Homeಮುಖಪುಟಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

- Advertisement -
- Advertisement -

ಅಂಡಮಾನ್ ನಿಕೋಬಾರ್‌ನ ಉತ್ತರ ಸೆಂಟಿನೆಲ್ ದ್ವೀಪದ ನಿರ್ಬಂಧಿತ ಬುಡಕಟ್ಟು ಮೀಸಲು ಪ್ರದೇಶವನ್ನು ಪ್ರವೇಶಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ. ಆರೋಪಿಯನ್ನು 24 ವರ್ಷದ ಮೈಖೈಲೊ ವಿಕ್ಟೋರೊವಿಚ್ ಪಾಲಿಯಕೋವ್ ಎಂದು ಗುರುತಿಸಲಾಗಿದೆ.

ಆರೋಪಿಯು ಸೋಮವಾರ ಅಪರಾಧ ತನಿಖಾ ಇಲಾಖೆಯು ಅನುಮತಿಯಿಲ್ಲದೆ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿ ತಿಳಿಸಿದೆ.

ಉತ್ತರ ಸೆಂಟಿನೆಲ್ ದ್ವೀಪಕ್ಕೆ ಪರವಾನಗಿ ಇಲ್ಲದೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಸೆಂಟಿನೆಲೀಸ್ ಬುಡಕಟ್ಟು ಜನಾಂಗದ ಈ ಸಮುದಾಯದ ಜನಸಂಖ್ಯೆ 2011 ರಲ್ಲಿ ಸುಮಾರು 40 ರಷ್ಟು ಇತ್ತು. ಈ ಸಮುದಾಯವು ಹೊರಗಿನವರೊಂದಿಗೆ ಸಂಪರ್ಕವನ್ನು ವಿರೋಧಿಸುತ್ತಾರೆ.

ಆರೋಪಿ ಪಾಲಿಯಕೋವ್ ಮಾರ್ಚ್ 26 ರಂದು ಪೋರ್ಟ್ ಬ್ಲೇರ್‌ಗೆ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಶನಿವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಕುರ್ಮದೇರಾ ಬೀಚ್‌ನಿಂದ ಕೊಬ್ಬರಿ ಮತ್ತು ಕೋಕಾ-ಕೋಲಾ ಪಾನೀಯದ ಡಬ್ಬಿಯನ್ನು ತೆಗೆದುಕೊಂಡು “ಸೆಂಟಿನೆಲೀಸ್‌ಗೆ ಅರ್ಪಣೆ” ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೋಲಿಯಕೋವ್ ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಉತ್ತರ ಸೆಂಟಿನೆಲ್ ದ್ವೀಪದ ಈಶಾನ್ಯ ತೀರವನ್ನು ತಲುಪಿ ಒಂದು ಗಂಟೆ ಕಡಲಾಚೆಯಲ್ಲಿಯೇ ಇದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲಿ ಅವರು ತಿರುಗಾಡಿ ಶಿಳ್ಳೆ ಹೊಡೆದರೂ ಯಾರೊಬ್ಬರನ್ನೂ ನೋಡಲಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ನಂತರ, ಪೋಲಿಯಕೋವ್ ಸುಮಾರು ಐದು ನಿಮಿಷಗಳ ಕಾಲ ದಡಕ್ಕೆ ಇಳಿದು ತನ್ನೊಂದಿಗೆ ತಂದಿದ್ದ ಕಾಣಿಕೆಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅವರು ಮರಳಿನ ಮಾದರಿಗಳನ್ನು ಸಂಗ್ರಹಿಸಿ ವೀಡಿಯೊ ರೆಕಾರ್ಡ್ ಮಾಡಿ ತಮ್ಮ ದೋಣಿಗೆ ಹಿಂತಿರುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುರ್ಮದೇರಾ ಬೀಚ್‌ಗೆ ಹಿಂತಿರುಗುವ ಪ್ರಯಾಣವನ್ನು ಪ್ರಾರಂಭಿಸಿದ್ದ ಅವರು ಸಂಜೆ 7 ಗಂಟೆಗೆ ತಲುಪಿದ್ದರು. ಈ ವೇಳೆ ಮೀನುಗಾರರು ಅವರನ್ನು ನೋಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಯಕೋವ್ ಶನಿವಾರ ಕುರ್ಮದೇರಾ ಬೀಚ್ ಬಳಿ ಸಣ್ಣ ಎಂಜಿನ್ ಹೊಂದಿದ ಗಾಳಿ ತುಂಬಬಹುದಾದ ಏಕ ಆಸನದ ದೋಣಿಯೊಂದಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅವರ ಬಗ್ಗೆ ಮತ್ತು ಮೀಸಲು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡುವ ಅವರ ಉದ್ದೇಶದ ಬಗ್ಗೆ ನಮಗೆ ಹೆಚ್ಚಿನ ವಿವರಗಳು ಸಿಗುತ್ತಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅವರು ತಂಗಿದ್ದಾಗ ಅವರು ಬೇರೆ ಎಲ್ಲಿಗೆ ಭೇಟಿ ನೀಡಿದ್ದರು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ.” ಎಂದು ಪೊಲೀಸ್ ಮಹಾನಿರ್ದೇಶಕ ಎಚ್‌ಎಸ್ ಧಲಿವಾಲ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಪೋರ್ಟ್ ಬ್ಲೇರ್‌ನಲ್ಲಿರುವ ಹೋಟೆಲ್ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಧಲಿವಾಲ್ ಹೇಳಿದ್ದಾರೆ. ಪಾಲಿಯಕೋವ್ ಅವರ ಬಳಿ ದೊರೆತ ಕ್ಯಾಮೆರಾ ದೃಶ್ಯಾವಳಿಗಳು ಅವರು ಉತ್ತರ ಸೆಂಟಿನೆಲ್ ದ್ವೀಪದಲ್ಲಿ ಇಳಿದಿರುವುದನ್ನು ತೋರಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೂಲನಿವಾಸಿ ಬುಡಕಟ್ಟುಗಳ ರಕ್ಷಣೆ ತಿದ್ದುಪಡಿ ನಿಯಂತ್ರಣ, 2012 ರ ವಿಭಾಗಗಳೊಂದಿಗೆ ವಿದೇಶಿಯರ ಕಾಯ್ದೆ, 1946 ರ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತಿರೂರ್‌ನ ಬುಡಕಟ್ಟು ಕಲ್ಯಾಣ ಅಧಿಕಾರಿ ಪ್ರೋಣಬ್ ಸಿರ್ಕಾರ್ ಅವರು ಓಗ್ರಬ್ರಾಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅಂಡಮಾನ್ ನಿಕೋಬಾರ್‌ನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...