Homeಕರ್ನಾಟಕಬೆಲೆ ಏರಿಕೆಯ ಮೂಲ ಕಾರಣೀಕರ್ತರ ವಿರುದ್ಧ ಪ್ರತಿಭಟಿಸಿದರೆ ನಮ್ಮ ಬೆಂಬಲವಿದೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ

ಬೆಲೆ ಏರಿಕೆಯ ಮೂಲ ಕಾರಣೀಕರ್ತರ ವಿರುದ್ಧ ಪ್ರತಿಭಟಿಸಿದರೆ ನಮ್ಮ ಬೆಂಬಲವಿದೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬೆಲೆ ಏರಿಕೆಯ ಸಮಸ್ಯೆಗೆ ಮೂಲ ಕಾರಣೀಕರ್ತರ ಬಗ್ಗೆ ಬಿಜೆಪಿ ಪ್ರತಿಭಟಿಸುವುದಾದರೆ ನಾವೂ ಬೆಂಬಲಿಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದ್ದು, ದೇಶದ ಎಲ್ಲಾ ಬೆಲೆಗಳ ಏರಿಕೆಯ ಹಿಂದೆ ಮೋದಿಯವರ ಆರ್ಥಿಕ ಅನೀತಿಗಳ ಮಾಸ್ಟರ್ ಸ್ಟ್ರೋಕ್‌ಗಳ ಕಾರಣವಿದೆ ಎಂದು ಅವರು ಹೇಳಿದ್ದಾರೆ.

“ಪಾಪ್ ಕಾರ್ನ್ ಮೇಲೂ GST ಹೇರಿದಾಗ, ಮಕ್ಕಳ ಪುಸ್ತಕ, ಪೆನ್ಸಿಲ್ ಗಳಲ್ಲೂ ತೆರಿಗೆ ಲೂಟಿ ಮಾಡಿದಾಗ, 43,500 ಕೋಟಿ ಕನಿಷ್ಠ ಠೇವಣಿ ದಂಡವನ್ನು ವಸೂಲಿ ಮಾಡಿದಾಗ, ಜೀವ ವಿಮೆಗೂ 18% ಜಿಎಸ್ಟಿ ಲೂಟಿ ಮಾಡಿದಾಗ, GST ಕಾರಣಕ್ಕಾಗಿ ಸಣ್ಣ ಉದ್ದಿಮೆಗಳು ಬಾಗಿಲು ಮುಚ್ಚಿದಾಗ, ಉದ್ಯೋಗ ಕಡಿತವಾದಾಗ,
ಭಾರತೀಯರ ಖರೀದಿ ಸಾಮರ್ಥ್ಯ ಕುಸಿದು, ಬದುಕು ಬರ್ಬರವಾದಾಗ ಬಿಜೆಪಿ ಸ್ನೇಹಿತರಿಗೆ ಜನಾಕ್ರೋಶ ಕಾಣಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬಿಜೆಪಿ ನಾಯಕರಿಗೆ ನಿಜಕ್ಕೂ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪನೀರ್, ಮೊಸರು ಸೇರಿದಂತೆ ಎಲ್ಲಾ ಆಹಾರ ಪದಾರ್ಥಗಳ ಮೇಲಿನ GST ತೆರವು ಮಾಡಿಸಲಿ. ಪೆಟ್ರೋಲ್, ಡೀಸೆಲ್ ಮೇಲಿನ ದರ ಇಳಿಸಿ ಕಚ್ಚಾ ತೈಲದ ಬೆಲೆ ಇಳಿಕೆಯ ಲಾಭವನ್ನು ಜನರಿಗೆ ವರ್ಗಾಯಿಸುವಂತೆ ಆಗ್ರಹಿಸಲಿ. ಎಟಿಎಂ ಶುಲ್ಕ, ಕನಿಷ್ಠ ಠೇವಣಿ ದಂಡಗಳನ್ನು ತೆರವು ಮಾಡಿಸಲಿ.” ಎಂದು ಅವರು ಹೇಳಿದ್ದಾರೆ.

“ಬಿಜೆಪಿಯವರು ಜನಾಕ್ರೋಶ ಪ್ರತಿಭಟನೆ ಮಾಡುವ ಮುನ್ನ ತಮ್ಮ ಆರೆಸ್ಸೆಸ್‌ ಆಕ್ರೋಶದ ಬಗ್ಗೆ ಮಾತನಾಡಲಿ. ದೇಶದಲ್ಲಿನ ಆದಾಯ ಅಸಮಾನತೆ, ನಿರುದ್ಯೋಗ, ಬಡತನ, ದೂರದೃಷ್ಟಿ ಇಲ್ಲದ ಕೇಂದ್ರ ಸರ್ಕಾರದ ನೀತಿಗಳನ್ನು ಆರೆಸ್ಸೆಸ್‌ ಕಟುವಾಗಿ ಟೀಕಿಸಿತ್ತು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅರಿವಿದೆಯೇ?” ಎಂದು ಅವರು ಹೇಳಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮೋದಿ ಸರ್ಕಾರದ ವಿರುದ್ಧ 2022ರಲ್ಲಿ ಆರೆಸ್ಸೆಸ್ ನೀಡಿದ್ದ ಹೇಳಿಕೆಯ ವರದಿಯ ಚಿತ್ರವನ್ನು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಗೆ ಈ ಬಗ್ಗೆ ಅರಿವಿಲ್ಲ ಎಂದಾದರೆ ಕೇಶವಕೃಪಾಕ್ಕೆ ತೆರಳಿ “ಆರೆಸ್ಸೆಸ್ಸ್‌ ಆಕ್ರೋಶ”ದ ಬಗ್ಗೆ ತಿಳಿದುಕೊಂಡು ರಾಜ್ಯದ ಜನತೆಗೆ ಉತ್ತರಿಸುವ ದಮ್ಮು ತಾಕತ್ತು ಪ್ರದರ್ಶಿಸಲಿ ಎಂದು ಹೇಳಿದ್ದಾರೆ. ಬೆಲೆ ಏರಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...