Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

- Advertisement -
- Advertisement -

ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷ ಯೂನ್ ಸುಕ್‌ ಯೋಲ್ ಅವರನ್ನು ಸಾಂವಿಧಾನಿಕ ನ್ಯಾಯಾಲಯ ಶುಕ್ರವಾರ (ಏ.3) ಅಧಿಕಾರದಿಂದ ವಜಾಗೊಳಿಸಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ತಲೆದೋರಿದ್ದ ರಾಜಕೀಯ ಅಸ್ಥಿರತೆಗೆ ಅಂತ್ಯ ಹಾಡಿದೆ.

ಎಂಟು ನ್ಯಾಯಮೂರ್ತಿಗಳಲ್ಲಿ ಆರು ಮಂದಿ ಯೂನ್ ಅವರ ಪದಚ್ಯುತಿ ಪರವಾಗಿ ತೀರ್ಪು ನೀಡಿದ್ದಾರೆ. ಆದ್ದರಿಂದ ಅವರು ಅಧಿಕಾರದಿಂದ ವಜಾಗೊಂಡಿದ್ದಾರೆ ಎಂದು ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿರುವುದು ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಗಂಭೀರ ಋಣಾತ್ಮಕ ಪರಿಣಾಮ ಬೀರಿದೆ. ಯೂನ್ ಅವರು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೂಕ್ತವೆನಿಸುತ್ತದೆ” ಎಂದು ತೀರ್ಪು ಪ್ರಕಟಿಸುವಾಗ ನ್ಯಾಯಾಲಯದ ಹಂಗಾಮಿ ಮುಖ್ಯಸ್ಥ ಮೂನ್ ಹ್ಯುಂಗ್-ಬೇ ಹೇಳಿದ್ದಾರೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಿ, ಶಾಸಕಾಂಗದ ಆಡಳಿತ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ. ಇದಕ್ಕಾಗಿ ಮಿಲಿಟರಿ ಮತ್ತು ಪೊಲೀಸ್ ಬಲ ಪ್ರಯೋಗಿಸಿ ಸಂವಿಧಾನ ಉಲ್ಲಂಘಿಸಿದ್ದಾರೆ. ತುರ್ತು ಮಿಲಿಟರಿ ಆಡಳಿತ ಹೇರುವ ಮೂಲಭೂತ ನಿಯಮಗಳನ್ನು ಅವರು ಪಾಲಿಸಿಲ್ಲ” ಎಂದಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ಕಳೆದ ನಾಲ್ಕು ತಿಂಗಳಿನಿಂದ ತಲೆದ್ದೋರಿದ್ದ ರಾಜಕೀಯ ಅಸ್ಥಿರತೆ ಕೊನೆಗೊಂಡಿದೆ. ಮುಂದಿನ ಎರಡು ತಿಂಗಳ ಒಳಗೆ ಅಧ್ಯಕ್ಷೀಯ ಚುನಾವಣೆ ನಡೆಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ.

ನ್ಯಾಯಾಲಯದ ಆದೇಶ ದಕ್ಷಿಣ ಕೊರಿಯಾದಲ್ಲಿ ಮಹತ್ವದ ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ನ್ಯಾಯಯುತ ರೀತಿಯಲ್ಲಿ ಹೊಸ ಅಧ್ಯಕ್ಷರ ಆಯ್ಕೆಯೂ ನಡೆಯಬಹುದು. ಆದರೆ, ಮತ್ತೊಂದೆಡೆ ಯೂನ್ ಅವರ ಬೆಂಬಲಿಗರು ತಿರುಗಿ ಬೀಳುವ ಸಾಧ್ಯತೆಯೂ ಇದೆ. ಯೂನ್ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದೂ ಕಾದು ನೋಡಬೇಕಿದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ದೇಶದಲ್ಲಿ ಮಿಲಿಟರಿ ಕಣ್ಗಾವಲು ಹೆಚ್ಚಿಸಲಾಗಿದೆ.

“ಜನರು ಶಾಂತವಾಗಿರಬೇಕು, ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾರೂ ಉದ್ವೇಗಕ್ಕೆ ಒಳಗಾಗಬಾರದು” ಎಂದು ಹಂಗಾಮಿ ಅಧ್ಯಕ್ಷ ಹಾನ್ ಡಕ್-ಸೂ ಮನವಿ ಮಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೂ ಮುನ್ನ ಸಚಿವ ಸಂಪುಟದ ಸಭೆ ನಡೆಸಿದ ಅವರು, ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ರಾಜಕಾರಣಿಗಳು ಅಶಾಂತಿ ಉಂಟು ಮಾಡಬಹುದಾದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಯಾವುದೇ ಕಾನೂನುಬಾಹಿರ, ಹಿಂಸಾತ್ಮಕ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಕೃತ್ಯವೆಸಗುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಯೂನ್ ಸುಕ್ ಯೋಲ್ ಅಧಿಕಾರ ಕಳೆದುಕೊಂಡಿದ್ದೇಕೆ?

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಯೂನ್ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿತ್ತು. ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಯೂನ್ ಅದನ್ನು ಕಡೆಗಣಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಅವರ ಬಂಧನಕ್ಕೆ ಮನೆ ಬಳಿಗೆ ಹೋದಾಗ, ಬೆಂಬಲಿಗರು ಹೈಡ್ರಾಮ ಸೃಷ್ಟಿಸಿ ಬಂಧನಕ್ಕೆ ಅಡ್ಡಿಪಡಿಸಿದ್ದರು.

ಕೊನೆಗೆ, 2025ರ ಜನವರಿ 15ರಂದು ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋನ್ ಅವರ ಮನೆಯಯನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು.

ಶುಕ್ರವಾರ ನ್ಯಾಯಾಲಯದ ತೀರ್ಪು ಹೊರ ಬೀಳುವ ಹೊತ್ತಿಗೆ ಯೂನ್ ಅವರ ಸಾವಿರಾರು ಬೆಂಬಲಿಗರು ಸಿಯೋಲ್‌ನ ಡೌನ್‌ಟೌನ್‌ನಲ್ಲಿ ಜಮಾಯಿಸಿದ್ದರು. ಸಂಭಾವ್ಯ ಘರ್ಷಣೆಗಳನ್ನು ತಡೆಗಟ್ಟಲು ಸರ್ಕಾರ ನೂರಾರು ಪೊಲೀಸ್ ಬಸ್‌ಗಳು, ಬ್ಯಾರಿಕೇಡ್‌ಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಿತ್ತು.

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...