ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಶಿಂಧೆ ನೇತೃತ್ವದ ಶಿವಸೇನೆಯ ಬಣದ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ.
ಮೂರು ಎಫ್‌ಐಆರ್‌ಗಳನ್ನು ಶುಕ್ರವಾರ ಮುಂಬೈನ ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಈ ಠಾಣೆ ಈಗಾಗಲೇ ಕುನಾಲ್ ವಿರುದ್ಧ ದಾಖಲಾಗಿರುವ ಮತ್ತೊಂದು ಮಾನನಷ್ಟ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.
ಮಾರ್ಚ್ 23 ರಂದು, ಕುನಾಲ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಕುನಾಲ್ ಅವರು ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ “ದೇಶದ್ರೋಹಿ” ಎಂದು ಹೇಳಿದ್ದರು.
ಈ ಪ್ರದರ್ಶನದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಸದಸ್ಯರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ವಿವಾದಾತ್ಮಕ ಕಾರ್ಯಕ್ರಮವನ್ನು ಅವರು ಅಲ್ಲಿ ಅದನ್ನು ರೆಕಾರ್ಡ್ ಮಾಡಿದ್ದರು.
ಮರುದಿನ, ಮುಂಬೈ ಪೊಲೀಸರು ಭಾರತೀಯ ನ್ಯಾಯ ಸಂಹಿತದ ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕುನಾಲ್ ಅವರಿಗೆ ಎರಡು ಸಮನ್ಸ್ ಕಳುಹಿಸಿದ್ದಾರೆ. ಜೊತೆಗೆ ಮುಂಬೈಗೆ ಪ್ರಯಾಣಿಸಲು ಏಳು ದಿನಗಳನ್ನು ಕೋರಿದ್ದ ಕುನಾಲ್ ಅವರ ಮನವಿಯನ್ನು ನಗರದ ಪೊಲೀಸರು ನಿರಾಕರಿಸಿದ್ದಾರೆ.
ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಮಾನನಷ್ಟ ಮೊಕದ್ದಮೆಯಲ್ಲಿ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಅವರಿಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಾಥಮಿಕ ಹಂತದಲ್ಲಿ ಒಪ್ಪಿರುವುದಾಗಿ ನ್ಯಾಯಮೂರ್ತಿ ಸುಂದರ್ ಮೋಹನ್ ಹೇಳಿದ್ದಾರೆ.
ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಸೀದಿಯಲ್ಲಿ ನಮಾಜ್ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!
ಮಸೀದಿಯಲ್ಲಿ ನಮಾಜ್ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

