Homeಮುಖಪುಟ'ಖುಷಿಯಿದೆ, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸುವ ನಿರೀಕ್ಷೆಯಿಲ್ಲ': ಕಪಿಲ್ ಮಿಶ್ರಾ ವಿರುದ್ಧ ಕಾನೂನು ಸಮರ ಗೆದ್ದ...

‘ಖುಷಿಯಿದೆ, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸುವ ನಿರೀಕ್ಷೆಯಿಲ್ಲ’: ಕಪಿಲ್ ಮಿಶ್ರಾ ವಿರುದ್ಧ ಕಾನೂನು ಸಮರ ಗೆದ್ದ ಮೊಹಮ್ಮದ್ ಇಲ್ಯಾಸ್

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಚಿವ ಹಾಗೂ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಇತರರ ಪಾತ್ರ ಇರುವ ಬಗ್ಗೆ ಎಫ್‌ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲು ದೆಹಲಿ ನ್ಯಾಯಾಲಯ ಮಂಗಳವಾರ (ಏ.1) ನಿರ್ದೇಶಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ, ಪ್ರಕರಣದ ಅರ್ಜಿದಾರ ದೆಹಲಿಯ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ‘ಮಿಶ್ರ ಭಾವನೆ’ ವ್ಯಕ್ತಪಡಿಸಿದ್ದಾರೆ ಎಂದು scroll.in ವರದಿ ಮಾಡಿದೆ.

“ನ್ಯಾಯಾಲಯದ ಆದೇಶ ನನಗೆ ಖುಷಿ ಕೊಟ್ಟಿದೆ, ನಾನು ನಿರಾಳನಾಗಿದ್ದೇನೆ. ನ್ಯಾಯಾಲಯ ನನ್ನ ಅರ್ಜಿಯನ್ನು ತಿರಸ್ಕರಿಸಬಹುದು, ಕಪಿಲ್ ಮಿಶ್ರಾ ವಿರುದ್ದ ಎಫ್‌ಐಆರ್ ದಾಖಲಿಸಲು ಆದೇಶಿಸುವ ಸಾಧ್ಯತೆ ಇಲ್ಲ ಎಂಬ ಆತಂಕ ಕೆಲ ದಿನಗಳ ಹಿಂದೆ ನನಗೆ ಇತ್ತು” ಎಂದು ಸುದೀರ್ಘ ಅವಧಿಯ ಕಾನೂನು ಸಮರದಲ್ಲಿ ಗೆದ್ದ 57 ವರ್ಷದ ಇಲ್ಯಾಸ್ ಹೇಳಿದ್ದಾರೆ.

ನ್ಯಾಯಾಲಯದ ಆದೇಶ ಇದ್ದರೂ, ದೆಹಲಿ ಪೊಲೀಸರು ಕಪಿಲ್ ಮಿಶ್ರಾ ವಿರುದ್ದ ಎಫ್‌ಐಆರ್ ದಾಖಲಿಸುವ ನಿರೀಕ್ಷೆ ನನಗಿಲ್ಲ ಎಂದು ಇಲ್ಯಾಸ್ ನಿರಾಸೆಯ ಮಾತುಗಳನ್ನಾಡಿದ್ದಾರೆ. ಅವರ ವಕೀಲ ಮೆಹಮೂದ್ ಪ್ರಾಚಾ ಕೂಡ, ದೆಹಲಿ ಪೊಲೀಸರು ಮತ್ತು ಕಪಿಲ್ ಮಿಶ್ರಾ ಹೈಕೋರ್ಟ್‌ಗೆ ಹೋಗಿ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ತರುವ ಸಾಧ್ಯತೆ ಇದೆ ಎಂಬುವುದಾಗಿ ಹೇಳಿದ್ದಾರೆ ಎಂದು scroll.in ವಿವರಿಸಿದೆ.

