ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ ವಿರುದ್ಧ ಶುಕ್ರವಾರ (ಏ.4) ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸಿತು.
ಮಸೂದೆಯನ್ನು ಹಿಂಪಡೆಯಬೇಕೆಂದು ಪಕ್ಷ ಒತ್ತಾಯಿಸಿದ್ದು, ಅದು ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಹೇಳಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ್ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು, “ಅದು ಬಹುಸಂಖ್ಯಾತ ಮತ್ತು ವಿಭಜಕ ರಾಜಕೀಯದಲ್ಲಿ ತೊಡಗಿದೆ” ಎಂದು ಹೇಳಿದ್ದಾರೆ.
ವಕ್ಪ್ ತಿದ್ದುಪಡಿ ಮಸೂದೆ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಾಗಿದ್ದು, ಭಾರತದ ಜಾತ್ಯತೀತ ಮೌಲ್ಯಗಳ ಬಗ್ಗೆ ತೀವ್ರ ಕಳವಳ ಉಂಟು ಮಾಡಿದೆ ಎಂದಿದ್ದಾರೆ.
வக்பு திருத்த மசோதாவிற்கு எதிராக ஆவேசத்துடன் கொந்தளித்த த.வெ.க பெண் நிர்வாகி…!#Chennai | #TVK | #TVKProtest | #Vijay | #TamilagaVettriKazhagam | #NAnand | #WaqfBill | #PolimerNews pic.twitter.com/bAwtlO0ByJ
— Polimer News (@polimernews) April 4, 2025
ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ಹಿಂಪಡೆಯಬೇಕು ಎಂದು ವಿಜಯ್ ಆಗ್ರಹಿಸಿದ್ದಾರೆ. ನಮ್ಮ ಪಕ್ಷ ಮುಸ್ಲಿಂ ಸಮುದಾಯದೊಂದಿಗೆ ಸೇರಿಕೊಂಡು ವಕ್ಫ್ ಹಕ್ಕುಗಳನ್ನು ರಕ್ಷಿಸಲು ಕಾನೂನು ಹೋರಾಟಗಳನ್ನು ಮಾಡಲಿದೆ ಎಂದು ವಿಜಯ್ ಹೇಳಿದ್ದಾರೆ.
ಕೇರಳ, ಕರ್ನಾಟಕದ ಜೊತೆಗೆ ತಮಿಳುನಾಡು ವಿಧಾನಸಭೆ ಕೂಡ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಈಗಾಗಲೇ ನಿರ್ಣಯಗಳನ್ನು ಅಂಗೀಕರಿಸಿದೆ. ಟಿವಿಕೆ ತನ್ನ ಇತ್ತೀಚಿನ ಸಾಮಾನ್ಯ ಮಂಡಳಿ ಸಭೆಯಲ್ಲಿ, ಮಸೂದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದೆ ಎಂದು ತಿಳಿಸಿದ್ದಾರೆ.
ವಕ್ಫ್ ಮಸೂದೆ: ವಕ್ಫ್ ಆಸ್ತಿಯನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಪಿತೂರಿ; ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ


