Homeಮುಖಪುಟ'ಗಾಂಧಿ' ಹೆಸರಿಟ್ಟಿರುವ 'ಮನರೇಗಾ ಯೋಜನೆ' ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್

‘ಗಾಂಧಿ’ ಹೆಸರಿಟ್ಟಿರುವ ‘ಮನರೇಗಾ ಯೋಜನೆ’ ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್

- Advertisement -
- Advertisement -

ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪಕ್ಷದ ಸಾವಿರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಜನರನ್ನುದ್ದೇಶಿ ಮಾತನಾಡಿದ  ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, “ಎಂಜಿಎನ್‌ಆರ್‌ಇಜಿಎ ಕಾರ್ಮಿಕರ ದುಃಸ್ಥಿತಿಯ ಬಗ್ಗೆ ಕೇಂದ್ರದ ಬಿಜೆಪಿ ಸರ್ಕಾರ ಕಾಳಜಿ ವಹಿಸಿಲ್ಲ” ಎಂದು ಆರೋಪಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಕಾರ್ಮಿಕರಿಗೆ ಬಾಕಿ ಸಂಬಳವನ್ನು ಬಿಡುಗಡೆ ಮಾಡದಿದ್ದಕ್ಕಾಗಿ ಬಿಜೆಪಿ ಸರ್ಕಾರವನ್ನು ಟೀಕಿಸಿದ ಅವರು, ಮಹಾತ್ಮಾ ಗಾಂಧಿ ಮತ್ತು ಅವರ ಹೆಸರಿನ 100 ದಿನಗಳ ಕೆಲಸದ ಯೋಜನೆಯನ್ನು ಅವರು ಇಷ್ಟಪಡುವುದಿಲ್ಲ ಎಂದು ಹೇಳಿದರು.

“ಭಾರತೀಯ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಮತ್ತು ಜೀವಾಳವಾಗಿ ಯುಪಿಎ ಸರ್ಕಾರ ಅಭಿವೃದ್ಧಿಪಡಿಸಿದ ಎಂಜಿಎನ್‌ಆರ್‌ಇಜಿಎಯನ್ನು ನಾಶಮಾಡಲು ನಿರ್ದಯ ಬಿಜೆಪಿ ಹೊರಟಿದೆ. ಕಾರ್ಪೊರೇಟ್‌ಗಳಿಗೆ ಲಕ್ಷಾಂತರ ಕೋಟಿ ರೂಪಾಯಿಗಳನ್ನು ಒಂದೇ ಸಹಿಯಿಂದ ಮನ್ನಾ ಮಾಡಿದಾಗ, ಸುಡುವ ಬಿಸಿಲಿನಲ್ಲಿ ಬೆವರು ಸುರಿಸಿ ದುಡಿದ ಬಡವರಿಗೆ ಸಂಬಳವಾಗಿ ಬಿಡುಗಡೆ ಮಾಡಲು ಹಣ ಏಕೆ ಇಲ್ಲ? ಹಣವಿಲ್ಲವೇ ಅಥವಾ ಹೃದಯವಿಲ್ಲವೇ” ಎಂದು ಸ್ಟಾಲಿನ್ ಪ್ರಶ್ನಿಸಿದರು.

ತಮಿಳುನಾಡಿನಾದ್ಯಂತ ಇಂದಿನ ಪ್ರತಿಭಟನೆಯ ಮೂಲಕ ಡಿಎಂಕೆ ಸದಸ್ಯರು ಮತ್ತು ಬಡ ಜನರ ಧ್ವನಿ ನವದೆಹಲಿಯನ್ನು ತಲುಪಬೇಕು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವನ್ನು ಖಂಡಿಸಲು ಹಾಗೂ ಎಂಜಿಎನ್‌ಆರ್‌ಇಜಿಎ ಕಾರ್ಮಿಕರಿಗೆ ಬಾಕಿ ಇರುವ ರೂ. 4,034 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಲು ಸುಮಾರು 1,170 ಸ್ಥಳಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ಮಹಿಳೆಯರು ಭಾಗವಹಿಸಿದ್ದರು.

ಪ್ರತಿಭಟನೆಯ ಸಮಯದಲ್ಲಿ, ಸದಸ್ಯರು ಕೇಂದ್ರವನ್ನು ಖಂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ‘ನಮ್ಮ ಸಂಬಳ ಎಲ್ಲಿ’ ಎಂದು ಕೇಳುವ ಫಲಕಗಳನ್ನು ಹಿಡಿದಿದ್ದರು. ಮತ್ತೊಂದು ಫಲಕದಲ್ಲಿ ಸಿಎಂ ಮಹಿಳೆಯರಿಗೆ ಮಾಸಿಕ ರೂ. 1,000 ಆರ್ಥಿಕ ನೆರವು ನೀಡುತ್ತಿದ್ದಾರೆ ಎಂದು ಬರೆಯಲಾಗಿತ್ತು.

ಎಂಜಿಎನ್‌ಆರ್‌ಇಜಿಎ ಫಲಾನುಭವಿಗಳಿಗೆ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಲು ಮುಖ್ಯಮಂತ್ರಿ ಶನಿವಾರ ರಾಜ್ಯವ್ಯಾಪಿ ಪ್ರತಿಭಟನೆಗಳನ್ನು ಘೋಷಿಸಿದ್ದರು.

ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...