“ಪೊಲೀಸರು ಖಂಡಿತವಾಗಿಯೂ ಎಫ್‌ಐಆರ್ ದಾಖಲಿಸಲು ತಡ ಮಾಡುತ್ತಾರೆ. ಅವರಿಗೆ ಕಪಿಲ್ ಮಿಶ್ರಾ ಮೇಲೆ ಕ್ರಮ ಕೈಗೊಳ್ಳುವ ಆಸಕ್ತಿ ಇದ್ದಿದ್ದರೆ, 2020ರಲ್ಲಿ ನಾನು ದೂರು ಕೊಟ್ಟಾಗಲೇ ಎಫ್‌ಐಆರ್ ದಾಖಲಿಸಬೇಕಿತ್ತು” ಎಂದು ಇಲ್ಯಾಸ್ ಹೇಳಿದ್ದಾರೆ.

“ನ್ಯಾಯಾಲಯದ ಆದೇಶ ಹೊರಬಿದ್ದ ಬಳಿಕ ಎಫ್‌ಐಆರ್ ದಾಖಲಿಸುವ ಬಗ್ಗೆ ಪೊಲೀಸರು ನನ್ನನ್ನು ಸಂಪರ್ಕಿಸಿಲ್ಲ. ಇದುವರೆಗೆ ಎಫ್‌ಐಆರ್ ದಾಖಲಿಸಿಯೂ ಇಲ್ಲ” ಎಂದು ಇಲ್ಯಾಸ್ ಹೇಳಿದ್ದಾಗಿ ಏಪ್ರಿಲ್ 2ರಂದು ಪ್ರಕಟಿಸಿದ ವರದಿಯಲ್ಲಿ scroll.in ತಿಳಿಸಿದೆ.

ಐದು ವರ್ಷದ ಕಾನೂನು ಸಮರ

ಫೆಬ್ರವರಿ 23, 2020ರಂದು, ದೆಹಲಿಯ ಯಮುನಾ ವಿಹಾರದ ತನ್ನ ಮನೆ ಬಳಿಯ ಕರ್ದಮ್ ಪುರಿಯಲ್ಲಿ ರಸ್ತೆ ತಡೆ ನಡೆಸಿದ್ದ ಕಪಿಲ್ ಮಿಶ್ರಾ ಮತ್ತು ಆತನ ಸಹಚರರು, ಮುಸ್ಲಿಮರು ಮತ್ತು ದಲಿತರ ತಳ್ಳುಗಾಡಿಗಳನ್ನು ಮುರಿದು ಹಾಕಿದ್ದರು. ಈ ವೇಳೆ ಪೊಲೀಸರು ಅವರ ಜೊತೆಗಿದ್ದರು. ಆದರೂ ದುಷ್ಕೃತ್ಯವನ್ನು ತಡೆಯಲು ಮುಂದಾಗಲಿಲ್ಲ ಎಂಬುವುದು ಮೊಹಮ್ಮದ್ ಇಲ್ಯಾಸ್ ಅವರ ಮೂಲ ಆರೋಪವಾಗಿದೆ.

“ಗಲಭೆ ನಿಂತ ಬಳಿಕ ಕಪಿಲ್ ಮಿಶ್ರಾ ಮತ್ತು ಇತರರ ವಿರುದ್ಧ ದೂರು ನೀಡಿ, ಎಫ್‌ಐಆರ್ ದಾಖಲಿಸಲು ನಾನು ಪೊಲೀಸ್ ಠಾಣೆಗೆ ಹೋಗಿದ್ದೆ. ಆದರೆ, ಪೊಲೀಸರು ಮೂರು ಬಾರಿ ನನ್ನನ್ನು ವಾಪಸ್ ಕಳುಹಿಸಿದರು” ಎಂದು ಇಲ್ಯಾಸ್ ಆರೋಪಿಸಿದ್ದಾರೆ.

“ಭಾರತೀಯ ಕಾನೂನಿನ ಪ್ರಕಾರ, ಸಂಜ್ಞೇಯ ಅಪರಾಧದ (cognisable offence) ಆರೋಪದ ಮೇಲೆ ಮೌಖಿಕ ಅಥವಾ ಲಿಖಿತ ದೂರು ನೀಡಿದಾಗ, ಪೊಲೀಸರು ಎಫ್‌ಐಆರ್ ದಾಖಲಿಸಿ, ಆ ವಿಷಯದ ಬಗ್ಗೆ ತನಿಖೆ ನಡೆಸಬೇಕು.”

