Homeಮುಖಪುಟವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

- Advertisement -
- Advertisement -

ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ (ಏ.2) ಲೋಕಸಭೆಯಲ್ಲಿ ಅಂಗೀಕಾರಗೊಂಡ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಮಸೂದೆ ಕುರಿತ ಚರ್ಚೆಯ ವೇಳೆ ಮೊದಲು ಮಾತನಾಡಿದ ಕಾಂಗ್ರೆಸ್ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಮಸೂದೆಯನ್ನು ಮುಸ್ಲಿಂ ವಿರೋಧಿ ಎಂದು ಕರೆದರು ಮತ್ತು ಬಿಜೆಪಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು ಇದನ್ನು ಬಳಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ದೇಶವನ್ನು ದಾರಿ ತಪ್ಪಿಸುತ್ತಿದೆ. ವಕ್ಫ್‌ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) ವಿರೋಧ ಪಕ್ಷಗಳ ಸದಸ್ಯರ ಯಾವುದೇ ಶಿಫಾರಸುಗಳನ್ನು ಅಂಗೀಕರಿಸಿಲ್ಲ. ಸಂಸತ್ತಿನ ಮೂಲಕ ಮಸೂದೆ ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದರು.

ವಕ್ಫ್ ಮಸೂದೆಯ ಮೂಲಕ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರವು ವಕ್ಫ್ ಸಂಸ್ಥೆಗಳ ಮೇಲೆ ಕಣ್ಣಿಡಲು ಅಥವಾ ಅವುಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಲು ಉದ್ದೇಶಿಸಿದೆಯೇ? ಎಂದು ಪ್ರಶ್ನಿಸಿದರು.

ವಕ್ಫ್ ಆಸ್ತಿ ಎಂದು ಹೇಳಿಕೊಂಡರೆ ಅದಕ್ಕೆ ದಾಖಲೆ ಒದಗಿಸಬೇಕು ಎಂಬ ಮಸೂದೆಯ ನಿಯಮವನ್ನು ಟೀಕಿಸಿದ ನಾಸಿರ್ ಹುಸೇನ್, “ದೇವಾಲಯಗಳು ಮತ್ತು ಗುರುದ್ವಾರಗಳಂತೆ ಮುಸ್ಲಿಮರ ಪ್ರಾಚೀನ ಧಾರ್ಮಿಕ ಸ್ಥಳಗಳು ‘ಬಳಕೆದಾರರಿಂದ ವಕ್ಫ್’ ಆಗಿ (Wakf By User)ಅಸ್ತಿತ್ವದಲ್ಲಿವೆ. ಅಂತಹ ಐತಿಹಾಸಿಕ ಸ್ಥಳಗಳಿಂದ ಸರ್ಕಾರ ದಾಖಲೆ ಭಯಸುತ್ತಿರುವುದು ಏಕೆ? ಎಂದು ಕೇಳಿದರು.

ಮಸೂದೆಯನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಕಳೆದ ಆರು ತಿಂಗಳಿನಿಂದ ತಪ್ಪು ಮಾಹಿತಿಯ ಅಭಿಯಾನ ನಡೆಸುತ್ತಿದೆ. ಆಡಳಿತ ಪಕ್ಷವು ಮೊದಲು ಕೋಮು ಧ್ರುವೀಕರಣದಲ್ಲಿ ತೊಡಗುತ್ತದೆ, ನಂತರ ವಿರೋಧ ಪಕ್ಷವು ಆ ರೀತಿ ಮಾಡುತ್ತಿದೆ ಎಂದು ಆರೋಪಿಸುತ್ತದೆ ಎಂದು ನಾಸಿರ್ ಹುಸೇನ್ ಹೇಳಿದರು.

ಸರ್ಕಾರ ಚುನಾವಣಾ ಲಾಭಕ್ಕಾಗಿ ವಿವಾದಗಳನ್ನು ಸೃಷ್ಟಿಸಲು ಮತ್ತು ಗಲಭೆಗಳನ್ನು ಪ್ರಚೋದಿಸಲು ನೆಪಗಳನ್ನು ಹುಡುಕುತ್ತಿದೆ. ಮುಸ್ಲಿಂ ಸಮುದಾಯ ತನ್ನದೇ ಸಂಸ್ಥೆಗಳನ್ನು ನಡೆಸುತ್ತಿರುವ ಬಗ್ಗೆ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ವಕ್ಫ್‌ ತಿದ್ದುಪಡಿ ಮಸೂದೆಯು ಅನ್ಯಾಯದ ಕ್ರಮವಾಗಿದೆ. ಇದು ನಿರ್ದಿಷ್ಟವಾಗಿ ಮುಸ್ಲಿಮರನ್ನು ಗುರಿಯಾಗಿರಿಸಿಕೊಂಡಿದೆ ಎಂದರು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...