.ಎನ್.ರಾಜಣ್ಣ ಅವರ ಮನೆ ಇರುವ ವ್ಯಾಪ್ತಿಯ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಲಂ 109 (ಕೊಲೆ ಯತ್ನ ) 329 (4)(ಅತಿಕ್ರಮ ಪ್ರವೇಶ) 190 (ಕಾನೂನು ಬಾಹಿರ ಚಟುವಟಿಕೆ) ಮತ್ತು 61(2) (ಕ್ರಿಮಿನಲ್ ಸಂಚು) ಅನ್ವಯ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಸೋಮ ಎಂಬಾತ ರೌಡಿ ಶೀಟರ್ ಎಂದು ವರದಿಗಳು ಹೇಳಿವೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರನ್ನು ಗುರುವಾರ (ಮಾ.27) ಭೇಟಿ ಮಾಡಿದ್ದ ರಾಜೇಂದ್ರ ಅವರು ದೂರು ಸಲ್ಲಿಸಿದ್ದರು. ಘಟನೆ ತುಮಕೂರಿನಲ್ಲಿ ನಡೆದಿರುವುದರಿಂದ ತುಮಕೂರು ಎಸ್‌ಪಿಯವರಿಗೆ ದೂರು ನೀಡುವಂತೆ ಡಿಜಿಪಿ ಸೂಚಿಸಿದ್ದರು. ಅದರಂತೆ ಶುಕ್ರವಾರ ಎಸ್‌ಪಿ ಕಚೇರಿಗೆ ತೆರಳಿದ ರಾಜೇಂದ್ರ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ದೂರು ನೀಡಿದ್ದಾರೆ. ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಐವರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ರಾಜೇಂದ್ರ ದೂರಿನಲ್ಲಿ ಏನಿದೆ?

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ ಪಿತೂರಿ ನಡೆಸಿದ್ದು, ಒಂದು ಗುಂಪಿಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಮುಂಗಡವಾಗಿ 5 ಲಕ್ಷ ರೂಪಾಯಿ ಪಾವತಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ತುಣುಕು ಲಭ್ಯವಾಗಿದೆ. ಅದರಲ್ಲಿ ಇಬ್ಬರು ವ್ಯಕ್ತಿಗಳು ಸಂಭಾಷಣೆ ನಡೆಸಿದ್ದು ಇದೆ. ಸೋಮ, ಭರತ್, ಅಮಿತ್, ಗುಂಡಾ ಹಾಗೂ ಇತರರು ನನ್ನ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ”.

“ಸೋಮ, ಭರತ್ ಹಾಗೂ ಇತರರು ತುಮಕೂರು ನಗರದ ಶಿರಾ ಗೇಟ್ ತೋಟದ ಮನೆಯಲ್ಲಿ ನನ್ನ ಕೊಲೆಗೆ ಸಂಚು ರೂಪಿಸಿದ್ದರು. ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದರು. ಕೊಲೆ ಮಾಡುವುದಕ್ಕಾಗಿಯೇ ಕಾರನ್ನೂ ಖರೀದಿಸಿದ್ದರು. ಬೆಂಗಳೂರಿನ ಕಲಾಸಿಪಾಳ್ಯ, ಮಧುಗಿರಿ ಭಾಗದಲ್ಲಿ ನನ್ನ ಚಲನವಲನ ತಿಳಿದುಕೊಳ್ಳಲು ಕೆಲವು ಹಿಂಬಾಲಕರನ್ನು ನೇಮಿಸಿಕೊಂಡಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ವರದಿಗಳು ವಿವರಿಸಿವೆ

ಮಗಳ ಜನ್ಮ ದಿನದಂದು ಕೊಲೆ ಯತ್ನ

“ಕಳೆದ ನವೆಂಬರ್ ತಿಂಗಳಲ್ಲಿ ಕ್ಯಾತ್ಸಂದ್ರದ ಮನೆಯಲ್ಲಿ ನನ್ನ ಹಿರಿಯ ಮಗಳ ಜನ್ಮದಿನಾಚರಣೆ ಕಾರ್ಯಕ್ರಮವಿತ್ತು. ಆವತ್ತು ಕಾರ್ಮಿಕರ ವೇಷದಲ್ಲಿ ಬಂದಿದ್ದ ಆರೋಪಿಗಳು ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮುಂದಿನ ದಿನಗಳಲ್ಲಿ ಹತ್ಯೆ ಮಾಡಲು ನನ್ನ ಕಾರಿಗೆ ಜಿಪಿಎಸ್‌ ಅಳವಡಿಸುವ ಯತ್ನ ನಡೆಸಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾಗಿ ವರದಿಯಾಗಿದೆ.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...