“ಸಂಜ್ಞೇಯ ಅಪರಾಧಗಳು ಸಾರ್ವಜನಿಕ ಸುರಕ್ಷತೆ ಅಥವಾ ಸುವ್ಯವಸ್ಥೆಗೆ ಧಕ್ಕೆ ತರುವ ಗಂಭೀರ ಅಪರಾಧಗಳಾಗಿವೆ. ಅಂತಹ ಆಪಾದಿತ ಅಪರಾಧಗಳಿಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆಯದೆ ಪ್ರಕರಣ ದಾಖಲಿಸಬಹುದು ಮತ್ತು ತಪ್ಪಿತಸ್ಥರನ್ನು ಬಂಧಿಸಬಹುದು. ಮಿಶ್ರಾ ವಿರುದ್ದ ಇಲ್ಯಾಸ್ ಮಾಡಿದ್ದು ಸಂಜ್ಞೇಯ ಅಪರಾಧದ ಆರೋಪವಾಗಿದೆ”

ನವೆಂಬರ್ 2020ರಲ್ಲಿ, ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಇಲ್ಯಾಸ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಬಹಳ ಮಂದಗತಿಯಲ್ಲಿ ಸಾಗುತ್ತಿತ್ತು.

ಕಾರ್ಕಾರ್ಡೂಮಾದ ಈಶಾನ್ಯ ಜಿಲ್ಲಾ ನ್ಯಾಯಾಲಯದಲ್ಲಿ ಏಳು ವಿಭಿನ್ನ ನ್ಯಾಯಾಧೀಶರ ಮುಂದೆ ಇಲ್ಯಾಸ್ ಅವರ ಅರ್ಜಿಯನ್ನು 24 ಬಾರಿ ಪಟ್ಟಿ ಮಾಡಲಾಗಿತ್ತು. ಕೊನೆಗೆ ಕಳೆದ ವರ್ಷ ಈ ನ್ಯಾಯಾಲಯವು ವಿಶೇಷ ಸಂಸದ/ಶಾಸಕರ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವಂತೆ ಇಲ್ಯಾಸ್ ಅವರಿಗೆ ನಿರ್ದೇಶಿಸಿತ್ತು.

ವಿಶೇಷ ನ್ಯಾಯಾಲಯದಲ್ಲೂ ಕೂಡ ಇಲ್ಯಾಸ್ ಅವರ ಅರ್ಜಿಯನ್ನು ಇಬ್ಬರು ವಿಭಿನ್ನ ನ್ಯಾಯಾಧೀಶರ ಮುಂದೆ 15 ಬಾರಿ ಪಟ್ಟಿ ಮಾಡಲಾಗಿತ್ತು. ಅಂತಿಮವಾಗಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಏಪ್ರಿಲ್ 1ರ ಮಂಗಳವಾರ ತನ್ನ ಆದೇಶ ಪ್ರಕಟಿಸಿದೆ.

“ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷ್ಯಗಳಿಂದ ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ” ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರು ಆದೇಶ ನೀಡುವಾಗ ಹೇಳಿದ್ದಾರೆ.

“ತೀರ್ಪು ಹೊರ ಬೀಳುವಾಗ ನಾನು ನ್ಯಾಯಾಲಯದಲ್ಲಿ ಇದ್ದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರು ನನ್ನನ್ನು ಮುಂದೆ ಕರೆದು ನನ್ನ ದೂರಿನ ವಿಶ್ವಾಸಾರ್ಹತೆ ತುಂಬಾ ಹೆಚ್ಚಿದೆ ಎಂದು ಹೇಳಿದ್ದಾರೆ. ಆ ಮಾತು ನನಗೆ ಬಹಳ ದೊಡ್ಡದು” ಎಂದು scroll.in ಇಲ್ಯಾಸ್ ಹೇಳಿಕೊಂಡಿದ್ದಾರೆ.

“ಕಾನೂನು ಸಮರದ ನಡುವೆ ನನ್ನನ್ನು ಹಲವು ಬಾರಿ ಭೇಟಿ ಮಾಡಿದ್ದ ಪೊಲೀಸರು, ಏಕೆ ಎಫ್‌ಐಆರ್ ದಾಖಲಿಸಲು ಹೋರಾಡುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಆದರೆ, ನಾನು ಅಪರಾಧವನ್ನು ಕಣ್ಣಾರೆ ನೋಡಿರುವಾಗ ಸುಮ್ಮನೆ ಕೂರಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪು ನನ್ನ ವಾದವನ್ನು ಎತ್ತಿ ಹಿಡಿದಿದೆ” ಎಂದಿದ್ದಾರೆ.

ಕುಟುಂಬಕ್ಕೆ ಕಿರುಕುಳ

“ಕಪಿಲ್ ಮಿಶ್ರಾ ವಿರುದ್ದ ಕಾನೂನು ಸಮರ ನಡೆಸುವಾಗ ನಾನು ಮತ್ತು ನನ್ನ ಕುಟುಂಬ ಹಲವು ಕಿರುಕುಳ, ಬೆದರಿಕೆಗಳನ್ನು ಎದುರಿಸಿದ್ದೇವೆ. ಅವುಗಳು ಹೆಚ್ಚಾಗಿ ಪೊಲೀಸರಿಂದ ಬರುತ್ತಿತ್ತು. ಗಲಭೆ ನಡೆದಾಗ ಡೆಹ್ರಾಡೂನ್‌ನಲ್ಲಿ ವಾಸಿಸುತ್ತಿದ್ದ ನನ್ನ ಇಬ್ಬರು ಕಿರಿಯ ಸಹೋದರರ ವಿರುದ್ಧ ದೆಹಲಿ ಪೊಲೀಸರು ಗಲಭೆಯ ಸಮಯದಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ನ ಕೊಲೆ ಪ್ರಯತ್ನ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದರು. ಕಪಿಲ್ ಮಿಶ್ರಾ ವಿರುದ್ದದ ನನ್ನ ಅರ್ಜಿಗೆ ಪೊಲೀಸರು ಈ ರೀತಿ ಪ್ರತೀಕಾರ ತೀರಿಸಿದ್ದರು”.

“ಪೊಲೀಸರು ಎಫ್‌ಐಆರ್ ದಾಖಲಿಸಿದ್ದರಿಂದ ವಿಚಾರಣೆಗೆ ಹಾಜರಾಗುವ ಸಲುವಾಗ ನನ್ನ ಸಹೋದರರು ಡೆಹ್ರಾಡೂನ್‌ನಲ್ಲಿದ್ದ ವ್ಯವಹಾರ ಬಿಟ್ಟು ದೆಹಲಿಗೆ ಬರಬೇಕಾಯಿತು. ಪೊಲೀಸರು ಈಗಲೂ ನಮ್ಮ ವಿರುದ್ದ ಏನಾದರು ಸುಳ್ಳು ಮೊಕದ್ದಮೆ ದಾಖಲಿಸಬಹುದು ಎಂದು ನನ್ನ ಸಹೋದರರು ಚಿಂತೆಯಲ್ಲಿದ್ದಾರೆ” ಎಂದು ಇಲ್ಯಾಸ್ ಹೇಳಿಕೊಂಡಿದ್ದಾರೆ.

“ಏನೇ ಅಡೆತಡೆಗಳು ಬಂದರೂ, ನಾನು ಕಾನೂನು ಸಮರ ಮುಂದುವರೆಸುತ್ತೇನೆ. ಏಪ್ರಿಲ್ ಒಂದರ ನ್ಯಾಯಾಲಯದ ಆದೇಶ ನನ್ನ ಜಯದ ಮೊದಲ ಹೆಜ್ಜೆ. ಗಲಭೆಯಲ್ಲಿ ಪಾಲ್ಗೊಂಡವರು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕು. ಅವರಿಗೆ ಶಿಕ್ಷೆಯಾಗಬೇಕು” ಎಂದು scroll.inಗೆ ಇಲ್ಯಾಸ್ ಹೇಳಿದ್ದಾರೆ.

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...